ಮಹಾರಾಷ್ಟ್ರದಲ್ಲಿ 11 ಟ್ರ್ಯಾಕ್ಟರ್‌ಗಳು, ಜೆಸಿಬಿ ಯಂತ್ರಗಳಿಗೆ ಬೆಂಕಿ ಹಚ್ಚಿದ ಮಾವೋವಾದಿಗಳು..!

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ನಕ್ಸಲರ ಗುಂಪೊಂದು ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 11 ಟ್ರ್ಯಾಕ್ಟರ್‌ಗಳು ಮತ್ತು ಎರಡು ಜೆಸಿಬಿ ಯಂತ್ರಗಳಿಗೆ ಬೆಂಕಿ ಹಚ್ಚಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

Written by - Zee Kannada News Desk | Last Updated : Jan 22, 2022, 07:39 PM IST
  • ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ನಕ್ಸಲರ ಗುಂಪೊಂದು ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 11 ಟ್ರ್ಯಾಕ್ಟರ್‌ಗಳು ಮತ್ತು ಎರಡು ಜೆಸಿಬಿ ಯಂತ್ರಗಳಿಗೆ ಬೆಂಕಿ ಹಚ್ಚಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ 11 ಟ್ರ್ಯಾಕ್ಟರ್‌ಗಳು, ಜೆಸಿಬಿ ಯಂತ್ರಗಳಿಗೆ ಬೆಂಕಿ ಹಚ್ಚಿದ ಮಾವೋವಾದಿಗಳು..!  title=

ನವದೆಹಲಿ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ನಕ್ಸಲರ ಗುಂಪೊಂದು ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 11 ಟ್ರ್ಯಾಕ್ಟರ್‌ಗಳು ಮತ್ತು ಎರಡು ಜೆಸಿಬಿ ಯಂತ್ರಗಳಿಗೆ ಬೆಂಕಿ ಹಚ್ಚಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಭಮ್ರಗಢ್ ತಹಸಿಲ್‌ನ ಇರಾಪ್‌ನಗರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಈ ಸಂದರ್ಭದಲ್ಲಿ ಅವರು ಒಂದು ಪೊಕ್ಲೈನ್ ​​ಯಂತ್ರವನ್ನು ಸುಟ್ಟು ಹಾಕಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: South Africa vs India, 2nd ODI : ಹರಿಣಗಳ ವಿರುದ್ಧ ಭಾರತಕ್ಕೆ ಏಕದಿನ ಸರಣಿ ಸೋಲು

ಘಟನೆಯಲ್ಲಿ ಸುಮಾರು 40 ರಿಂದ 50 ನಕ್ಸಲರು ಭಾಗಿಯಾಗಿದ್ದಾರೆ.ಅವರು ದಲಂ ಮತ್ತು ಮಿಲಿಟರಿ ಸದಸ್ಯರು ಎಂದು ತಿಳಿದುಬಂದಿದೆ.ಸುಟ್ಟ ವಾಹನಗಳು ಮತ್ತು ಇತರ ಯಂತ್ರೋಪಕರಣಗಳು ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ವಿವಿಧ ಗುತ್ತಿಗೆದಾರರಿಗೆ ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈಗಾಗಲೇ ಪೊಲೀಸರು ಅಪರಾಧವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.

ಪ್ರತ್ಯೇಕ ಘಟನೆಯಲ್ಲಿ, ಛತ್ತೀಸ್‌ಗಢದ ಬಂಡಾಯ ಪೀಡಿತ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು 45 ವರ್ಷದ ಪೊಲೀಸ್ ಮಾಹಿತಿದಾರನನ್ನು ಕೊಂದು ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಮೂರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಇದನ್ನೂ ಓದಿ : KL Rahul : ಸರಣಿ ಸೋಲಿನಿಂದ ಬೇಸತ್ತ ಕೆಎಲ್ ರಾಹುಲ್ : ದುಃಖದಿಂದ ಸೋಲಿಗೆ ಕಾರಣ ತಿಳಿಸಿದ ಕ್ಯಾಪ್ಟನ್

ಪ್ರತ್ಯೇಕ ಘಟನೆಯಲ್ಲಿ, ಶುಕ್ರವಾರ ಬಿಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಚೆರ್ಕಂಟಿ ಪಟೇಲ್‌ಪಾರಾ ಗ್ರಾಮದಲ್ಲಿ ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಮೂರು ವಾಹನಗಳಿಗೆ ನಕ್ಸಲರು ಬೆಂಕಿ ಹಚ್ಚಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ನಿರ್ಮಾಣ ಕಾರ್ಯದಲ್ಲಿ ಬಳಸುತ್ತಿದ್ದ ಟ್ರಕ್, ಜೆಸಿಬಿ ಯಂತ್ರ ಮತ್ತು ಇನ್ನೊಂದು ಭಾರೀ ವಾಹನಕ್ಕೆ ಉಗ್ರರು ಬೆಂಕಿ ಹಚ್ಚಿದ್ದಾರೆ.

.ಇದನ್ನೂ ಓದಿ: Watch: ಉಲ್ಟಾ ಬ್ಲೌಸ್ ಧರಿಸಿ ಸುದ್ದಿಯಾದ ಬಿಗ್ ಬಾಸ್ ಒಟಿಟಿ ಖ್ಯಾತಿಯ ಉರ್ಫಿ ಜಾವೇದ್..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News