ಮಧ್ಯಪ್ರದೇಶದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

 ಮಧ್ಯಪ್ರದೇಶದ ದಾಮೋಹ್‌ನಲ್ಲಿ ಅಪರಿಚಿತ ವ್ಯಕ್ತಿಯೋರ್ವ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.ಈಗ ಮಗುವನ್ನುಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Last Updated : Apr 23, 2020, 07:59 PM IST
ಮಧ್ಯಪ್ರದೇಶದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ  title=
ಸಾಂದರ್ಭಿಕ ಚಿತ್ರ

ನವದೆಹಲಿ:  ಮಧ್ಯಪ್ರದೇಶದ ದಾಮೋಹ್‌ನಲ್ಲಿ ಅಪರಿಚಿತ ವ್ಯಕ್ತಿಯೋರ್ವ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.ಈಗ ಮಗುವನ್ನುಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ ಸಂಜೆ ತನ್ನ ಮನೆಯ ಹತ್ತಿರ ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬರು ಆಕೆಯನ್ನು ಎಳೆದೊಯ್ದಿದ್ದಾರೆ ಎಂದು ಪೊಲೀಸರು ಹೇಳುತ್ತಾರೆ. ಅಂದಿನಿಂದ ಅವಳು ಕಾಣೆಯಾಗಿದ್ದಳು. ಇಂದು ಬೆಳಿಗ್ಗೆ ತನ್ನ ಹಳ್ಳಿಯ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಅವಳ ಕೈಗಳನ್ನು ಹಗ್ಗದಿಂದ ಕಟ್ಟಲಾಗಿತ್ತು.

'ಆಕೆಯ ಮೇಲೆ ಅತ್ಯಾಚಾರ ನಡೆದಿತ್ತು ಮತ್ತು ಅವಳ ಕಣ್ಣಿಗೆ ತೀವ್ರವಾದ ಗಾಯಗಳಾಗಿವೆ" ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಮಂತ್ ಸಿಂಗ್ ಚೌಹಾನ್ ಹೇಳಿದ್ದಾರೆ. "ನಾವು ಅನೇಕ ಶಂಕಿತರನ್ನು ಪ್ರಶ್ನಿಸಿದ್ದೇವೆ ಮತ್ತು ನಾವು ಕೆಲವು ಪ್ರಮುಖ ಕಾರ್ಯಗಳನ್ನು ಮಾಡುತ್ತಿದ್ದೇವೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

'ಪೊಲೀಸ್ ತಂಡ ಬಾಲಕಿ ಮತ್ತು ಆಕೆಯ ಕುಟುಂಬದೊಂದಿಗೆ ಜಬಲ್ಪುರಕ್ಕೆ ಹೋಗಿದ್ದು, ಆಕೆಯ ದೇಹದಾದ್ಯಂತ ತೀವ್ರ ಗಾಯಗಳಾಗಿರುವ ಹಿನ್ನಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೋನವೈರಸ್ ಹಿನ್ನಲೆಯಲ್ಲಿ ದೇಶವು ತತ್ತರಿಸಿರುವ ಬೆನ್ನಲ್ಲೇ ಅತ್ಯಾಚಾರ ಈಗ ಮಧ್ಯಪ್ರದೇಶವನ್ನು ದಿಗ್ಭ್ರಮೆಗೊಳಿಸಿದೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಈ ಘಟನೆಯನ್ನು ನಾಚಿಕೆಗೇಡಿನ ಮತ್ತು ದುರದೃಷ್ಟಕರ ಎಂದು ಕರೆದರು.ಆರೋಪಿಗಳನ್ನು ಕೂಡಲೇ ಬಂಧಿಸಲು ನಿರ್ದೇಶನ ನೀಡಲಾಗಿದೆ ಮತ್ತು ಕಠಿಣ ಶಿಕ್ಷೆಯನ್ನು ನೀಡಲಾಗುವುದು. ಪುಟ್ಟ ಬಾಲಕಿಗೆ ಉತ್ತಮ ಚಿಕಿತ್ಸೆ ನೀಡಲಾಗುವುದು" ಎಂದು ಅವರು ಟ್ವೀಟ್ ಮಾಡಿದ್ದಾರೆ. ಲಾಕ್ ಡೌನ್ ಮಧ್ಯೆ ರಾಜ್ಯದಲ್ಲಿ ಆರು ದಿನಗಳಲ್ಲಿ ಇದು ಮೂರನೇ ಅತ್ಯಾಚಾರವಾಗಿದೆ.
 

Trending News