ಬೆಂಗಳೂರು: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹರಿಹರ ಇಲ್ಲಿ ತಂತ್ರಜ್ಞಾನ ತರಬೇತಿಗಳ ಸಂಸ್ಥೆಗಳಿಗೆ ನೆರವಿನ ಯೋಜನೆಯಡಿಯಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಲ್ಲಿ ಪ.ಜಾತಿ/ಪ.ಪಂಗಡದವರಿಗೆ ಉಚಿತವಾಗಿ ತರಬೇತಿ ನೀಡಲಾಗುವುದು.
18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉದ್ಯೋಗಾವಕಾಶ ಕಲ್ಪಿಸಲು ಎಸ್.ಎಸ್.ಎಲ್.ಸಿ./ಐ.ಟಿ.ಐ/ಡಿಪ್ಲೋಮ/ಬಿ.ಇ. ಪಾಸ್ ಆಗಿರುವ ಅಭ್ಯರ್ಥಿಗಳಿಗೆ 3 ತಿಂಗಳ ಅವಧಿಯ ಸಿಎನ್‍ಸಿ ಟೆಕ್ನಲಾಜಿಸ್ಟ್, ಸಿಎನ್‍ಸಿ ಪ್ರೋಗ್ರಾಮ್,/ಸಿಎನ್‍ಸಿ ಆಪರೇಟರ್ ವರ್ಟಿಕಲ್ ಮಶೀನಿಂಗ್ ಸೆಂಟರ್/ಕನ್‍ವೆನ್‍ಶನಲ್ ಮಿಲ್ಲಿಂಗ್/ಟರ್ನಿಂಗ್ ಆಪರೇಟರ್ ಉಚಿತ ತರಬೇತಿ ಕಾರ್ಯಕ್ರಮಗಳನ್ನು ನಡೆಸಲಾಗುವುದು.
ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನವಾಗಿರುತ್ತದೆ. ತರಬೇತಿ ಮುಗಿದ ನಂತರ ಉದ್ಯೋಗಾವಕಾಶಕ್ಕೆ ಮಾರ್ಗದರ್ಶನ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಶಿಷ್ಯವೇತನ ಸಹ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಜಿ.ಟಿ.ಟಿ.ಸಿ, 22 ಅ & ಆ, ಕೆಐಎಡಿಬಿ, ಇಂಡಸ್ಟ್ರಿಯಲ್ ಏರಿಯ ಹರ್ಲಾಪುರ, ಕೆಎಎಸ್‍ಆರ್‍ಟಿಸಿ ಡಿಪೋ ಹತ್ತಿರ, ಹರಿಹರ, ದೂರವಾಣಿ ಸಂಖ್ಯೆ : 08192-243937. 7019600676, 8711913947, 8884488202 ಇವರನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.