ಕೇರಳದ 7 ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ, ಶಿಕ್ಷಕನ ಮೇಲೆ ಅತ್ಯಾಚಾರದ ಆರೋಪ

 ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 12 ವರ್ಷದ ಬಾಲಕಿ ಮೇಲೆ ಶಾಲಾ ಶಿಕ್ಷಕ ಅತ್ಯಾಚಾರ ಎಸಗಿದ್ದರಿಂದಾಗಿ 7ನೇ ತರಗತಿ ವಿದ್ಯಾರ್ಥಿನಿ ಈಗ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ. 

Last Updated : Aug 25, 2019, 07:03 PM IST
ಕೇರಳದ 7 ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ, ಶಿಕ್ಷಕನ ಮೇಲೆ ಅತ್ಯಾಚಾರದ ಆರೋಪ   title=
ಸಾಂದರ್ಭಿಕ ಚಿತ್ರ

ನವದೆಹಲಿ:  ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 12 ವರ್ಷದ ಬಾಲಕಿ ಮೇಲೆ ಶಾಲಾ ಶಿಕ್ಷಕ ಅತ್ಯಾಚಾರ ಎಸಗಿದ್ದರಿಂದಾಗಿ 7ನೇ ತರಗತಿ ವಿದ್ಯಾರ್ಥಿನಿ ಈಗ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ. 

ಅತ್ಯಾಚಾರ ಎಸರಗಿರುವ ಶಿಕ್ಷಕನು ಸುಮಾರು 30 ವರ್ಷದ ಹರೆಯ ಎಂದು ತಿಳಿದುಬಂದಿದ್ದು, ಈಗ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವೈದಕೀಯ ತಪಾಸಣೆಗಾಗಿ ಆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಈ ವಿಷಯದ ಬಗ್ಗೆ ತಿಳಿದುಬಂದಿದೆ ಎನ್ನಲಾಗಿದೆ.

"ಸುಮಾರು ಎರಡು ತಿಂಗಳಿನಿಂದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರಕ್ಕೆ ಎಸಗಲಾಗಿದೆ. ಆದರೆ ಕುಟುಂಬಕ್ಕೆ ಇದರ ಬಗ್ಗೆ ಏನೂ ತಿಳಿದಿಲ್ಲ ಎಂದು ತೋರುತ್ತದೆ. ಕೆಲವು ತಪಾಸಣೆಗಾಗಿ ಮಗುವನ್ನು ಆಸ್ಪತ್ರೆಗೆ ಕರೆ ತಂದ ನಂತರ ಕುಟುಂಬ ಮತ್ತು ಪೊಲೀಸ್ ಅಧಿಕಾರಿಗಳು ಇದರ ಬಗ್ಗೆ ತಿಳಿದುಕೊಂಡರು,ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕೌನ್ಸೆಲಿಂಗ್ ವೇಳೆ ವಿದ್ಯಾರ್ಥಿನಿ ಮೇಲೆ ಶಿಕ್ಷಕನ ಅತ್ಯಾಚಾರ ಎಸಗಿದ್ದಾನೆ. ನಾಪತ್ತೆಯಾದ ಶಿಕ್ಷಕನ ಮೇಲೆ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಾಗಿದೆ.
 

Trending News