ಮಿನಿಬಸ್-ಲಾರಿ ಮುಖಾಮುಖಿ ಡಿಕ್ಕಿ; 7 ಸಾವು, 9 ಮಂದಿಗೆ ಗಂಭೀರ ಗಾಯ

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 42ರ ಬಳಿಯ ತನಕಲ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.

Last Updated : Apr 12, 2019, 03:53 PM IST
ಮಿನಿಬಸ್-ಲಾರಿ ಮುಖಾಮುಖಿ ಡಿಕ್ಕಿ; 7 ಸಾವು, 9 ಮಂದಿಗೆ ಗಂಭೀರ ಗಾಯ title=
Pic Courtesy: ANI

ಅನಂತಪುರ: ಮಿನಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. 

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 42ರ ಬಳಿಯ ತನಕಲ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು,  ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. 

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Trending News