ಕೊರೊನಾ ಸಂಕಷ್ಟದ ಹಿನ್ನೆಲೆ ಇಂದು ಯೋಗಕ್ಕೆ ಮೊದಲಿಗಿಂತಲೂ ಹೆಚ್ಚಿನ ಮಹತ್ವ ಬಂದಿದೆ: ಮೋದಿ

ಇಂದು ಇಡೀ ವಿಶ್ವ ಆರನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತಿದೆ. ಯೋಗ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಶುಭಾಷಯಗಳನ್ನು ಕೋರಿದ್ದಾರೆ.

Last Updated : Jun 21, 2020, 11:29 AM IST
ಕೊರೊನಾ ಸಂಕಷ್ಟದ ಹಿನ್ನೆಲೆ ಇಂದು ಯೋಗಕ್ಕೆ ಮೊದಲಿಗಿಂತಲೂ ಹೆಚ್ಚಿನ ಮಹತ್ವ ಬಂದಿದೆ: ಮೋದಿ title=

ನವದೆಹಲಿ:ಇಂದು ಇಡೀ ವಿಶ್ವ ಆರನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತಿದೆ. ಯೋಗ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಶುಭಾಷಯಗಳನ್ನು ಕೋರಿದ್ದಾರೆ. ಈ ಸಂದರ್ಭದಲ್ಲಿ  ಪಿಎಂ ಮೋದಿ ರಾಷ್ಟ್ರಕ್ಕೆ ಸಂದೇಶ ನೀಡಿ, ಇತರೆ ಅನೇಕ ವಿಷಯಗಳ ಮೇಲೆ ಬೆಳಕು ಚೆಲ್ಲಿದ್ದಾರೆ. ಇದು ಭಾವನಾತ್ಮಕ ಯೋಗ ದಿನವೂ ಆಗಿದೆ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ವಿಶ್ವದ ಇನ್ನೂರಕ್ಕೂ ಅಧಿಕ ದೇಶಗಳು ಯೋಗ ದಿನವನ್ನು ಆಚರಿಸುತ್ತಿವೆ ಎಂದಿದ್ದಾರೆ. ಸದ್ಯ ಇಡೀ ವಿಶ್ವಾದ್ಯಂತ ಕೊರೊನಾ ವೈರಸ್ ಪ್ರಕೋಪ ಪಸರಿಸಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನವನ್ನು 'ಮನೆಯಲ್ಲಿ ಯೋಗ ಹಾಗೂ ಕುಟುಂಬ ಸದಸ್ಯರೊಂದಿಗೆ ಯೋಗ' ಎಂಬ ಥೀಮ್ ಅಡಿ ಆಚರಿಸಲಾಗುತ್ತಿದೆ.

ಕರೋನಾ ಬಿಕ್ಕಟ್ಟಿನಿಂದಾಗಿ, ಈಗ ಜಗತ್ತು ಯೋಗಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ ಎಂದು ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ಯೋಗದ ಮೂಲಕ ಮಾತ್ರ ನಾವು ಸ್ವಯಂ ನಿಯಂತ್ರಣ ಮತ್ತು ಮನಸ್ಸಿನ ಶಾಂತಿಯನ್ನು ಕಂಡುಕೊಳ್ಳಬಹುದು  ಎಂದು ಪಿಎಂ ಮೋದಿ ಹೇಳಿದ್ದಾರೆ.

ಕರೋನಾ ವೈರಸ್ ವಿರುದ್ಧ ಹೋರಾಡಲು ನಮ್ಮ ರೋಗನಿರೋಧಕ ಶಕ್ತಿ ಉತ್ತಮವಾಗಿರಬೇಕು ಮತ್ತು ಅದನ್ನು ಹೆಚ್ಚಿಸುವ ಉತ್ತಮ ಮಾರ್ಗವೆಂದರೆ ಯೋಗ ಮಾಡುವುದು ಎಂದು ಪ್ರಧಾನಿ ಹೇಳಿದ್ದಾರೆ. ಜೊತೆಗೆ ಯೋಗದಿಂದ ನಾವು ಶಾಂತಿ ಪಡೆಯುತ್ತೇವೆ ಎಂದು ಹೇಳಿದ್ದಾರೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಯೋಗ ಬಹಳ ಮುಖ್ಯ ಎಂದು ಪ್ರಧಾನಿ ಹೇಳಿದ್ದಾರೆ. ಕರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಜನರ ಯೋಗದ ಬಾಂಧವ್ಯ ಹೆಚ್ಚಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಮನೆಯಲ್ಲಿನ ಪ್ರತಿಯೊಬ್ಬ ಸದಸ್ಯ ಯೋಗದ ಮೂಲಕ ಒಂದುಗೂಡಿ ಯೋಗ ಮಾಡಿದಾಗ ಅದರ ಸಕಾರಾತ್ಮಕ ಉರ್ಜೆ ಮನೆಯಲ್ಲಿ ಹರಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Trending News