ಉಭಯ ದೇಶಗಳ ನಡುವಿನ ಸಂಬಂಧ ಮತ್ತಷ್ಟು ಬಲ ಪಡಿಸುವ ಗುರಿ : ಫೆ.14ರಂದು ಕತಾರ್ ಗೆ ಮೋದಿ ಭೇಟಿ

Narendra modi  : ಯುಎಇ ಯ ಎರಡು ದಿನಗಳ ಪ್ರವಾಸದ ಬಳಿಕ ಪ್ರಧಾನಿ ಮೋದಿ ಕತಾರ್ ದೋಹಾಕ್ಕೆ ಬುಧವಾರ ಫೆ. 14ರಂದು ತೆರಳಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ತಿಳಿಸಿದ್ದಾರೆ. 

Written by - Zee Kannada News Desk | Last Updated : Feb 12, 2024, 07:32 PM IST
  • ಯುಎಇ ಯ ಎರಡು ದಿನಗಳ ಪ್ರವಾಸದ ಬಳಿಕ ಪ್ರಧಾನಿ ಮೋದಿ ಕತಾರ್ ದೋಹಾಕ್ಕೆ ಬುಧವಾರ ಫೆ. 14ರಂದು ತೆರಳಿದ್ದಾರೆ
  • ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ವಿಸ್ತರಿಸಲು ಮೋದಿ ಮತ್ತು ಕತಾರ್ ಎಮಿರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರು ಮಾತುಕತೆ ನಡೆಸಲಿದ್ದಾರೆ
  • ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ತಿಳಿಸಿದ್ದಾರೆ.
ಉಭಯ ದೇಶಗಳ ನಡುವಿನ ಸಂಬಂಧ ಮತ್ತಷ್ಟು ಬಲ ಪಡಿಸುವ ಗುರಿ : ಫೆ.14ರಂದು ಕತಾರ್ ಗೆ ಮೋದಿ ಭೇಟಿ title=

Narendra modi to Qatar : ಎರಡು ದಿನಗಳ ಯುನೈಟೆಡ್ ಅರಬ್ ಎಮಿರೈಟ್ಸ್ ನಿಂದ ಕತಾರ್ ನ ದೋಹಾಕ್ಕೆ ಬುಧವಾರ (ಫೆ.14) ತೆರಳಿದ್ದಾರೆ. ಎಂದು ವಿದೇಶಾಂಗ ಮೋಹನ್ ಕ್ವಾತ್ರಾ ಸೋಮವಾರ ತಿಳಿಸಿದ್ದಾರೆ. 

ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ವಿಸ್ತರಿಸಲು ಮೋದಿ ಮತ್ತು ಕತಾರ್ ಎಮಿರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರು ಮಾತುಕತೆ ನಡೆಸಲಿದ್ದಾರೆ ಮತ್ತು ಆಪಾದಿತ ಬೇಹುಗಾರಿಕೆ ಪ್ರಕರಣದಲ್ಲಿ ಜೈಲಿನಲ್ಲಿದ್ದ 8 ಮಂದಿ ಭಾರತೀಯ ನೌಕಾಪಡೆಯ ಸಿಬ್ಬಂದಿಯನ್ನು ಕತಾರ್ ಬಿಡುಗಡೆ ಮಾಡಿದ ದಿನದಂದೇ ಪ್ರಧಾನಿ ಮೋದಿಯವರ ಕತಾರ್ ಭೇಟಿಯ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. 

ಇದನ್ನು ನೋಡಿ : “ಐಶ್ವರ್ಯಾ ಜೊತೆ ಪ್ರತಿದಿನ ‘ಅದನ್ನು’ ಮಾಡಿಲ್ಲ ಅಂದ್ರೆ ಬೋರಾಗುತ್ತೆ”- ಪಬ್ಲಿಕ್’ನಲ್ಲೇ ಇಂಥಾ ಹೇಳಿಕೆ ಕೊಟ್ಟ ಅಭಿಷೇಕ್ ಬಚ್ಚನ್

ಕತಾರ್ ನಲ್ಲಿ ಬಂಧಿತರಾಗಿರುವ ಭಾರತೀಯರನ್ನು ಮುಕ್ತಗೊಳಿಸಲು ಪ್ರಧಾನಿ ಮೋದಿ ಅವರು ಪ್ರಕರಣವನ್ನು ವೈಯಕ್ತಿಕ ಮೇಲ್ವಿಚಾರಣೆ ವಹಿಸಿದ್ದರು ಎಂದು ವಿದೇಶಾಂಗ ಕಾರ್ಯದರ್ಶಿ ತಿಳಿಸಿದ್ದಾರೆ.

ಇದನ್ನು ನೋಡಿ : Rakul Preet Singh: ದಾಂಪತ್ಯಕ್ಕೆ ಹೆಜ್ಜೆಹಾಕಲು ಸಜ್ಜಾದ ಗಿಲ್ಲಿ ಚಿತ್ರದ ನಟಿ! ವರ ಯಾರು ಗೊತ್ತೇ?

ಇಸ್ರೇಲ್ ಪರವಾಗಿ ಅವರು ಬೇಹುಗಾರಿಕೆಮಾಡುತ್ತಿದ್ದರು ಎಂಬ ಆರೋಪದಡಿ ಕಳೆದ ಅಕ್ಟೋಬರ್ ನಲ್ಲಿ  ಕತಾರ್ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿತ್ತು. ಆದರೆ, ಅವರ ಮೇಲಿನ ಆರೋಪಗಳನ್ನು ಭಾರತ ಮತ್ತು ಕತಾರ್ ಖಚಿತಪಡಿಸಿಲ್ಲ.ಭಾರತೀಯರನ್ನು ಬಿಡುಗಡೆಗೊಳಿಸಿದ ಕತಾರ್ ಸರ್ಕಾರದ ನಿರ್ಧಾರವನ್ನು ಪ್ರಶಂಸಿಸುತ್ತೇವೆ. ಬಿಡುಗಡೆಯಾದ 8 ಮಂದಿಯಲ್ಲಿ 7 ಮಂದಿ ದೇಶಕ್ಕೆ ವಾಪಸ್ ಆಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News