"ಮತದಾರರ ಮಾಹಿತಿ ಕಳವು ಪ್ರಕರಣದಲ್ಲಿ ಬೊಮ್ಮಾಯಿ ಪ್ರಮುಖ ಕಿಂಗ್ ಪಿನ್"

  ಮತದಾರರ ಮಾಹಿತಿ ಕಳವು ಪ್ರಕರಣದಲ್ಲಿ ಬೊಮ್ಮಾಯಿ ಅವರು ಪ್ರಮುಖ ಕಿಂಗ್ ಪಿನ್ ಆಗಿದ್ದು, ಈ ವಿಚಾರವಾಗಿ ಜನರು ಹಾಗೂ ಮಾಧ್ಯಮಗಳು ಕೇಳುತ್ತಿರುವ ಪ್ರಶ್ನೆಗಳಿಗೆ ಅವರು ಉತ್ತರ ನೀಡುತ್ತಿಲ್ಲ ಎಂದು ರಣದೀಪ್ ಸಿಂಗ್ ಸುರ್ಜೆವಾಲ ಆರೋಪಿಸಿದರು.

Written by - Zee Kannada News Desk | Last Updated : Nov 25, 2022, 08:44 PM IST
  • ಬೊಮ್ಮಾಯಿ ಅವರ ಜತೆಗೆ ರವಿಕುಮಾರ್ ಅವರು ಹಾಗೂ ಅವರ ಆಪ್ತರ ಖಾತೆಗಳಿಗೆ ಕೇಂದ್ರ ಸರ್ಕಾರದ ಸಂಸ್ಥೆಯಿಂದ ಎಷ್ಟು ಕೋಟಿ ಹಣ ವರ್ಗಾವಣೆ ಮಾಡಲಾಗಿದೆ?
  • ಈ ಹಣ ಪಡೆದವರು ಯಾರು ಎಂಬುದು ತನಿಖೆ ಮೂಲಕ ಬಹಿರಂಗವಾಗಬೇಕು.
  • ಮತದಾರರ ಮಾಹಿತಿ ಕಳವು ಪ್ರಕರಣದಲ್ಲಿ ಬೊಮ್ಮಾಯಿ ಅವರು ಪ್ರಮುಖ ಕಿಂಗ್ ಪಿನ್ ಆಗಿದ್ದು,
"ಮತದಾರರ ಮಾಹಿತಿ ಕಳವು ಪ್ರಕರಣದಲ್ಲಿ ಬೊಮ್ಮಾಯಿ ಪ್ರಮುಖ ಕಿಂಗ್ ಪಿನ್" title=

ಬೆಂಗಳೂರು:  ಮತದಾರರ ಮಾಹಿತಿ ಕಳವು ಪ್ರಕರಣದಲ್ಲಿ ಬೊಮ್ಮಾಯಿ ಅವರು ಪ್ರಮುಖ ಕಿಂಗ್ ಪಿನ್ ಆಗಿದ್ದು, ಈ ವಿಚಾರವಾಗಿ ಜನರು ಹಾಗೂ ಮಾಧ್ಯಮಗಳು ಕೇಳುತ್ತಿರುವ ಪ್ರಶ್ನೆಗಳಿಗೆ ಅವರು ಉತ್ತರ ನೀಡುತ್ತಿಲ್ಲ ಎಂದು ರಣದೀಪ್ ಸಿಂಗ್ ಸುರ್ಜೆವಾಲ ಆರೋಪಿಸಿದರು.

ಮಾಹಿತಿ ಕಳವು ಹಗರಣ ಈಗ ಜನರ ಮುಂದಿದೆ. ಇತ್ತೀಚಿನ ಬೆಳವಣಿಗೆಗಳ ಪ್ರಕಾರ ಈ ಹಗರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತ್ರವಲ್ಲ ಕೇಂದ್ರದ ನರೇಂದ್ರ ಮೋದಿ ಸರ್ಕಾರವೂ ಭಾಗಿಯಾಗಿದೆ. ಕೇವಲ ಮತದಾರರ ಮಾಹಿತಿ ಕಳವು ಮಾತ್ರವಲ್ಲ ದೇಶ ಹಾಗೂ ರಾಜ್ಯದ ಹಣ ಲೂಟಿ ಮಾಡುತ್ತಿವೆ ಎಂದು ಅವರು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಹಾಲಿನ ಉತ್ಪನ್ನಗಳ ದರ ಏರಿಕೆಯಿಂದಾಗಿ ಬರುವ ಲಾಭ ಹೈನುಗಾರರಿಗೇ ನೀಡಲಿ-ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಸಿಟಿಜನ್ ಸರ್ವೀಸಸ್ ಸೆಂಟರ್ ನಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದ್ದು, ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಅವರಿಗೂ ಪಾವತಿಯಾಗಿದೆ.ಇದರಿಂದ ಈ ಹಗರಣದ ಸ್ವರೂಪ ಬೃಹದಾಕಾರವಾಗಿರುವುದು ಸ್ಪಷ್ಟವಾಗಿದೆ. ಜನರ ಹಣ ಲೂಟಿ ಮಾಡಿ, ಅವ್ಯವಹಾರ ನಡೆಸಲಾಗಿದೆ ಎಂದು ಅವರು ದೂರಿದರು.

ಇದನ್ನೂ ಓದಿ:  ಒಕ್ಕಲಿಗರು ಕೃಷಿಯ ಜತೆಗೆ ಉದ್ಯಮಿಗಳೂ ಆಗಬೇಕು : ಅಶ್ವತ್ಥ ನಾರಾಯಣ 

ಬೊಮ್ಮಾಯಿ ಅವರ ಜತೆಗೆ ರವಿಕುಮಾರ್ ಅವರು ಹಾಗೂ ಅವರ ಆಪ್ತರ ಖಾತೆಗಳಿಗೆ ಕೇಂದ್ರ ಸರ್ಕಾರದ ಸಂಸ್ಥೆಯಿಂದ ಎಷ್ಟು ಕೋಟಿ ಹಣ ವರ್ಗಾವಣೆ ಮಾಡಲಾಗಿದೆ? ಈ ಹಣ ಪಡೆದವರು ಯಾರು ಎಂಬುದು ತನಿಖೆ ಮೂಲಕ ಬಹಿರಂಗವಾಗಬೇಕು.

ಮತದಾರರ ಮಾಹಿತಿ ಕಳವು ಪ್ರಕರಣದಲ್ಲಿ ಬೊಮ್ಮಾಯಿ ಅವರು ಪ್ರಮುಖ ಕಿಂಗ್ ಪಿನ್ ಆಗಿದ್ದು, ಈ ವಿಚಾರವಾಗಿ ಜನರು ಹಾಗೂ ಮಾಧ್ಯಮಗಳು ಕೇಳುತ್ತಿರುವ ಪ್ರಶ್ನೆಗಳಿಗೆ ಅವರು ಉತ್ತರ ನೀಡುತ್ತಿಲ್ಲ. ಕೇಂದ್ರ ಸರ್ಕಾರದ ಸಂಸ್ಥೆಯಿಂದ ಆರೋಪಿ ಹಾಗೂ ಆತನ ಆಪ್ತರ ಖಾತೆಗಳಿಗೆ ಹಣ ವರ್ಗಾವಣೆ ಹೇಗಾಯಿತು? ಇದೆಲ್ಲದರ ಸತ್ಯಾಂಶ ಹೊರಬರಲು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರ ಮೇಲ್ವಿಚಾರಣೆಯಲ್ಲಿ ತನಿಖೆಯಾಗಬೇಕು.ನಾವು ಈ ವಿಚಾರವನ್ನು ಪ್ರತಿ ಕ್ಷೇತ್ರ ಹಾಗೂ ಬೂತ್ ಗಳಿಗೆ ಈ ವಿಚಾರವನ್ನು ಕೊಂಡೊಯ್ಯುತ್ತೇವೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News