ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 20 ಮಂದಿಗೆ ಗಾಯ, ಐವರ ಸ್ಥಿತಿ ಚಿಂತಾಜನಕ

ಉನ್ನಾವದ ಹಸಂಗಂಜ್ ಪೊಲೀಸ್  ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಗಾಯಗೊಂಡ ಎಲ್ಲರನ್ನು ಲಕ್ನೋ ಟ್ರಾಮಾ ಸೆಂಟರ್ನಲ್ಲಿ ದಾಖಲಿಸಲಾಗಿದೆ.

Last Updated : Apr 4, 2019, 11:08 AM IST
ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 20 ಮಂದಿಗೆ ಗಾಯ, ಐವರ ಸ್ಥಿತಿ ಚಿಂತಾಜನಕ title=
Pic Courtesy: ANI

ನವದೆಹಲಿ: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಾಹಿತಿ ಪ್ರಕಾರ, ಒಂದು ಪ್ರವಾಸಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. 

ಉನ್ನಾವದ ಹಸಂಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದು, ಐವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. 

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯ ಜನರ ಸಹಾಯದಿಂದ ಗಾಯಗೊಂಡವರನ್ನು ಲಕ್ನೋ ಟ್ರಾಮಾ ಸೆಂಟರ್ನಲ್ಲಿ  ದಾಖಲಿಸಿದ್ದಾರೆ. ಅಪಘಾತಕ್ಕೀಡಾದ ಬಸ್ ದೆಹಲಿನಿಂದ ಬಿಹಾರಕ್ಕೆ ಹೋಗುತ್ತಿತ್ತು ಎಂದು ಹೇಳಲಾಗಿದೆ. 
 

Trending News