ಮುಂಬೈ: ದರ ಹೆಚ್ಚಳಕ್ಕೆ ಒತ್ತಾಯಿಸಿ ನಾಳೆ ಆಟೋ ಚಾಲಕರ ಮುಷ್ಕರ

ದರ ಹೆಚ್ಚಳಕ್ಕೆ ಒತ್ತಾಯಿಸಿ ಆಟೋ ರಿಕ್ಷಾ ಚಾಲಕರು ಸೋಮವಾರ ಮಧ್ಯರಾತ್ರಿ 12 ಗಂಟೆಯಿಂದ ಮಂಗಳವಾರ ಮಧ್ಯರಾತ್ರಿ 12 ಗಂಟೆಯವರೆಗೆ ಮುಷ್ಕರಕ್ಕೆ ಆಟೋ ಚಾಲಕರ ಸಂಘ ಕರೆ ನೀಡಿದೆ.

Last Updated : Jul 8, 2019, 02:00 PM IST
ಮುಂಬೈ: ದರ ಹೆಚ್ಚಳಕ್ಕೆ ಒತ್ತಾಯಿಸಿ ನಾಳೆ ಆಟೋ ಚಾಲಕರ ಮುಷ್ಕರ title=

ಮುಂಬೈ: ನಗರದಲ್ಲಿ ಮಂಗಳವಾರ ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದು, ಜನಸಾಮಾನ್ಯರಿಗೆ ಪ್ರಯಾಣಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ. 

ದರ ಹೆಚ್ಚಳಕ್ಕೆ ಒತ್ತಾಯಿಸಿ ಆಟೋ ರಿಕ್ಷಾ ಚಾಲಕರು ಸೋಮವಾರ ಮಧ್ಯರಾತ್ರಿ 12 ಗಂಟೆಯಿಂದ ಮಂಗಳವಾರ ಮಧ್ಯರಾತ್ರಿ 12 ಗಂಟೆಯವರೆಗೆ ಮುಷ್ಕರಕ್ಕೆ ಆಟೋ ಚಾಲಕರ ಸಂಘ ಕರೆ ನೀಡಿದೆ ಎಂದು ಎಎನ್ಐ ವರದಿ ಮಾಡಿದೆ. ಮುಂಬೈನಲ್ಲಿ ಕೇವಲ ಒಂದು ವರ್ಷದಲ್ಲಿ ಆಟೋಗಳ ಸಂಖ್ಯೆ ದ್ವಿಗುಣಗೊಂಡಿರುವುದರಿಂದ ರಾಜ್ಯ ಸರ್ಕಾರ ಪರವಾನಿಗೆ ನೀಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಆಟೋ ಚಾಲಕರ ಸಂಘಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸುಮಾರು 2 ಲಕ್ಷ ಆಟೋಗಳು ಸಂಚಾರ ನಿಲ್ಲಿಸಲಿವೆ ಎಂದು ಅಂದಾಜಿಸಲಾಗಿದೆ.

Trending News