ಪುಣೆ: ಬೈಕ್ ಟ್ಯಾಕ್ಸಿ ಬುಕ್ಕಿಂಗ್‌ಗೆ ಸಂಬಂಧಿಸಿದ ಕಾನೂನುಬಾಹಿರ ಆ್ಯಪ್‌ಗಳ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆ ಪುಣೆಯ ಆಟೋ ರಿಕ್ಷಾ ಯೂನಿಯನ್ ಇಂದಿನಿಂದ(ಡಿ.12) ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿವೆ.
ಬೈಕ್ ಟ್ಯಾಕ್ಸಿಗಳ ವಿರುದ್ಧ ಸಮರ ಸಾರಿದ್ದ ಆಟೋ ಚಾಲಕರು ನವೆಂಬರ್ 28ರಂದು ಮುಷ್ಕರ ಪ್ರಾರಂಭಿಸಿದ್ದರು. ಬೈಕ್ ಟ್ಯಾಕ್ಸಿಗಳ ವಿರುದ್ಧ ಡಿಸೆಂಬರ್ 10ರೊಳಗೆ ಕ್ರಮ ಕೈಗೊಳ್ಳುವುದಾಗಿ ಮಹಾರಾಷ್ಟ್ರ ಸರ್ಕಾರ ಭರವಸೆ ನೀಡಿತ್ತು. ಈ ಹಿನ್ನೆಲೆ ಕೆಲವು ದಿನಗಳ ನಂತರ ಪ್ರತಿಭಟನೆ ಹಿಂಪಡೆದುಕೊಳ್ಳಲಾಗಿತ್ತು. ಆದರೆ ಬೈಕ್ ಟ್ಯಾಕ್ಸಿಗಳ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರದ ನೀತಿಯನ್ನು ಖಂಡಿಸಿ ಪುಣೆಯ ಪ್ರಮುಖ ಆಟೋ ಮತ್ತು ರಿಕ್ಷಾ ಯೂನಿಯನ್‌ಗಳು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧಿಸಿವೆ.
ಆಟೋ ರಿಕ್ಷಾ ಚಾಲಕರು ಮತ್ತು ಯೂನಿಯನ್‍ಗಳ ಬೇಡಿಕೆಗಳನ್ನು ಈಡೇರಿಸುವವರೆಗೂ ಆಟೋಗಳು ಬೀದಿಗೆ ಇಳಿಯುವುದಿಲ್ಲವೆಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ. ಪುಣೆಯ ಪ್ರಾದೇಶಿಕ ಸಾರಿಗೆ ಕಚೇರಿಯ ಸಮೀಪವಿರುವ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಬೈಕ್ ಟ್ಯಾಕ್ಸಿಗಳಿಂದ ನಮ್ಮ ವ್ಯಾಪಾರಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಯಾವುದೇ ರೀತಿಯ ಅನುಮತಿ ಇಲ್ಲದೆ ಬೈಕ್ ಟ್ಯಾಕ್ಸಿಗಳು ಪುಣೆ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ರಿಕ್ಷಾ ಒಕ್ಕೂಟಗಳು ಆರೋಪಿಸಿವೆ. ಬೈಕ್ ಟ್ಯಾಕ್ಸಿಗಳ ವಿರುದ್ಧ ಆರ್‌ಟಿಒ ಕ್ರಮ ಕೈಗೊಂಡು ಅವುಗಳ ಚಟುವಟಿಕೆಗಳಿಗೆ ಶಾಶ್ವತ ಕಡಿವಾಣ ಹಾಕಬೇಕು ಎಂದು ಸಂಘಗಳು ಒತ್ತಾಯಿಸಿವೆ.
ಇದನ್ನೂ ಓದಿ: Wedding Viral Video: ಮದುವೆ ಮನೆಯಲ್ಲಿ ಪಾತ್ರೆ ಹಿಡಿದು ಕುಣಿದಾಡಿದ ಅತಿಥಿಗಳು: ವಧು-ವರನ ಕಥೆ ಏನು ನೋಡಿ
ಆಟೋ ರಿಕ್ಷಾ ಚಾಲಕರ ಒಕ್ಕೂಟಗಳ ಒತ್ತಾದಯ ಮೇರೆಗೆ RTO ಇತ್ತೀಚೆಗೆ ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳ ವಿರುದ್ಧ ಪ್ರಮುಖವಾಗಿ Rapido ವಿರುದ್ಧ ಅನೇಕ ಕಾರ್ಯಾಚರಣೆಗಳನ್ನು ಕೈಗೊಂಡಿತ್ತು. ಕಂಪನಿಗಳ ನೂರಾರು ಬೈಕ್ ಟ್ಯಾಕ್ಸಿಗಳನ್ನು 1 ತಿಂಗಳವರೆಗೆ ವಶಕ್ಕೆ ತೆಗೆದುಕೊಂಡು10 ಸಾವಿರ ರೂ. ದಂಡವನ್ನೂ ವಿಧಿಸಲಾಗಿತ್ತು.
‘ನಾವು ರಾಪಿಡೊ ಬೈಕ್ ಟ್ಯಾಕ್ಸಿ ಸೇವೆಯ ವಿರುದ್ಧ ಮಾತ್ರವಲ್ಲದೆ ಪುಣೆಯಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ನಡೆಸುತ್ತಿರುವ ಹಲವಾರು ಪ್ರಮುಖರ ವಿರುದ್ಧವೂ ಹೋರಾಡುತ್ತಿದ್ದೇವೆ. ಇದು ನಮ್ಮ ವ್ಯವಹಾರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ನಾವು ಈ ಬಗ್ಗೆ ಅನೇಕ ಬಾರಿ ಸರ್ಕಾರಕ್ಕೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ನಾವು ಈ ಬಗ್ಗೆ ದೂರು ಹೇಳಿದರೆ ಅಧಿಕಾರಿಗಳು ಮತ್ತು ರಾಜಕಾರಣಿಗಳು ತಮ್ಮವರನ್ನೇ ದೂಷಿಸುತ್ತಾರೆ. ನವೆಂಬರ್ 28ರಂದು ನಮ್ಮ ಮುಷ್ಕರವನ್ನು ಕೊನೆಗೊಳಿಸಿದ ಬಳಿಕವೂ ನಾವು ಪುಣೆ ಜಿಲ್ಲಾಧಿಕಾರಿ ಮತ್ತು ರಾಜ್ಯ ಸಾರಿಗೆ ಇಲಾಖೆಯ ಇತರ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಲು ಪ್ರಯತ್ನಿಸಿದ್ದೇವೆ. ಆದರೆ ಯಾರೂ ಸಹ ನಮ್ಮ ಸಮಸ್ಯೆಗೆ ಪರಿಹಾರ ನೀಡುವ ಪ್ರಯತ್ನ ಮಾಡಿಲ್ಲವೆಂದು ಬಗ್ಟೋಯ್ ರಿಕ್ಷಾವಾಲಾ ಆಟೋ ಯೂನಿಯನ್ ಅಧ್ಯಕ್ಷ ಕೇಶವ ಕ್ಷಿಸಾಗರ್ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಧೂಮಪಾನಿಗಳಿಗೆ ಶಾಕಿಂಗ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ...!
ಬೈಕ್ ಟ್ಯಾಕ್ಸಿಗಳ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರದ ನೀತಿಯನ್ನು ಖಂಡಿಸಿ ಇದೀಗ ನಾವು ಡಿ.12ರಿಂದ ಅನಿರ್ದಿಷ್ಟ ಮುಷ್ಕರ ಕೈಗೊಳ್ಳಲು ದೃಢ ನಿರ್ಧಾರ ಮಾಡಿದ್ದೇವೆ. ಇದರಿಂದ ಸಾರ್ವಜನಿಕರಿಗೆ ಉಂಟಾಗುವ ಅನಾನುಕೂಲತೆಗೆ ರಾಜ್ಯ ಸರ್ಕಾರವೆ ಹೊಣೆ ಅಂತಾ ಕ್ಷಿಸಾಗರ್ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.