ಉತ್ತರ ಪ್ರದೇಶದ ಕೌಶಂಬಿಯಲ್ಲಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಕೌಶಂಬಿಯಲ್ಲಿನ ಕರಾರಿ ಪ್ರದೇಶದಲ್ಲಿ 16 ವರ್ಷದ ದಲಿತ ಬಾಲಕಿಯೊಬ್ಬಳ ಮೇಲೆ ನೆರೆ ವ್ಯಕ್ತಿಯೊಬ್ಬ ಅತ್ಯಾಚಾರ ವೆಸಗಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

Last Updated : Sep 28, 2019, 07:32 PM IST
ಉತ್ತರ ಪ್ರದೇಶದ ಕೌಶಂಬಿಯಲ್ಲಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ title=
ಸಾಂದರ್ಭಿಕ ಚಿತ್ರ

ನವದೆಹಲಿ: ಉತ್ತರ ಪ್ರದೇಶದ ಕೌಶಂಬಿಯಲ್ಲಿನ ಕರಾರಿ ಪ್ರದೇಶದಲ್ಲಿ 16 ವರ್ಷದ ದಲಿತ ಬಾಲಕಿಯೊಬ್ಬಳ ಮೇಲೆ ನೆರೆ ವ್ಯಕ್ತಿಯೊಬ್ಬ ಅತ್ಯಾಚಾರ ವೆಸಗಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಈ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, ಆರೋಪಿ ಮುಸ್ತಾಕೀಮ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಪ್ತಾ ತಿಳಿಸಿದ್ದಾರೆ.

ಈಗ ಸಂತ್ರಸ್ತ ಬಾಲಕಿ ಕುಟುಂಬ ಸದಸ್ಯರು ನೀಡಿದ ದೂರಿನ ಪ್ರಕಾರ, ಆರೋಪಿ ನಿನ್ನೆ ರಾತ್ರಿ ಗೋಡೆ ಹಾರಿ ಮನೆಗೆ ಪ್ರವೇಶಿಸುವ ಮೂಲಕ  ಬಾಲಕಿಯ ಮೇಲೆ ಅತ್ಯಾಚಾರ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಇದೇ ವೇಳೆ ಆ ವ್ಯಕ್ತಿ ಬಾಲಕಿಗೆ ಬೆದರಿಕೆ ಹಾಕಿ ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಈಗ ಪೊಲೀಸರು ಆ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿದ್ದು, ಅಪ್ರಾಪ್ತ ಬಾಲಕಿಯನ್ನು ಈಗ ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 

Trending News