Ahlan Modi programme : ಪ್ರಧಾನಮಂತ್ರಿ ನರೇಂದ್ರ ಮೋದಿ ಜಾಯೆದ್ ಸ್ಪೋರ್ಟ್ಸ್ ಸ್ಟೇಡಿಯಂನಲ್ಲಿ ಇಂದು (ಫೆ.೧೩) ನಡೆದ 'ಆಹ್ಲಾನ್ ಮೋದಿ' ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ನಾಲ್ಕು ಭಾಷೆಗಳಾದ ಕನ್ನಡ, ತಮಿಳು, ತೆಲುಗು, ಮತ್ತು ಮಲಯಾಳಂನಲ್ಲಿ ಮಾತನಾಡಿದ್ದಾರೆ.
ಭಾರತದ ವಿವಿಧ ರಾಜ್ಯಗಳ ಜನರು ಯುಎಇಯ ವಿವಿಧ ಪ್ರದೇಶಗಳಲ್ಲಿ ನೆಲೆಸಿದ್ದು, ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಈ ಭಾಷಿಕರು ಇದ್ದಾರೆ.
ಇದನ್ನು ಓದಿ :ಈ ಸ್ಟಾರ್ ನಟನ ಆಸ್ತಿ ರೂ.1,000 ಕೋಟಿಗೂ ಹೆಚ್ಚು.. ಆದರೂ ಈತ ಬಳಸುತ್ತಿರುವುದು ಸೆಕೆಂಡ್ ಹ್ಯಾಂಡ್ ಕಾರು!
ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಯುಎಇಯ ಎಲ್ಲಾ ಮೂಲೆಗಳಿಂದ ಮತ್ತು ಭಾರತದ ವಿವಿಧ ರಾಜ್ಯಗಳಿಂದ ಇಲ್ಲಿಗೆ ಬಂದಿದ್ದೀರಿ. "ಇಂದು ಅಬುಧಾಬಿಯಲ್ಲಿ, ನೀವು ಹೊಸ ಇತಿಹಾಸವನ್ನು ಸೃಷ್ಟಿಸಿದ್ದೀರಿ. ಈ ಐತಿಹಾಸಿಕ ಕ್ರೀಡಾಂಗಣದಲ್ಲಿ ಪ್ರತಿ ಹೃದಯ ಬಡಿತ, ಪ್ರತಿ ಉಸಿರು, ಪ್ರತಿ ಧ್ವನಿ ಹೇಳುತ್ತದೆ - ಭಾರತ-ಯುಎಇ ಸ್ನೇಹ ಚಿರಾಯುವಾಗಲಿ ಎಂದರು.
#WATCH | Prime Minister Narendra Modi greets people gathered at the Zayed Sports Stadium in Abu Dhabi, UAE
#AhlanModi pic.twitter.com/LLd3HYmlL6
— ANI (@ANI) February 13, 2024
ಪ್ರಪಂಚದ ಮೂರನೇ ಅತಿ ದೊಡ್ಡ ಸ್ಟಾರ್ಟ್ ಅಪ್ ಪರಿಸರ ವ್ಯವಸ್ಥೆಯನ್ನು ಹೊಂದಿರುವ ದೇಶ ಭಾರತವಾಗಿದೆ. ಆರ್ಥಿಕತೆಯು ವೇಗವಾಗಿ ಪ್ರಗತಿ ಸಾಧಿಸುತ್ತಿದೆ. ತನ್ನ ಮೊದಲ ಪ್ರಯತ್ನದಲ್ಲಿ ಮಂಗಳವನ್ನು ತಲುಪಿದ ದೇಶ ಭಾರತ. ಚಂದ್ರನ ದಕ್ಷಿಣ ಧ್ರುವವನ್ನು ತಲುಪಿದ ದೇಶ ಭಾರತವಾಗಿದೆ. 5G ತಂತ್ರಜ್ಞಾನವನ್ನು ದೇಶಿಯವಾಗಿ ಅಭಿವೃದ್ಧಿಪಡಿಸಿ, ಅದನ್ನು ತ್ವರಿತವಾಗಿ ಹೊರತಂದಿರುವ ದೇಶ ಭಾರತವಾಗಿದೆ ಎಂದು ಪ್ರಧಾನಿ ಮೋದಿ ಭಾಷಣದುದ್ದಕ್ಕೂ ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನು ಓದಿ : ಅಕ್ರಮ ಹಣ ವರ್ಗಾವಣೆ ಪ್ರಕರಣ: 2 ಬಾರಿ ED ಸಮನ್ಸ್ ಜಾರಿಯಾದರೂ ವಿಚಾರಣೆಗೆ ಹಾಜರಾಗುತ್ತಿಲ್ಲ ಫಾರೂಕ್ ಅಬ್ದುಲ್ಲಾ!
ಇಂದು ವಿಶ್ವದ ಪ್ರತಿಯೊಂದು ಪ್ರಮುಖ ವೇದಿಕೆಯಲ್ಲೂ ಭಾರತದ ಧ್ವನಿ ಕೇಳಿಬರುತ್ತಿದೆ. ಎಲ್ಲಿ ಬಿಕ್ಕಟ್ಟು ಇದೆಯೋ ಅಲ್ಲಿಗೆ ತಲುಪುವ ಮೊದಲ ದೇಶಗಳಲ್ಲಿ ಭಾರತದ ಹೆಸರು ಬರುತ್ತದೆ. ಇಂದು ಜಗತ್ತು ಭಾರತವನ್ನು ‘ವಿಶ್ವ ಬಂಧು’ ಎಂದು ನೋಡುತ್ತಿದೆ. 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವುದು ಪ್ರತಿಯೊಬ್ಬ ಭಾರತೀಯನ ಗುರಿಯಾಗಿದೆ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.