ನವದೆಹಲಿ: ದ್ವೇಷ ಮತ್ತು ವಿಭಜನೆಯ ರಾಜಕಾರಣದಿಂದ ನಾನು ನನ್ನ ತಂದೆಯನ್ನು ಕಳೆದುಕೊಂಡೆ. ಅದರೆ, ನನ್ನ ಪ್ರೀತಿಯ ದೇಶವನ್ನೂ ಕಳೆದುಕೊಳ್ಳಲು ನಾನು ಇಷ್ಟಪಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ತಮಿಳುನಾಡಿನ ಶ್ರೀಪೆರಂಬೂದೂರಿನಲ್ಲಿ ʼಭಾರತ್ ಜೋಡೊ ಯಾತ್ರೆʼಗೆ ಚಾಲನೆ ನೀಡಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಕುರಿತು ಟ್ವಿಟರ್ನಲ್ಲಿ ಫೋಟೋಗಳನ್ನು ಹಂಚಿಕೊಂಡಿರುವ ಅವರು, ‘ಪ್ರೀತಿ ದ್ವೇಷವನ್ನು ಜಯಿಸುತ್ತದೆ. ಭರವಸೆ ಭಯವನ್ನು ಸೋಲಿಸುತ್ತದೆ. ಒಟ್ಟಾಗಿ ನಾವು ಜಯ ಸಾಧಿಸುತ್ತೇವೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ‘ಝಡ್ ಪ್ಲಸ್’ ಭದ್ರತೆ
I lost my father to the politics of hate and division. I will not lose my beloved country to it too.
Love will conquer hate. Hope will defeat fear. Together, we will overcome. pic.twitter.com/ODTmwirBHR
— Rahul Gandhi (@RahulGandhi) September 7, 2022
ಕಾಂಗ್ರೆಸ್ ನ 'ಭಾರತ್ ಜೋಡೋ ಯಾತ್ರೆ' ಇಂದು ಆರಂಭವಾಗಲಿದೆ. ಇದಕ್ಕೂ ಮುನ್ನ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪೂಜೆ ಸಲ್ಲಿಸಿ, ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡರು. ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಈ ಯಾತ್ರೆ ಆರಂಭಿಸಲಿದ್ದಾರೆ. ಈ ಯಾತ್ರೆಯು 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹಾದುಹೋಗುತ್ತದೆ. ಸುಮಾರು 150 ದಿನಗಳ ಈ ಪಾದಯಾತ್ರೆಯಲ್ಲಿ 3,570 ಕಿ.ಮೀ. ಕ್ರಮಿಸಲಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.