ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಗೆಹ್ಲೋಟ್ ನಕಾರ.!

Rajasthan Political Crisis: ಸೋನಿಯಾ ಗಾಂಧಿ ಜೊತೆ ಮಾತುಕತೆ ನಡೆಸಿದ ಬಳಿಕ,  ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಗೆಹ್ಲೋಟ್ ನಿರಾಕರಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು  ಹೇಳಿದ್ದಾರೆ. 

Written by - Ranjitha R K | Last Updated : Sep 29, 2022, 03:44 PM IST
  • ಕಾಂಗ್ರೆಸ್ ನಾಯಕಿಯನ್ನು ಭೇಟಿ ಮಾಡಿದ ಅಶೋಕ್ ಗೆಹ್ಲೋಟ್
  • ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಕಾರ
  • ಸೋನಿಯಾ ಗಾಂಧಿ ಬಳಿ ಕ್ಷಮೆಯಾಚಿಸಿದ ಗೆಹ್ಲೋಟ್
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು  ಗೆಹ್ಲೋಟ್ ನಕಾರ.!  title=
Ashok Gehlot

Rajasthan Political Crisis: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ದೆಹಲಿಯಲ್ಲಿ ಕಾಂಗ್ರೆಸ್  ನಾಯಕಿ  ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಸೋನಿಯಾ ಗಾಂಧಿ ಜೊತೆ ಮಾತುಕತೆ ನಡೆಸಿದ ಬಳಿಕ, ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಗೆಹ್ಲೋಟ್ ನಿರಾಕರಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು  ಹೇಳಿದ್ದಾರೆ. 

ಸೋನಿಯಾ ಗಾಂಧಿ ಬಳಿ ಕ್ಷಮೆಯಾಚಿಸಿದ ಗೆಹ್ಲೋಟ್ : 
 ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಅವರ ಬಳಿ ಕ್ಷಮೆಯಾಚಿಸಿರುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ. ನಾನು ಸೋನಿಯಾ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಕಳೆದ 50 ವರ್ಷಗಳಲ್ಲಿ ನಾನು ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಸೈನಿಕನಾಗಿ ಕೆಲಸ ಮಾಡಿದ್ದೇನೆ. ಹೈಕಮಾಂಡ್ ಸಂಪೂರ್ಣ ವಿಶ್ವಾಸದಿಂದ ನನಗೆ ಜವಾಬ್ದಾರಿ ನೀಡಿತ್ತು. ಪಕ್ಷದ  ರಾಜ್ಯಾಧ್ಯಕ್ಷ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಲವು ಹುದ್ದೆಗಳನ್ನು ನಿಭಾಯಿಸಿದ್ದೇನೆ. ಆದರೆ ಎರಡು ದಿನಗಳ ಹಿಂದೆ ನಡೆದ ಘಟನೆಯಿಂದ ಅತೀವ ದುಃಖ ಮತ್ತು ನೋವಾಗಿದೆ ಎಂದು ಅವರು ಹೇಳಿದ್ದಾರೆ. 
 
ಇದನ್ನೂ ಓದಿ : Weather Update: ಈ ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ!

ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸಲು ನಕಾರ : 
ಇನ್ನು ದೆಹಲಿಯಲ್ಲಿ ಒನ್ ಲೈನ್ ಪ್ರಸ್ತಾವನೆಯನ್ನು ಅಂಗೀಕರಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್‌ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ  ವಿಷಾದ ವ್ಯಕ್ತಪಡಿಸುತ್ತಿದ್ದೇನೆ. ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ನಿರ್ಧರಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ. 

ಸಿಎಂ ಹುದ್ದೆಯ ಬಗ್ಗೆ : 
 ಇದೇ ವೇಳೆ, ರಾಜಸ್ಥಾನದ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಗೆಹ್ಲೋಟ್ ಸ್ಪಷ್ಟವಾಗಿ ಏನನ್ನೂ ಹೇಳಲಿಲ್ಲ. ರಾಜಸ್ಥಾನದ ಸಿಎಂ ಹುದ್ದೆಯ ನಿರ್ಧಾರವನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ತಿಳಿಸಿದ್ದಾರೆ. 

ಇದನ್ನೂ ಓದಿ : Airtel Payments Bank: ಹಳ್ಳಿಗಳಿಗೆ ಬರಲಿವೆ 1.5 ಲಕ್ಷ ಮೈಕ್ರೋ ಎಟಿಎಂಗಳು!

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News