ಅಯೋಧ್ಯೆ ವಿವಾದ: ಸುಪ್ರೀಂಕೋರ್ಟ್ ತೀರ್ಪಿನ ಹೈಲೈಟ್ಸ್

ಜನ್ಮಭೂಮಿ ವಿವಾದವನ್ನು ದಾವೆದಾರರು ಪರಸ್ಪರ ರಾಜೀ ಸಂಧಾನದ ಮೂಲಕವೇ ಬಗೆಹರಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

Last Updated : Mar 8, 2019, 12:01 PM IST
ಅಯೋಧ್ಯೆ ವಿವಾದ: ಸುಪ್ರೀಂಕೋರ್ಟ್ ತೀರ್ಪಿನ ಹೈಲೈಟ್ಸ್ title=

ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದವನ್ನು ದಾವೆದಾರರು ಪರಸ್ಪರ ರಾಜೀ ಸಂಧಾನದ ಮೂಲಕವೇ ಬಗೆಹರಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.

ಸುಪ್ರೀಂಕೋರ್ಟ್ ತೀರ್ಪಿನ ಹೈಲೈಟ್ಸ್:

- ದಶಕಗಳ ಕಾಲ ಹಿಂದೂ ಮತ್ತು ಮುಸ್ಲಿಂ ಬಾಂಧವರ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದ ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಧಾನದ ಮುಖಾಂತರವೇ ಶಾಶ್ವತ ಪರಿಹಾರ ಕಂಡು ಕೊಳ್ಳಿ.

- ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಮೂವರು ಸಂಧಾನಕಾರರ ನೇಮಕ.

-  ಈ ಪ್ರಕ್ರಿಯೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಎಫ್.ಎಂ. ಖಾಲಿಫುಲ್ಲಾ ನೇತೃತ್ವ ವಹಿಸಲಿದ್ದು, ಶ್ರೀ ಶ್ರೀ ರವಿಶಂಕರ್ ಮತ್ತು ಹಿರಿಯ ವಕೀಲ ಶ್ರೀರಾಮ್ ಪಂಚೂ ಸಂಧಾನ ಸಮಿತಿಯಲ್ಲಿರಲಿದ್ದಾರೆ.

- ಸಂಧಾನ ಪ್ರಕ್ರಿಯೆ ನಾಲ್ಕು ವಾರಗಳೊಳಗೆ ಆರಂಭಗೊಂಡು ಎಂಟು ವಾರಗಳ ಒಳಗೆ ಪೂರ್ಣಗೊಳ್ಳಬೇಕು.

- ಸಮಿತಿಯು ನಾಲ್ಕು ವಾರಗಳಲ್ಲಿ ಮಧ್ಯಸ್ಥಿಕೆ ಪ್ರಕ್ರಿಯೆಯ ಕುರಿತು ಮೊದಲ ಸ್ಥಿತಿ ವರದಿ ಸಲ್ಲಿಸಬೇಕು.

- ಫೈಜಾಬಾದ್‌ನಲ್ಲಿ ಮಧ್ಯಸ್ಥಿಕೆ ಪ್ರಕ್ರಿಯೆ ನಡೆಯಬೇಕು.

-  ಮಧ್ಯಸ್ಥಿಕೆ ಪ್ರಕ್ರಿಯೆಗಳನ್ನು ಕ್ಯಾಮರಾದಲ್ಲಿ ಸೆರೆಹಿಡಿಯಬೇಕು.  

- ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಮಾಧ್ಯಮವನ್ನು ಮಧ್ಯಸ್ಥಿಕೆ ಪ್ರಕ್ರಿಯೆಯಲ್ಲಿ ವರದಿ ಮಾಡುವುದನ್ನು ತಡೆಹಿಡಿಯಲಾಗಿದೆ.

- ಸಂಧಾನಕಾರರಿಗೆ ಉತ್ತರ ಪ್ರದೇಶ ಸರ್ಕಾರ ಎಲ್ಲಾ ಸೌಲಭ್ಯ ಒದಗಿಸಬೇಕು. 

- ಸಂಧಾನಕಾರರು ಅಗತ್ಯವೆನಿಸಿದಲ್ಲಿ ಹೆಚ್ಚಿನ ಕಾನೂನು ಸಹಕಾರ ಪಡೆಯಬಹುದು. 
 

Trending News