Indian Railways: ಈ 6 ನಿಲ್ದಾಣಗಳಲ್ಲಿ ಸಿಗಲ್ಲ ಪ್ಲಾಟ್‌ಫಾರ್ಮ್ ಟಿಕೆಟ್‌

ಕೊರೊನಾವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಾರತೀಯ ರೈಲ್ವೆ ಮುಂಬಯಿಯ 6 ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್ ಮಾರಾಟವನ್ನು ತಕ್ಷಣದಿಂದ ಜಾರಿಗೆ ತಂದಿದೆ.

Written by - Yashaswini V | Last Updated : Apr 9, 2021, 02:20 PM IST
  • ಕಳೆದ ತಿಂಗಳು ರೈಲ್ವೆ ಪ್ಲಾಟ್‌ಫಾರ್ಮ್ ಟಿಕೆಟ್‌ಗಳ ಬೆಲೆಯನ್ನು ಹೆಚ್ಚಿಸಿದ್ದ ರೈಲ್ವೆ ಇಲಾಖೆ
  • ಕೋವಿಡ್ -19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಜನದಟ್ಟಣೆ ತಪ್ಪಿಸಲು ಈ ನಿರ್ಧಾರ ಕೈಗೊಂಡಿದ್ದ ಕೇಂದ್ರ ರೈಲ್ವೆ
  • ಇದೀಗ 6 ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್‌ ನೀಡದಿರಲು ನಿರ್ಧಾರ
Indian Railways: ಈ 6 ನಿಲ್ದಾಣಗಳಲ್ಲಿ ಸಿಗಲ್ಲ ಪ್ಲಾಟ್‌ಫಾರ್ಮ್ ಟಿಕೆಟ್‌  title=
Platform tickets will not be available at these 6 stations

ಮುಂಬೈ: ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳ ಹಿನ್ನಲೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿರುವ ಭಾರತೀಯ ರೈಲ್ವೆ, ಮುಂಬಯಿಯ 6 ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ರೈಲ್ವೆ ನಿಲ್ದಾಣದಲ್ಲಿ ಜನಸಂದಣಿಯನ್ನು ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಈ 6 ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್‌ಗಳು ಲಭ್ಯವಿರುವುದಿಲ್ಲ:
ಲೋಕನಾಯಕ್ ತಿಲಕ್ ಟರ್ಮಿನಲ್ (ಎಲ್‌ಟಿಟಿ), ಕಲ್ಯಾಣ್, ಥಾಣೆ, ದಾದರ್, ಪನ್ವೆಲ್, ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ಸ್ (ಸಿಎಸ್‌ಎಂಟಿ) ನಲ್ಲಿ ಮುಂಬೈನಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್ ಮಾರಾಟವನ್ನು ನಿಲ್ಲಿಸಲಾಗಿದೆ ಎಂದು ಕೇಂದ್ರ ರೈಲ್ವೆ ವಕ್ತಾರ ಶಿವಾಜಿ ಸುತಾರ್ ತಿಳಿಸಿದ್ದಾರೆ.

ಇದನ್ನೂ ಓದಿ - ಕೊರೊನಾ ನಿಯಂತ್ರಣಕ್ಕೆ ರಾಜ್ಯಗಳಿಗೆ ಪಂಚಸೂತ್ರವನ್ನಿತ್ತ ಪ್ರಧಾನಿ ಮೋದಿ

ಕಳೆದ ತಿಂಗಳು ರೈಲ್ವೆ ಪ್ಲಾಟ್‌ಫಾರ್ಮ್ ಟಿಕೆಟ್‌ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು:
'ನಿಲ್ದಾಣಗಳಲ್ಲಿ ಅನಗತ್ಯ ದಟ್ಟಣೆ ತಪ್ಪಿಸಲು ಮತ್ತು ಸಾಮಾಜಿಕ ದೂರವನ್ನು ಅನುಸರಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ' ಎಂದು ಶಿವಾಜಿ ಸುತಾರ್ ಹೇಳಿದರು. ಕೋವಿಡ್ -19 (Covid 19) ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಜನದಟ್ಟಣೆ ತಪ್ಪಿಸಲು ಈ ತಿಂಗಳ ಆರಂಭದಲ್ಲಿ ಕೇಂದ್ರ ರೈಲ್ವೆ ಮಹಾರಾಷ್ಟ್ರದ ಕೆಲವು ಪ್ರಮುಖ ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್‌ಗಳ ಬೆಲೆಯನ್ನು 10 ರಿಂದ 50 ರೂ.ಗೆ ಹೆಚ್ಚಿಸಿತ್ತು ಎಂಬುದು ಗಮನಾರ್ಹವಾಗಿದೆ.

ಇದನ್ನೂ ಓದಿ - Viral Video: ಮನುಷ್ಯನ ಮುಖ ಹೋಲುವ ಮೇಕೆ ಮರಿ ಜನನ 'ದೇವರ ಅವತಾರ' ಎಂದು ಪೂಜಿಸುತ್ತಿರುವ ಜನ! 

ವಾಸ್ತವವಾಗಿ ದೆಶಾದ್ಯಂತ ಕರೋನಾವೈರಸ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಅದರಲ್ಲೂ ಮುಖ್ಯವಾಗಿ ಮಹಾರಾಷ್ಟ್ರದಲ್ಲಿ (Maharashtra) ಕರೋನಾವೈರಸ್ ಪ್ರಕರಣಗಳು ಶರವೇಗದಲ್ಲಿ ಹೆಚ್ಚುತ್ತಿದೆ. ಮಹಾರಾಷ್ಟ್ರದಲ್ಲಿ ಗುರುವಾರ 56,286 ಹೊಸ ಕೊರೋನವೈರಸ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 32,29,547 ಕ್ಕೆ ತಲುಪಿದೆ. ಇದರೊಂದಿಗೆ ಇನ್ನೂ 376 ಜನರ ಸಾವಿನಿಂದಾಗಿ ರಾಜ್ಯದಲ್ಲಿ ಕರೋನಾದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 57,028 ಕ್ಕೆ ಏರಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News