ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ಎರಡನೇ ಅವಧಿಗೆ ಮುಂದುವರಿಯಲಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ಅವರು ದೇಶದ ಭದ್ರತೆಗೆ ನೀಡಿದ ಕೊಡುಗೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಅವರನ್ನು ರಾಜ್ಯ ಸಚಿವ ಸ್ಥಾನದಿಂದ ಕ್ಯಾಬಿನೆಟ್ ದರ್ಜೆಗೆ ಬಡ್ತಿ ನೀಡಿದೆ. ಇವರು ಮುಂದಿನ ಐದು ವರ್ಷಗಳ ಅವಧಿಗೆ ಅಧಿಕಾರದಲ್ಲಿ ಮುಂದುವರೆಯಲಿದ್ದಾರೆ.
2016ರಲ್ಲಿ ಉರಿ ಉಗ್ರರ ದಾಳಿಯ ಬಳಿ ನಡೆದ ಸರ್ಜಿಕಲ್ ಸ್ಟ್ರೈಕ್ ಮತ್ತು 2019ರ ಬಾಲಾಕೋಟ್ ಸರ್ಜಿಕಲ್ ಸ್ಟ್ರೈಕ್ಗಳು ಇವರ ನಿಗಾವಣೆಯಲ್ಲಿ ಯಶಸ್ವಿಯಾಗಿ ಕೈಗೊಳ್ಳಲಾಗಿತ್ತು. 2014ರಲ್ಲಿ ಇವರು ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ನೇಮಕಗೊಂಡಿದ್ದರು.