Ayodhya Ram Mandir: ಅಯೋಧ್ಯಾ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ಗುರುವಾರವಷ್ಟೇ(ಜ.18) ಗರ್ಭಗುಡಿಯಲ್ಲಿ ರಾಮಲಲ್ಲಾ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿತ್ತು. ಇದರ ಬೆನ್ನಲ್ಲೇ ಶುಕ್ರವಾರ ಪೂರ್ಣರೂಪದ ಬಾಲರಾಮನದ ದರ್ಶನವಾಗಿದೆ. ಬಾಲರಾಮನ ಸಂಪೂರ್ಣ ವಿಗ್ರಹದ ಫೋಟೋ ಹಂಚಿಕೊಳ್ಳಲಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ರಾಮ ಭಕ್ತರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಬಾಲರಾಮನ ವಿಗ್ರಹದ ಫೋಟೋವನ್ನು ಹಂಚಿಕೊಂಡು ‘ಜೈ ಶ್ರೀ ರಾಮ್’ ಎಂದು ಬರೆದುಕೊಳ್ಳುತ್ತಿದ್ದಾರೆ. ಈ ವಿಗ್ರಹದಲ್ಲಿ ಏನೇನು ವಿಶೇಷತೆಗಳು ಇವೆ ಅನ್ನೋದರ ಬಗ್ಗೆ ಅನೇಕರು ಕುತೂಹಲ ಹೊಂದಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: Ayodhya: ಅಯೋಧ್ಯೆಗೆ ಹೋಗಲು ಬಯಸುವವರಿಗೆ ಗುಡ್ ನ್ಯೂಸ್.. ರೈಲ್ವೆ ಇಲಾಖೆ ಮಹತ್ವದ ನಿರ್ಧಾರ!
ಬಾಲರಾಮನ ವಿಗ್ರಹದ ವಿಶೇಷತೆ ಏನು?
#RamMandir #JaiShriRam #RamLalla #AyodhyaRamTemple pic.twitter.com/rN8DrFtDGV
— Zee Kannada News (@ZeeKannadaNews) January 19, 2024
51 ಇಂಚು ಎತ್ತರವಿರುವ ಮಂದಸ್ಮಿತ ಮುಖ ಹೊಂದಿರುವ ಈ ಬಾಲರಾಮನ ಮೂರ್ತಿಯ ಬಲಗೈಯಲ್ಲಿ ಬಾಣ, ಎಡಗೈಯಲ್ಲಿ ಬಿಲ್ಲು ಹಿಡಿದಿರುವ ಭಂಗಿಯಲ್ಲಿದೆ. ಬಾಲರಾಮನ ಹಣೆಯ ಮೇಲೆ ತಿಲಕವಿದೆ. ಮೂರ್ತಿಯ ಮೇಲ್ಬಾಗ ಸೂರ್ಯವಂಶದ ಶ್ರೀರಾಮಚಂದ್ರನನ್ನು ಬಿಂಬಿಸುವಂತಹ ಸೂರ್ಯದೇವರ ಕೆತ್ತನೆ ಮಾಡಲಾಗಿದೆ.
ಬಾಲರಾಮನ ಕಿರೀಟದ ಮೇಲೆ ನರಸಿಂಹ ದೇವರ ಕೆತ್ತನೆ ಇದೆ. ದಶಾವತಾರ ಬಿಂಬಿಸುವ ಮತ್ಸ್ಯ, ಕೂರ್ಮ, ವರಾಹ, ವಾಮನ, ಕೃಷ್ಣ, ಕಲ್ಕಿ, ಬುದ್ಧ, ಪರಶುರಾಮ, ಬ್ರಹ್ಮ, ಓಂ, ಆದಿಶೇಷ, ಚಕ್ರ ಹಾಗೂ ಈಶ್ವರ ಬಲ ಭಾಗದಲ್ಲಿದ್ದಾನೆ. ಇನ್ನು ಎಡಗಡೆ ಹಾಗೂ ಮೇಲ್ಗಡೆ ಶಂಕ, ಗಧೆ, ಸ್ವಸ್ತಿಕ್, ವಿಷ್ಣು, ಪರಶುರಾಮ, ರಾಮ, ಕೃಷ್ಣ, ಬುದ್ಧ, ಕ್ಲಕಿ ಹಾಗೂ ನೆತ್ತಿಯ ಮೇಲೆ ಸೂರ್ಯನಿದ್ದಾನೆ.
ಇದನ್ನೂ ಓದಿ: ಸರಿಯಿತು ಶ್ರೀರಾಮನ ವಿಗ್ರಹದ ಮೇಲಿನ ಪರದೆ : ಹೀಗಿದ್ದಾನೆ ನೋಡಿ ಅಯೋಧ್ಯೆ ರಾಮ
Ayodhya, UP | Glimpse of the idol of Lord Ram inside the sanctum sanctorum of the Ram Temple in Ayodhya
(Source: Sharad Sharma, media in-charge of Vishwa Hindu Parishad) pic.twitter.com/vSuDNzpHm4
— ANI (@ANI) January 19, 2024
ವಿಗ್ರಹವನ್ನು ಬಿಳಿ ಬಟ್ಟೆಯಿಂದ ಮುಚ್ಚಲಾಗಿತ್ತು: ಇದಕ್ಕೂ ಮೊದಲು ರಾಮಲಲ್ಲಾ ವಿಗ್ರಹವನ್ನು ಬಿಳಿ ಬಟ್ಟೆಯಿಂದ ಮುಚ್ಚಲಾಗಿತ್ತು. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ 51 ಇಂಚಿನ ರಾಮಲಲ್ಲಾ ವಿಗ್ರಹವನ್ನು ಗುರುವಾರ ಮುಂಜಾನೆ ದೇವಸ್ಥಾನಕ್ಕೆ ತರಲಾಯಿತು. ಅರ್ಚಕ ಅರುಣ್ ದೀಕ್ಷಿತ್ ಅವರು ರಾಮಲಲ್ಲಾ ವಿಗ್ರಹವನ್ನು ಗುರುವಾರ ಮಧ್ಯಾಹ್ನ ಗರ್ಭಗುಡಿಯಲ್ಲಿ ಸ್ಥಾಪಿಸಲಾಗಿದೆ ಎಂದು ಹೇಳಿದ್ದಾರೆ.
ಜನವರಿ 22ರ ಸೋಮವಾರ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಭದ್ರತೆಯ ಕಾರಣ ಈ ದಿನ ಆಹ್ವಾನಿತ ಅತಿಥಿಗಳಿಗೆ ಮಾತ್ರ ದೇವಾಲಯಕ್ಕೆ ಪ್ರವೇಶ ನೀಡಲಾಗುತ್ತಿದೆ. ಪ್ರಾಣ ಪ್ರತಿಷ್ಠಾಪನೆಯ ಮರುದಿನ ದೇವಾಲಯವನ್ನು ಸಾರ್ವಜನಿಕರ ದರ್ಶನಕ್ಕೆ ತೆರೆಯಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.