Bihar political crisis: ಪ್ರಮುಖ ಬಿಜೆಪಿ ನಾಯಕರಿಗೆ ದೆಹಲಿಗೆ ಬುಲಾವ್

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಬಿಹಾರ ಸಿಎಂ ನಿತೀಶ್ ಕುಮಾರ್ ಭಾನುವಾರ ರಾತ್ರಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

Written by - Zee Kannada News Desk | Last Updated : Aug 9, 2022, 08:29 AM IST
  • ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟಿನ ಮಧ್ಯೆಯೇ ಪ್ರಮುಖ ನಾಯಕರಿಗೆ ದೆಹಲಿಗೆ ಬರುವಂತೆ ಬಿಜೆಪಿ ಬುಲಾವ್
  • ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆಗೆ ದೂರವಾಣಿ ಮೂಲಕ ನಿತೀಶ್ ಕುಮಾರ್ ಮಾತುಕತೆ
  • ಇಂದು ಪ್ರತ್ಯೇಕವಾಗಿ ಶಾಸಕರ ಸಭೆ ಕರೆದಿರುವ ಜೆಡಿ(ಯು), ಆರ್‌ಜೆಡಿ, ಕಾಂಗ್ರೆಸ್ ಹಾಗೂ ಎಡ ಪಕ್ಷಗಳು
Bihar political crisis: ಪ್ರಮುಖ ಬಿಜೆಪಿ ನಾಯಕರಿಗೆ ದೆಹಲಿಗೆ ಬುಲಾವ್   title=
Bihar political crisis

ನವದೆಹಲಿ: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿರುವ ಮಧ್ಯೆಯೇ ಬಿಜೆಪಿ ತನ್ನ ಪ್ರಮುಖ ನಾಯಕರಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ ಎಂದು ವರದಿಯಾಗಿದೆ. ಸದ್ಯದ ಪರಿಸ್ಥಿತಿಯ ಬಗ್ಗೆ ಅವಲೋಕಿಸಿ ಸೂಕ್ತ ಕಾರ್ಯತಂತ್ರ ರೂಪಿಸಿಕೊಳ್ಳಲು ಬಿಜೆಪಿ ಈ ಕ್ರಮಕ್ಕೆ ಮುಂದಾಗಿದೆ ಅಂತಾ ತಿಳಿದುಬಂದಿದೆ. ಈ ಹಿನ್ನೆಲೆ ಬಿಜೆಪಿ ನಾಯಕರಾದ ರವಿಶಂಕರ್ ಪ್ರಸಾದ್, ಶಹನವಾಜ್ ಹುಸೇನ್, ನಿತಿನ್ ನವೀನ್, ಸತೀಶ್ ಚಂದ್ರ ದುಬೆ ಈಗಾಗಲೇ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಬಿಹಾರ ರಾಜಕಾರಣದಲ್ಲಿ ಬದಲಾವಣೆ?  

ಬಿಹಾರದಲ್ಲಿ ಆಡಳಿತಾರೂಢ ಜೆಡಿ(ಯು), ರಾಷ್ಟ್ರೀಯ ಜನತಾ ದಳ (RJD) ಹಾಗೂ ಕಾಂಗ್ರೆಸ್ ಹಾಗೂ ಎಡ ಪಕ್ಷಗಳು ಮಂಗಳವಾರ ಪ್ರತ್ಯೇಕವಾಗಿ ಶಾಸಕರ ಸಭೆ ಕರೆದಿವೆ. ಶಾಸಕರು, ಸಂಸದರು, ಎಂಎಲ್‌ಸಿ ಹಾಗೂ ಪಕ್ಷದ ನಾಯಕರ ಸಭೆ ಕರೆದಿರುವುದನ್ನು ಜೆಡಿ(ಯು) ರಾಷ್ಟ್ರೀಯ ಅಧ್ಯಕ್ಷ ರಾಜೀವ್ ಸಿಂಗ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: UGC-NET Examination Postponed : ಯುಜಿಸಿ ನೆಟ್ ಪರೀಕ್ಷೆಯ ಹಂತ-2ನ್ನು ಮುಂದೂಡಿದ NTA, ಹೊಸ ದಿನಾಂಕದ ವಿವರ ಇಲ್ಲಿದೆ

ಬಿಹಾರದಲ್ಲಿ ಜೆಡಿ(ಯು) ಪಕ್ಷಕ್ಕೆ ಆರ್‌.ಸಿ.ಪಿ.ಸಿಂಗ್‌ ರಾಜೀನಾಮೆ ಸಲ್ಲಿಸಿದ ಬಳಿಕ ಕ್ಷಿಪ್ರ ರಾಜಕೀಯ ಬೆಳವಣಿಗೆಗಳಾಗಿವೆ. ಇದೇ ಕಾರಣಕ್ಕೆ ರಾಜಕೀಯ ಪಕ್ಷಗಳು ಸಭೆ ಆಯೋಜಿಸಿವೆ ಎಂದು ಹೇಳಲಾಗುತ್ತಿದೆ.

ಜೆಡಿಯು ಜೊತೆ ಕೈಜೋಡಿಸಲು ಸಿದ್ಧವೆಂದ ಆರ್‌ಜೆಡಿ

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಬಿಹಾರ ಸಿಎಂ ನಿತೀಶ್ ಕುಮಾರ್ ಭಾನುವಾರ ರಾತ್ರಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಒಂದು ವೇಳೆ ನಿತೀಶ್ ಕುಮಾರ್ ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡರೆ ಜೆಡಿ(ಯು) ಪಕ್ಷದ ಜೊತೆಗೆ ಕೈಜೋಡಿಸುವುದಾಗಿ ಪ್ರತಿಪಕ್ಷ ಆರ್‌ಜೆಡಿ ಹೇಳಿದೆ.

ಇದನ್ನೂ ಓದಿ: UGC-NET Examination Postponed : ಯುಜಿಸಿ ನೆಟ್ ಪರೀಕ್ಷೆಯ ಹಂತ-2ನ್ನು ಮುಂದೂಡಿದ NTA, ಹೊಸ ದಿನಾಂಕದ ವಿವರ ಇಲ್ಲಿದೆ

ಯಾವುದೇ ಭಿನ್ನಾಭಿಪ್ರಾಯವಿಲ್ಲ!

ನಿತೀಶ್ ಕುಮಾರ್ ನಾಯಕತ್ವದಲ್ಲಿ ಬಿಹಾರದಲ್ಲಿ ಸರ್ಕಾರ ಸುಗಮವಾಗಿ ನಡೆಯುತ್ತಿದೆ. ನಮಗೆ ಬಿಜೆಪಿ ಜೊತೆಗೆ ಯಾವುದೇ ಭಿನ್ನಭಿಪ್ರಾಯವಿಲ್ಲವೆಂದು ಜೆಡಿ(ಯು) ರಾಜ್ಯ ಘಟಕದ ಅಧ್ಯಕ್ಷ ಉಮೇಶ್ ಕುಶ್ವಾಹ ಹೇಳಿದ್ದಾರೆ. ಸದ್ಯ ಎಲ್ಲರ ಚಿತ್ತ ಬಿಹಾರ ರಾಜಕೀಯ ಬಿಕ್ಕಿಟ್ಟಿನ ಮೇಲಿದ್ದು, ಇಂದು ಏನಾಗಲಿದೆ ಅನ್ನೋದು ನಿರ್ಧಾರವಾಗಲಿದೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News