ರಿಲಯನ್ಸ್ ಕಮ್ಯುನಿಕೇಷನ್ಸ್ ನಿರ್ದೇಶಕ ಸ್ಥಾನಕ್ಕೆ ಅನಿಲ್ ಅಂಬಾನಿ ರಾಜೀನಾಮೆ

ಅನಿಲ್ ಅಂಬಾನಿ ರಿಲಯನ್ಸ್ ಕಮ್ಯುನಿಕೇಷನ್ಸ್ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಕಂಪನಿ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.

Last Updated : Nov 16, 2019, 06:06 PM IST
ರಿಲಯನ್ಸ್ ಕಮ್ಯುನಿಕೇಷನ್ಸ್ ನಿರ್ದೇಶಕ ಸ್ಥಾನಕ್ಕೆ ಅನಿಲ್ ಅಂಬಾನಿ ರಾಜೀನಾಮೆ title=
file photo

ನವದೆಹಲಿ: ಅನಿಲ್ ಅಂಬಾನಿ ರಿಲಯನ್ಸ್ ಕಮ್ಯುನಿಕೇಷನ್ಸ್ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಕಂಪನಿ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.

ಅನಿಲ್ ಅಂಬಾನಿ ಜೊತೆಗೆ ಚಾಯಾ ವಿರಾಣಿ, ರೈನಾ ಕರಣಿ, ಮಂಜರಿ ಕಾಕರ್, ಸುರೇಶ್ ರಂಗಾಚಾರ್ ಅವರು ಆರ್ಕಾಂ ನಿರ್ದೇಶಕರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಣಿಕಾಂತನ್ ವಿ. ಅವರು ಈ ಹಿಂದೆ ಕಂಪನಿಯ ನಿರ್ದೇಶಕರು ಮತ್ತು ಮುಖ್ಯ ಹಣಕಾಸು ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಮೇಲೆ ತಿಳಿಸಿದ ರಾಜೀನಾಮೆಗಳನ್ನು ಕಂಪನಿಯ ಸಾಲಗಾರರ ಸಮಿತಿ ಪರಿಗಣಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪ್ರಸ್ತುತ ದಿವಾಳಿಯತ್ತ ಸಾಗುತ್ತಿರುವ ರಿಲಯನ್ಸ್ ಕಮ್ಯುನಿಕೇಷನ್ಸ್ ಕಂಪನಿ 2019 ಜುಲೈ-ಸೆಪ್ಟೆಂಬರ್ ರ ಅವಧಿಯಲ್ಲಿ 30,142 ಕೋಟಿ ರೂ.ನಷ್ಟ ಅನುಭವಿಸಿದೆ.

Trending News