ಬಾಲಕೋಟ್ ವಾಯುದಾಳಿ ಮೋದಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ನೆರವಾಗುತ್ತದೆ-ಯೋಗಿ ಆದಿತ್ಯನಾಥ್

ಫೆಬ್ರವರಿ 26 ರಂದು ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಐಎಎಫ್ ವಾಯುಪಡೆ ದಾಳಿ ನರೇಂದ್ರ ಮೋದಿಯವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಲು ಸಹಾಯ ಮಾಡುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

Last Updated : Mar 12, 2019, 04:51 PM IST
ಬಾಲಕೋಟ್ ವಾಯುದಾಳಿ ಮೋದಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ನೆರವಾಗುತ್ತದೆ-ಯೋಗಿ ಆದಿತ್ಯನಾಥ್ title=

ನವದೆಹಲಿ: ಫೆಬ್ರವರಿ 26 ರಂದು ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಐಎಎಫ್ ವಾಯುಪಡೆ ದಾಳಿ ನರೇಂದ್ರ ಮೋದಿಯವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಲು ಸಹಾಯ ಮಾಡುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ತಮ್ಮ ಟ್ವೀಟರ್ ನಲ್ಲಿ ಕವಿತೆಯೊಂದನ್ನು ಬರೆದು ಉತ್ತರಪ್ರದೇಶದಲ್ಲಿ 80 ಸ್ಥಾನಗಳಲ್ಲಿ ಕನಿಷ್ಠ 74 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

"ನರೇಂದ್ರ ಮೋದಿ ಪಾಕಿಸ್ತಾನದ ಮೇಲೆ ವಾಯುದಾಳಿ ಕೊಂಡಿರುವ ಕ್ರಮ ಮತ್ತೊಮ್ಮೆ  ಸರ್ಕಾರ ರಚನೆ ಮಾಡಲು ನೆರವಾಗುತ್ತದೆ" ಎಂದು ಯೋಗಿ ಟ್ವೀಟ್ ಮಾಡಿದ್ದಾರೆ.ಇದೇ ವೇಳೆ ಹಲವು ಸರಣಿ ಟ್ವೀಟ್ ಮಾಡಿರುವ ಯೋಗಿ ಆದಿತ್ಯನಾಥ್ ವಾಯುಸೇನೆ ದಾಳಿ ಮಾಡಿರುವ ವಿಚಾರವಾಗಿ ಅನುಮಾನ ವ್ಯಕ್ತಪಡಿಸಿರುವುದಕ್ಕೆ ಕಿಡಿಕಾರಿದ್ದಾರೆ.

ಈ ವಾಯುದಾಳಿಯ ನಂತರ ಯಡಿಯೂರಪ್ಪ ಕರ್ನಾಟಕದಲ್ಲಿ ಮೋದಿ ಅಲೆಯಿಂದಾಗಿ ಬಿಜೆಪಿ ರಾಜ್ಯದಲ್ಲಿ 22 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಹೇಳಿಕೆ ನೀಡಿದ್ದರು. ಆದರೆ ಕೇಂದ್ರ ಬಿಜೆಪಿ ನಾಯಕರು ಈ ಹೇಳಿಕೆಯಿಂದ ಹಿಂದೆ ಸರಿದಿದ್ದರು.

ಈಗ ಚುನಾವಣೆ ದಿನಾಂಕ ಘೋಷಣೆಯಾಗಿದ್ದು ಏಪ್ರಿಲ್ 11 ರಿಂದ ಏಳು ಹಂತಗಳಲ್ಲಿ ದೇಶದೆಲ್ಲೆಡೆ ಲೋಕಸಭಾ ಚುನಾವಣೆ ನಡೆಯಲಿದೆ.ಸುಮಾರು 900 ಮಿಲಿಯನ್ ಮತದಾರರು ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ ಎನ್ನಲಾಗಿದೆ.

 

Trending News