ಏಳನೇ ವೇತನ ಆಯೋಗ: ಕೇಂದ್ರ ಸರ್ಕಾರದ ಈ ನೌಕರರಿಗೆ ಸಿಗಲಿದೆ ಎರಿಯರ್ಸ್ ಲಾಭ

ಏಳನೇ ವೇತನ ಆಯೋಗದ ಶಿಫಾರಸುಗಳು ಸರ್ಕಾರಿ ಮತ್ತು ಅನುದಾನಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿನ ಬೋಧಕರು ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸೇರಿದ ಇತರ ಸಿಬ್ಬಂದಿಗಳಿಗೂ ಅನ್ವಯವಾಗಬೇಕು ಎಂಬ ಪ್ರಸ್ತಾಪಕ್ಕೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಮಂಗಳವಾರ ಅನುಮೋದನೆ ನೀಡಿದೆ. 

Last Updated : Jan 16, 2019, 07:49 AM IST
ಏಳನೇ ವೇತನ ಆಯೋಗ: ಕೇಂದ್ರ ಸರ್ಕಾರದ ಈ ನೌಕರರಿಗೆ ಸಿಗಲಿದೆ ಎರಿಯರ್ಸ್ ಲಾಭ title=

ನವದೆಹಲಿ: ದೇಶದ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರು, ಶಿಕ್ಷಕರು, ಸಿಬ್ಬಂದಿ ಮತ್ತು ತಾಂತ್ರಿಕ ಸಂಸ್ಥೆಗಳ ಉದ್ಯೋಗಿಗಳಿಗೆ 7 ನೇ ವೇತನ ಆಯೋಗದಡಿಯಲ್ಲಿ ಎರಿಯರ್ಸ್ ಅಥವಾ ಹಿಂಬಾಕಿ ಸಂಬಳದ ಲಾಭವನ್ನು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಏಳನೇ ವೇತನ ಆಯೋಗದ ಶಿಫಾರಸಿನ ಅನುಷ್ಠಾನಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರಿ ನೌಕರರು ಹಲವು ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆಗೆ ಶೀಘ್ರದಲ್ಲಿಯೇ ಪ್ರತಿಫಲ ದೊರೆಯಲಿದೆ.

ಏಳನೇ ವೇತನ ಆಯೋಗದ ಶಿಫಾರಸುಗಳು ಸರ್ಕಾರಿ ಮತ್ತು ಅನುದಾನಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿನ ಬೋಧಕರು ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸೇರಿದ ಇತರ ಸಿಬ್ಬಂದಿಗಳಿಗೂ ಅನ್ವಯವಾಗಬೇಕು ಎಂಬ ಪ್ರಸ್ತಾಪಕ್ಕೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಮಂಗಳವಾರ ಅನುಮೋದನೆ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರದ ಅನುದಾನದಡಿ ಕಾರ್ಯನಿರ್ವಹಿಸುತ್ತಿರುವ 29,264 ಶಿಕ್ಷಕರು ಮತ್ತು ಇತರ ಸಿಬ್ಬಂದಿ ಪ್ರಯೋಜನ ಪಡೆಯಲಿದ್ದಾರೆ. ಇದರಿಂದಾಗಿ ಕೇಂದ್ರ ಸರ್ಕಾರ 1,241 ಕೋಟಿ ರೂ. ಹೆಚ್ಚುವರಿ ವೆಚ್ಚ ಮಾಡಲಿದೆ.

ಶಿಕ್ಷಕರಿಗೆ ಈ ಪ್ರಯೋಜನ ನೀಡುವುದಷ್ಟೇ ಅಲ್ಲದೆ, ಕೇಂದ್ರ ಸರ್ಕಾರಿ ನೌಕರರಿಗೆ ಹಿಂಬಾಕಿ ಸಂಬಳ ನೀಡುವ ಶಿಕ್ಷಣ ಸಂಸ್ಥೆಗಳಿಗೂ ಪರಿಹಾರ ನೀಡಿದೆ. ದಿನಾಂಕ 1.1.2016 ರಿಂದ 31.3.2019 ರವರ ಅವಧಿಯಲ್ಲಿ ಶಿಕ್ಷಣ ಸಂಸ್ಥೆಗಳು ಎರಿಯರ್ಸ್'ಗಾಗಿ ಮಾಡಿರುವ ವೆಚ್ಚದಲ್ಲಿ ಶೇ.50 ಭಾಗವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ. 

Trending News