ಲೋಕಸಭಾ ಚುನಾವಣೆ: ಇವಿಎಂ ಬದಲು ಮತಪತ್ರ ಬಳಕೆಗೆ ಅಖಿಲೇಶ್ ಯಾದವ್ ಆಗ್ರಹ

ಲೋಕಸಭಾ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಬಳಕೆ ಮಾಡುವಂತೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ. 

Last Updated : Jan 22, 2019, 05:43 PM IST
ಲೋಕಸಭಾ ಚುನಾವಣೆ: ಇವಿಎಂ ಬದಲು ಮತಪತ್ರ ಬಳಕೆಗೆ ಅಖಿಲೇಶ್ ಯಾದವ್ ಆಗ್ರಹ title=
file photo

ಲಕ್ನೋ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಬಳಕೆ ಮಾಡುವಂತೆ ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಚುನಾವಣಾ ಆಯೋಗವನ್ನು ಮಂಗಳವಾರ ಒತ್ತಾಯಿಸಿದ್ದಾರೆ. 

ಅಮೆರಿಕದಲ್ಲಿನ ಭಾರತೀಯ ಸೈಬರ್‌ ಪರಿಣತ ವ್ಯಕ್ತಿಯೋರ್ವ ನಿನ್ನೆ ಸೋಮವಾರ '2014ರ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಹ್ಯಾಕ್‌ ಮಾಡುವ ಮೂಲಕ ಅಕ್ರಮ ಎಸಗಲಾಗಿತ್ತು' ಎಂದು ಹೇಳಿಕೊಂಡಿರುವ ಹಿನ್ನೆಲೆಯಲ್ಲಿ ಅಖಿಲೇಶ್ ಯಾದವ್ ಇವಿಎಂ ಬದಲು ಮತಪತ್ರ(ಬ್ಯಾಲೆಟ್ ಪೇಪರ್) ಬಳಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. 

ಆದರೆ, ಇವಿಎಂಗಳನ್ನು ವಿಶೇಷ ಕಾರ್ಯ ತಂತ್ರಜ್ಞಾನ ಬಳಸಿ ತಯಾರಿಸಲಾಗಿರುವುದರಿಂದ ಸುಲಭವಾಗಿ ಹ್ಯಾಕ್ ಮಾಡಲು ಸಾಧ್ಯವಿಲ್ಲ ಎಂದು ಈಗಾಗಲೇ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. 

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್ ಯಾದವ್, ಜಪಾನ್'ನಂತಹ ಅಭಿವೃದ್ಧಿ ಹೊಂದಿದ ದೇಶವೇ ಇವಿಎಂಗಳನ್ನು ಬಳಸುತ್ತಿಲ್ಲ. ಇದು ಕೇವಲ ರಾಜಕೀಯ ಪಕ್ಷದ ಪ್ರಶ್ನೆಯಲ್ಲ, ಪ್ರಜಾಪ್ರಭುತ್ವದ ಮೇಲಿನ ನಂಬಿಕೆಗೆ ಸಂಬಂಧಿಸಿದ್ದು. ಈ ಬಗ್ಗೆ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಬೇಕಿದೆ. ಏಕೆಂದರೆ ಮತಪತ್ರಗಳನ್ನು ಮೌಲ್ಯೀಕರಿಸಲು ಸಾಧ್ಯವಿದೆ. ಆದರೆ ಇವಿಎಂಗಳನ್ನು ಮೌಲ್ಯೀಕರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

Trending News