ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕನಾಗಿ ಅಧಿರ್ ರಂಜನ್ ಚೌಧರಿ ನೇಮಕ

ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 

Last Updated : Jun 18, 2019, 07:16 PM IST
ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕನಾಗಿ ಅಧಿರ್ ರಂಜನ್ ಚೌಧರಿ ನೇಮಕ title=

ನವದೆಹಲಿ: ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕನಾಗಿ ಪಶ್ಚಿಮ ಬಂಗಾಳ ಸಂಸದ ಅಧಿರ್ ರಂಜನ್ ಚೌಧರಿ ಅವರನ್ನು ನೇಮಕ ಮಾಡಲಾಗಿದೆ.

ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ಲೋಕಸಭಾ ಪ್ರಧಾನ ಕಾರ್ಯದರ್ಶಿಗೆ ಪತ್ರವೊಂದನ್ನು ಬರೆದಿದ್ದು , ಐದು ಬಾರಿ ಪಶ್ಚಿಮ ಬಂಗಾಳದಿಂದ  ಸಂಸದರಾಗಿರುವ ಅಧಿರ್ ರಂಜನ್ ಚೌಧರಿ ಅವರನ್ನು ಸಂಸತ್ತಿನ ಕೆಳಮನೆಯ ಕಾಂಗ್ರೆಸ್ ನಾಯಕರಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಸಂಸದೀಯ ನಾಯಕನ ಸ್ಥಾನದಲ್ಲಿ ಮುಂದುವರಿಯಲು ನಿರಾಕರಿಸಿದ ಹಿನ್ನೆಲೆಯಲ್ಲಿ ಚೌಧರಿ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Trending News