Traffic Constable Saves Life: ತೆಲಂಗಾಣದ ಬಂಜಾರ ಹಿಲ್ಸ್ ನಲ್ಲಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿದ್ದ ವ್ಯಕ್ತಿಯನ್ನು ಕರ್ತವ್ಯದಲ್ಲಿದ್ದ ಟ್ರಾಫಿಕ್ ಕಾನ್‌ಸ್ಟೆಬಲ್ ರಕ್ಷಿಸಿದ್ದಾರೆ. ವಿದ್ಯುತ್ ಸ್ಪರ್ಶಗೊಂಡು ಕೆಳಗೆ ಬಿದ್ದು ಪ್ರಜ್ಞಾಹೀನರಾಗಿದ್ದ ವ್ಯಕ್ತಿಯನ್ನು ಗಮನಿಸಿದ ಟ್ರಾಫಿಕ್ ಕಾನ್‌ಸ್ಟೆಬಲ್, ತರಾತುರಿಯಲ್ಲಿ ಆ ವ್ಯಕ್ತಿಯ ಬಳಿ ತೆರಳಿ ಅವನ ಎದೆಯ ಮೇಲೆ ಎರಡೂ ಕೈಗಳನ್ನು ಇಟ್ಟು ಉಸಿರಾಟದ ಪ್ರಕ್ರಿಯೆಯು ಸಹಜ ಸ್ಥಿತಿಗೆ ಬರುವವರೆಗೆ ಒತ್ತಿದ್ದಾರೆ. ಇದೇ ವೇಳೆ ಅಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹಾಗೂ ಸಂಚಾರ ಸಿಬ್ಬಂದಿ 108 ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Shraddha Murder Case: ಅಫ್ತಾಬ್ ಮನೆ ಕಾರ್ಯಾಚರಣೆ: 8 ಮೂಳೆಗಳ ಜೊತೆ ರಕ್ತದ ಮಾದರಿ ಪೊಲೀಸ್ ವಶಕ್ಕೆ
ಟ್ರಾಫಿಕ್ ಪೇದೆಯ ಪ್ರಯತ್ನದಿಂದ ವಿದ್ಯುತ್ ಶಾಕ್ ತಗುಲಿದ್ದ ವ್ಯಕ್ತಿಗೆ ಪ್ರಜ್ಞೆ ಬಂದಿದೆ. ತಕ್ಷಣವೇ ಅವರನ್ನು 108 ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಬಂಜಾರ ಹಿಲ್ಸ್ ರಸ್ತೆ ನಂ.1 ಒಳವರ್ತುಲ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವಿದ್ಯುತ್ ಆಘಾತದಿಂದ ವ್ಯಕ್ತಿಯೊಬ್ಬನ ಪ್ರಾಣ ಉಳಿಸಿದ ಟ್ರಾಫಿಕ್ ಕಾನ್ ಸ್ಟೇಬಲ್ ಬೋಳು ಅವರನ್ನು ಮೇಲಧಿಕಾರಿಗಳು ಅಭಿನಂದಿಸಿದ್ದಾರೆ.
ಇದನ್ನೂ ಓದಿ: Video Viral : ಕಾರ್ ಸ್ಟಂಟ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ!
ಅಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ದೃಶ್ಯವನ್ನು ಸೆರೆ ಹಿಡಿದಿದ್ದು, ಆ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಆ ವಿಡಿಯೋಗಳನ್ನು ನೋಡಿದ ನೆಟಿಜನ್‌ಗಳು ಟ್ರಾಫಿಕ್ ಕಾನ್‌ಸ್ಟೆಬಲ್‌ನ ಒಳ್ಳೆಯತನವನ್ನು ಮೆಚ್ಚಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.