BS Yediyurappa : ಹೈಕಮಾಂಡ್ ಭೇಟಿ : ಜು. 26 ಕ್ಕೆ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಬಿಎಸ್‌ವೈ

ಸಿಎಂ ಬಿಎಸ್ ಯಡಿಯುರಪ್ಪ ಅವರು ಜುಲೈ 26 ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಶನಿವಾರ ವರದಿ ಮಾಡಿದೆ. ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ಮಾಡಿದ ನಂತ್ರ ಈ ನಿರ್ಧಾರ ಕೈಗೊಂಡಿದ್ದಾರೆ.

Written by - Channabasava A Kashinakunti | Last Updated : Jul 18, 2021, 12:18 PM IST
  • ಬಿಎಸ್ ಯಡಿಯುರಪ್ಪ ಅವರು ಜುಲೈ 26 ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ
  • ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ
  • ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು "ನಿಜವಲ್ಲ"
BS Yediyurappa : ಹೈಕಮಾಂಡ್ ಭೇಟಿ : ಜು. 26 ಕ್ಕೆ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಬಿಎಸ್‌ವೈ title=

ಬೆಂಗಳೂರು : ಸಿಎಂ ಬಿಎಸ್ ಯಡಿಯುರಪ್ಪ ಅವರು ಜುಲೈ 26 ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಶನಿವಾರ ವರದಿ ಮಾಡಿದೆ. ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ಮಾಡಿದ ನಂತ್ರ ಈ ನಿರ್ಧಾರ ಕೈಗೊಂಡಿದ್ದಾರೆ.

ಸಿಎಂ ಯಡಿಯೂರಪ್ಪ(BS Yediyurappa) ಅವರು ದೆಹಲಿ ಭೇಟಿ ಯಶಸ್ವಿಯಾಗಿದೆ ಮತ್ತು ಕೇಂದ್ರ ನಾಯಕರು ತಮ್ಮ ಹುದ್ದೆಯಲ್ಲಿ ಮುಂದುವರಿಯುವಂತೆ ಕೇಳಿಕೊಂಡಿದ್ದಾರೆ ಮತ್ತು ನಾಯಕತ್ವ ಬದಲಾವಣೆಯ ಬಗ್ಗೆ ಯಾವುದೇ ಚರ್ಚೆಯಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಇದನ್ನೂ ಓದಿ : Heavy Rain in Karnataka : ರಾಜ್ಯದಲ್ಲಿ ಜು. 21ರವರೆಗೂ ಭಾರೀ ಮಳೆ : ಹವಾಮಾನ‌ ಇಲಾಖೆ ಮಾಹಿತಿ

ದೆಹಲಿ(Delhi)ಯಿಂದ ಹಿಂದಿರುಗಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಯಡಿಯೂರಪ್ಪ, ಮುಖ್ಯಮಂತ್ರಿಯಾಗಿ ಮುಂದುವರಿಯಲು ಮತ್ತು ಪಕ್ಷವನ್ನು ಬಲಪಡಿಸಲು ಕೇಂದ್ರ ನಾಯಕರು ನನ್ನನ್ನು ಕೇಳಿದ್ದಾರೆ. ಕಾಲಕಾಲಕ್ಕೆ ಅವರ ಸೂಚನೆಗಳನ್ನು ಪಾಲಿಸುವುದು ನಮ್ಮ ಕರ್ತವ್ಯ. ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ.

ಹಿಂದಿನ ದಿನ, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ವರದಿಗಳಿಗೆ ಉತ್ತರಿಸಿದ ಅವರು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು "ನಿಜವಲ್ಲ" ಎಂದು ತಳ್ಳಿಹಾಕಿದ್ದರು. ಪರ್ಯಾಯ ನಾಯಕತ್ವದ ಕುರಿತು ಯಾವುದೇ ಚರ್ಚೆಯನ್ನು ಅವರು ನಿರಾಕರಿಸಿದರು ಮತ್ತು ಬಿಜೆಪಿ(BJP)ಯಲ್ಲಿ ಬದಲಿ ನಾಯಕರ ಕೊರತೆಯಿಲ್ಲ ಎಂದು ಹೇಳಿದರು.

ಆದರೆ, ಪಕ್ಷವು ತನಗೆ ಉಸ್ತುವಾರಿ ನೀಡಿದೆ ಮತ್ತು ಎಲ್ಲರನ್ನೂ ಕರೆದುಕೊಂಡು ಪಕ್ಷವನ್ನು ಬಲಪಡಿಸಲು ಕೆಲಸ ಮಾಡುತ್ತೇನೆ ಎಂದು ಅವರು ಸಮರ್ಥಿಸಿಕೊಂಡರು.

ಇದನ್ನೂ ಓದಿ : Heavy Rain : ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆ!

ಸಿಎಂ ಯಡಿಯೂರಪ್ಪ ಅವರು ತಮ್ಮ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ(Amit Shah), ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದರು.

ಕೇಂದ್ರ ನಾಯಕರೊಂದಿಗಿನ ಅವರ ಸಭೆಗಳು ಚುನಾವಣೆಗೆ ಮುನ್ನ ಕರ್ನಾಟಕ(Karnataka)ದಲ್ಲಿ ಪಕ್ಷವನ್ನು ಬಲಪಡಿಸುವುದು ಮತ್ತು ಪಕ್ಷವು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವಂತೆ ನೋಡಿಕೊಳ್ಳುವುದರ ಕುರಿತು ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಜೆ.ಪಿ.ನಡ್ಡಾ(JP Nadda) ಅವರೊಂದಿಗಿನ ಸಭೆಯಲ್ಲಿ ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ವಿಶೇಷ ಒತ್ತು ನೀಡುವಂತೆ ಬಿಜೆಪಿ ಮುಖ್ಯಸ್ಥರು ಕೇಳಿಕೊಂಡಿದ್ದಾರೆ ಎಂದು ಹೇಳಿದರು. "ಇದನ್ನು ಪ್ರಧಾನಮಂತ್ರಿಯೂ ಹೇಳಿದ್ದಾರೆ. ಈ ಕುರಿತುವಿವರವಾದ ಚರ್ಚೆ ನಡೆಯಿತು" ಎಂದು ಅವರು ಹೇಳಿದರು.

ಇದನ್ನೂ ಓದಿ : ಮಂಡ್ಯದ ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ ಜಿ.ಮಾದೇಗೌಡ ಇನ್ನಿಲ್ಲ

ರಕ್ಷಣಾ ಸಚಿವ ಸಿಂಗ್(Rajnath Shingh) ಅವರೊಂದಿಗಿನ ಭೇಟಿಯು ಇದೇ ರೀತಿಯದ್ದಾಗಿದೆ ಎಂದು ಹೇಳಿದರು ಮತ್ತು "ಉತ್ತರ ಪ್ರದೇಶದಲ್ಲಿ ನಾವು ಬಹುಮತದಿಂದ ಗೆಲ್ಲುತ್ತೇವೆ, ಮತ್ತು ಕರ್ನಾಟಕದಲ್ಲಿ ಉಜ್ವಲ ಭವಿಷ್ಯವಿದೆ, ಮತ್ತು ನಾವು ನಿಮ್ಮೊಂದಿಗೆ ಇದ್ದೇವೆ" ಎಂದು ಷಾ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

"ಅವರು (ಶಾ) ಕರ್ನಾಟಕದಲ್ಲಿ ಶ್ರಮವಹಿಸಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವಂತೆ ನೋಡಿಕೊಳ್ಳುವಂತೆ ಕೇಳಿಕೊಂಡಿದ್ದಾರೆ. ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸುವ ಜವಾಬ್ದಾರಿಯನ್ನು ತೆಗೆದುಕೊಳ್ಳುವಂತೆ ಅವರು ನನ್ನನ್ನು ಕೇಳಿಕೊಂಡಿದ್ದಾರೆ… (ಶಾ ಹೇಳಿದರು) ನಮ್ಮ ಆಶೀರ್ವಾದ ನಿಮ್ಮೊಂದಿಗೆ ಇದೆ ”ಎಂದು ಯಡಿಯೂರಪ್ಪ ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News