ಬಿಹಾರ: ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್, ಇಬ್ಬರ ಬಂಧನ

    

Last Updated : Apr 15, 2018, 10:53 AM IST
ಬಿಹಾರ: ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್, ಇಬ್ಬರ ಬಂಧನ  title=

ನವದೆಹಲಿ: ಬಿಹಾರದ ಪಾಟ್ನಾದಲ್ಲಿ  ಪೊಲೀಸರು ಶನಿವಾರ ರಾತ್ರಿ ಮಿಥಾಪುರ ಸಬ್ಜಿ ಮಂಡಿ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಸ್ಥಳೀಯ ಪೋಲೀಸ್ ಠಾಣೆಯಿಂದ ಕೇವಲ 500 ಮೀಟರ್ ದೂರದಲ್ಲಿರುವ ಈ ಪ್ರದೇಶದಲ್ಲಿ ನಾಲ್ಕು ವ್ಯಕ್ತಿಗಳಿಂದ ಗ್ಯಾಂಗ್ ರೇಪ್  ಮಾಡುವ ಪ್ರಯತ್ನ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

ಪೊಲೀಸರು ಗಸ್ತು ತಿರುಗುವ ಸಂದರ್ಭದಲ್ಲಿ, ಬಾಲಕಿಯು ಕಿರುಚುತ್ತಿರುವ ಧ್ವನಿ ಕೇಳಿದೆ, ಆಗ ಪೊಲೀಸರು ಸ್ಥಳಕ್ಕೆ ಧಾವಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ, ಇನ್ನಿಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಅರೆ ನಗ್ನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿ ಹೇಳುವಂತೆ ರೈಲನ್ನು ಹತ್ತುತ್ತಿರುವ ಸಂದರ್ಭದಲ್ಲಿ ನಾಲ್ವರು ಮಿಥಾಪುರ್ ಸಬ್ಜಿ ಮಂಡಿ ಪ್ರದೇಶದಿಂದ ಆಕೆಯನ್ನು ಅಪಹರಿಸಿ ಅವಳನ್ನು ಗ್ಯಾಂಗ್ ರೇಪ್ ಗೈಯಲು ಪ್ರಯತ್ನಿಸಿದರು ಎನ್ನಲಾಗಿದೆ.

ಈ ಘಟನೆಯನ್ನು ತಕ್ಷಣವೇ ಉನ್ನತ ಅಧಿಕಾರಿಗಳಿಗೆ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಆ ಬಾಲಕಿಯ  ಸಂಬಂಧಿಕರಿಗೆ ಕೂಡ ಮಾಹಿತಿ ನೀಡಲಾಗಿದೆ ಎಂದು ಡೆಪ್ಯೂಟಿ ಸೂಪರಿಂಟೆಂಡೆಂಟ್ ಆಫ್ ಪೋಲಿಸ್  ತಿಳಿಸಿದ್ದಾರೆ. ಅಲ್ಲದೆ ಪರಾರಿಯಾಗಿರುವ ಇಬ್ಬರ ಪತ್ತೆಗಾಗಿ ಪೊಲೀಸರು ಬಲೆ ಬಿಸಿದ್ದಾರೆ ಎನ್ನಲಾಗಿದೆ.ಬಂಧಿತ ಆರೋಪಿಗಳನ್ನು ಪಾಟ್ನಾ ನಿವಾಸಿಗಳು ಛೋಟು ಮತ್ತು ಫೆಕನ್ ಎಂದು ಗುರುತಿಸಲಾಗಿದೆ. ಅವರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Trending News