ಲೋಕಸಭಾ ಚುನಾವಣೆ ಬಳಿಕ ಪಶ್ಚಿಮ ಬಂಗಾಳದಲ್ಲಿ ಮಮತಾ ಸರ್ಕಾರ ಪತನ; ಬಿಜೆಪಿ ನಾಯಕನ ಭವಿಷ್ಯ

ಲೋಕಸಭಾ ಚುನಾವಣೆ ಬಳಿಕ ತೃಣಮೂಲ ಕಾಂಗ್ರೆಸ್ ನ ಹಲವು ಹಿರಿಯ ನಾಯಕರು ಬಿಜೆಪಿ ಸೇರ್ಪಡೆಯಾಗಲಿದ್ದು, ಆರೇ ತಿಂಗಳಲ್ಲಿ ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂದು ವಿಜಯವರ್ಜಿಯ ಹೇಳಿದ್ದಾರೆ.  

Last Updated : Apr 15, 2019, 08:12 AM IST
ಲೋಕಸಭಾ ಚುನಾವಣೆ ಬಳಿಕ ಪಶ್ಚಿಮ ಬಂಗಾಳದಲ್ಲಿ ಮಮತಾ ಸರ್ಕಾರ ಪತನ; ಬಿಜೆಪಿ ನಾಯಕನ ಭವಿಷ್ಯ title=

ಕೋಲ್ಕತಾ: ಲೋಕಸಭಾ ಚುನಾವಣೆಯ ಬಳಿಕ ಮಮತಾ ಬ್ಯಾನರ್ಜಿ ಅವರ ಸರ್ಕಾರ ಪತನಗೊಳ್ಳಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಜಿಯ ಭವಿಷ್ಯ ನುಡಿದಿದ್ದಾರೆ. 

ಕೋಲ್ಕತ್ತಾದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯವರ್ಜಿಯ, ಪಶ್ಚಿಮ ಬಂಗಾಳದ  42 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ 30 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

"ನಾವು ಪಶ್ಚಿಮ ಬಂಗಾಳದಲ್ಲಿ 23 ಸ್ಥಾನಗಳಲ್ಲಿ ಗೆಲುವು ಸಾಧಿಸುವ ನಂಬಿಕೆ ಇತ್ತು. ಆದರೆ ಪ್ರಸ್ತುತ  ರಾಜ್ಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದ ವಿರುದ್ಧ ವಿರೋಧ ಅಲೆ ಇದ್ದು, ಬಿಜೆಪಿ 30 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಅವರು ಹೇಳಿದರು.

ಲೋಕಸಭಾ ಚುನಾವಣೆ ಬಳಿಕ ತೃಣಮೂಲ ಕಾಂಗ್ರೆಸ್ ನ ಹಲವು ಹಿರಿಯ ನಾಯಕರು ಬಿಜೆಪಿ ಸೇರ್ಪಡೆಯಾಗಲಿದ್ದು, ಆರೇ ತಿಂಗಳಲ್ಲಿ ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂದು ಇದೇ ವೇಳೆ ವಿಜಯವರ್ಜಿಯ ಮಾಧ್ಯಮಗಳಿಗೆ ತಿಳಿಸಿದರು.

Trending News