ಮಥುರಾ: ಯಮುನಾ ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ರಸ್ತೆ ಅಪಘಾತ, ನಾಲ್ವರ ಸಾವು

ಮಾಹಿತಿಯನ್ನು ಪಡೆದ ನಂತರ ಸ್ಥಳಕ್ಕೆ ತಲುಪಿದ ಪೊಲೀಸರು ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

Last Updated : Jun 3, 2019, 10:07 AM IST
ಮಥುರಾ: ಯಮುನಾ ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ರಸ್ತೆ ಅಪಘಾತ, ನಾಲ್ವರ ಸಾವು title=

ನವದೆಹಲಿ: ಸೋಮವಾರ ಬೆಳಗ್ಗೆ ಮಥುರಾದಲ್ಲಿ ಯಮುನಾ ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನೋಯ್ಡಾದ ಬಲ್ದೇವ್ ಪ್ರದೇಶದ ಬಳಿ ಬುರ್ಜ್ ಸುಖದೇವ್ ಸಮೀಪ ಬಿಂಡ್ ಗೆ ತೆರಳುತ್ತಿದ್ದ ಡಬಲ್ ಡೆಕ್ಕರ್ ವಾಹನ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಡಬಲ್ ಡೆಕ್ಕರ್ ವಾಹನ ಪಲ್ಟಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎರಡು ಡಜನ್ ಗೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮಾಹಿತಿಯನ್ನು ಪಡೆದ ನಂತರ ಸ್ಥಳಕ್ಕೆ ತಲುಪಿದ ಪೊಲೀಸರು ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆಸ್ಪತ್ರೆಗೆ ದಾಖಲಾಗಿರುವವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಈ ಘಟನೆಯು ಬಲದೇವ್ ಪೊಲೀಸ್ ಠಾಣೆಯ ವ್ಯಾಪ್ತಿಗೆ ಒಳಪಡುತ್ತದೆ.
 

Trending News