ಅಮೇಥಿ ಅಪಘಾತ: ಬೊಲೆರೋ ಲಾರಿ ಡಿಕ್ಕಿ: 6 ಸಾವು, 4 ಮಂದಿಗೆ ಗಂಭೀರ ಗಾಯ

ಉತ್ತರಪ್ರದೇಶದ ಅಮೇಥಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿ ಮದುವೆ ಮುಗಿಸಿ ಹಿಂತಿರುಗುತ್ತಿದ್ದ ಬೊಲೆರೋ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಲ್ಲಿ 6 ಮಂದಿ ಸಾವನ್ನಪ್ಪಿದ್ದು, 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

Written by - Yashaswini V | Last Updated : Apr 18, 2022, 07:22 AM IST
  • ಉತ್ತರ ಪ್ರದೇಶದ ಅಮೇಥಿಯಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ
  • ಮದುವೆಯಿಂದ ವಾಪಸ್ ಬರುವಾಗ ನಡೆದಿರುವ ದುರ್ಘಟನೆ
  • ಮದುವೆ ಮುಗಿಸಿ ಹಿಂತಿರುಗುತ್ತಿದ್ದ ಬೊಲೆರೊ ವಾಹನ ಅಪಘಾತಕ್ಕೀಡಾಗಿದೆ.
ಅಮೇಥಿ ಅಪಘಾತ: ಬೊಲೆರೋ ಲಾರಿ ಡಿಕ್ಕಿ: 6 ಸಾವು, 4 ಮಂದಿಗೆ ಗಂಭೀರ ಗಾಯ title=
Amethi Accident

ಉತ್ತರ ಪ್ರದೇಶದ ಅಮೇಥಿಯಲ್ಲಿ ಭೀಕರ ಅಪಘಾತ : ಉತ್ತರ ಪ್ರದೇಶದ ಅಮೇಥಿಯಲ್ಲಿ ಭಾನುವಾರ ತಡರಾತ್ರಿ ಟ್ರಕ್ ಮತ್ತು ಬೊಲೆರೊ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ.  ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಗೌರಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಬುಗಂಜ್ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ.

ಮದುವೆ ಮುಗಿಸಿ ಹಿಂದಿರುಗ ವೇಳೆ ನಡೆದಿರುವ ದುರ್ಘಟನೆ:
ಮಾಹಿತಿಯ ಪ್ರಕಾರ, ರಾಯ್ ಬರೇಲಿಯ ನಾಸಿರಾಬಾದ್‌ನಲ್ಲಿ ನಡೆದ ಮದುವೆಯಲ್ಲಿ ಭಾಗವಹಿಸಿ ಹಿಂದಿರುಗುವ ವೇಳೆ ಈ ದುರ್ಘಟನೆ ನಡೆದಿದೆ. ಮದುವೆ ಮುಗಿಸಿಕೊಂಡು ಬೊಲೆರೊ ವಾಹನದಲ್ಲಿ ಹಿಂತಿರುಗುತ್ತಿದ್ದಾಗ ಗೌರಿಗಂಜ್ ಬಳಿ ಎದುರಿನಿಂದ ಬರುತ್ತಿದ್ದ ಟ್ರಕ್ ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೊಲೆರೊ ಸ್ಫೋಟಗೊಂಡಿದೆ ಎನ್ನಲಾಗಿದೆ.

ಇದನ್ನೂ ಓದಿ- ನಾಲ್ಕನೇ ಕೊರೊನಾ ಅಲೆ ಮತ್ತೆ ಆರಂಭವಾಯ್ತಾ.? ದೆಹಲಿಯಲ್ಲಿ ಶೇ 500 ರಷ್ಟು ಪ್ರಕರಣ ಹೆಚ್ಚಳ...!

ಅತಿ ವೇಗವಾಗಿ ಬರುತ್ತಿದ್ದ ಬೊಲೆರೋ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಬೊಲೆರೊ ಹಾರಿಹೋಗಿದೆ. ಅತಿವೇಗವೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ.

ಗಾಯಗೊಂಡವರ ಸ್ಥಿತಿ ಚಿಂತಾಜನಕ:
ನಿನ್ನೆ ತಡರಾತ್ರಿ 12:15ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ಬೊಲೆರೋ ವಾಹನದಲ್ಲಿ ಮಕ್ಕಳೂ ಸೇರಿ 10 ಜನರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ದುರ್ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಇನ್ನುಳಿದ ನಾಲ್ಕು ಮಂದಿ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ- ಅಂದರಿಗಾಗಿ ದೇಶದ ಮೊಟ್ಟಮೊದಲ ರೇಡಿಯೋ ಚಾನೆಲ್ ರೇಡಿಯೋ ಅಕ್ಷ್`ಕ್ಕೆ ಚಾಲನೆ

ಸ್ಫೋಟದ ಶಬ್ದ ಕೇಳಿ ಸ್ಥಳಕ್ಕೆ ದೌಡಾಯಿಸಿದ ಜನ:
ಮಾಹಿತಿಯ ಪ್ರಕಾರ, ಬಾಬುಗಂಜ್ ಬಳಿ ಈ ಅಪಘಾತದ ವೇಳೆ ಸಂಭವಿಸಿದ ಸ್ಫೋಟದ ಶಬ್ದ ಕೇಳಿ ಸುತ್ತಮುತ್ತಲಿನ ಜನರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಇದರ ನಂತರ ಸ್ಥಳೀಯರು ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳಾಂತರಿಸಲು ಪ್ರಯತ್ನಿಸಿದರು ಮತ್ತು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಆಸ್ಪತ್ರೆಗೆ ಹೋಗುವಷ್ಟರಲ್ಲಿ ಆರು ಮಂದಿ ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಅದೇ ಸಮಯದಲ್ಲಿ, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News