ಮಹಾರಾಷ್ಟ್ರದ ಪಾಲ್‌ಘರ್‌ನಲ್ಲಿ ಭೀಕರ ಅಪಘಾತ; 6 ಸಾವು, 45 ಮಂದಿಗೆ ಗಾಯ

ಮಹಾರಾಷ್ಟ್ರದ ನಾಸಿಕ್ ನಿಂದ ಪಾಲ್‌ಘರ್‌ ಮಾರ್ಗವಾಗಿ ಹೊರಟಿದ್ದ ಖಾಸಗಿ ಬಸ್ ಅಪಘಾತದಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. 

Last Updated : Mar 24, 2019, 06:54 PM IST
ಮಹಾರಾಷ್ಟ್ರದ ಪಾಲ್‌ಘರ್‌ನಲ್ಲಿ ಭೀಕರ ಅಪಘಾತ; 6 ಸಾವು, 45 ಮಂದಿಗೆ ಗಾಯ title=

ಪಾಲ್‌ಘರ್‌: ಮಹಾರಾಷ್ಟ್ರದ ಪಾಲ್‌ಘರ್‌ ಬಳಿ ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಬಿದ್ದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 45 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಾಲ್‌ಘರ್‌ನ ಮೋಖದಾ ಮತ್ತು ತ್ರೈಂಬಕೇಶ್ವರ್ ಗ್ರಾಮಗಳ ನಡುವಿನ ಘಾಟ್ನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಪರಿಣಾಮ ಅಪಘಾತ ಸಂಭವಿಸಿದೆ. ಥಾಣೆ ಪ್ರದೇಶ ವಿಪತ್ತು ನಿರ್ವಹಣಾ ಕೇಂದ್ರದ ಮುಖ್ಯಸ್ಥ ಸಂತೋಷ್ ಕದಂ ಈ ಬಗ್ಗೆ ಮಾಹಿತಿ ನೀಡಿದ್ದು, ಭಾನುವಾರ ಮಧ್ಯಾಹ್ನ 2.45ರ ಸಮಯದಲ್ಲಿ ಅಪಘಾತ ಸಂಭವಿಸಿದೆ ಎಂದಿದ್ದಾರೆ.

ಮಹಾರಾಷ್ಟ್ರದ ನಾಸಿಕ್ ನಿಂದ ಪಾಲ್‌ಘರ್‌ ಮಾರ್ಗವಾಗಿ ಹೊರಟಿದ್ದ ಖಾಸಗಿ ಬಸ್ ಅಪಘಾತದಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ. 

Trending News