ಮುಂಬೈ: ನಿರ್ಮಾಣ ಹಂತದ ಕಟ್ಟಡ ಕುಸಿತ, 1 ಸಾವು, ಹಲವರಿಗೆ ಗಾಯ

ಇಂದು ಮುಂಜಾನೆ ಗೋರೆಗಾಂವ್ ಪ್ರದೇಶದಲ್ಲಿ ನಿರ್ಮಾಣ ಹಂತದ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. 

Last Updated : Dec 23, 2018, 05:17 PM IST
ಮುಂಬೈ: ನಿರ್ಮಾಣ ಹಂತದ ಕಟ್ಟಡ ಕುಸಿತ, 1 ಸಾವು, ಹಲವರಿಗೆ ಗಾಯ title=
Pic: ANI

ಮುಂಬೈ: ಗೋರೆಗಾಂವ್ ಪ್ರದೇಶದಲ್ಲಿ ಆಜಾದ್ ಮೈದಾನ ಬಳಿ ನಿರ್ಮಾಣ ಹಂತದ ಕಟ್ಟಡದ ಕುಸಿತದಲ್ಲಿ 1 ವ್ಯಕ್ತಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ಸಂಭವಿಸಿದೆ.  ಕೆಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗಬಹುದು ಎನ್ನಲಾಗಿದೆ.

ತಕ್ಷಣದ ಸ್ಥಳಕ್ಕೆ ದೌಡಾಯಿಸಿದ ಎನ್‌ಟಿಆರ್‌ಎಫ್ ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಅವಶೇಷಗಳಡಿ ಸಿಲುಕಿರುವವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Trending News