BJP Candidate List: ಬಿಜೆಪಿ ಮೊದಲ ಪಟ್ಟಿಯಲ್ಲಿ 195ರಲ್ಲಿ ಇರುವ ಕೇವಲ ಓರ್ವ ಮುಸ್ಲಿಂ ಅಭ್ಯರ್ಥಿ ಡಾ.ಅಬ್ದುಲ್ ಸಲಾಂ ಯಾರು ಗೊತ್ತಾ?

BJP Candidate List: ಮಲಪ್ಪುರಂ ಲೋಕಸಭಾ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಕಾರಣಕ್ಕಾಗಿಯೇ ಬಿಜೆಪಿಯ ಉನ್ನತ ನಾಯಕತ್ವವು ಡಾ.ಅಬ್ದುಲ್ ಸಲಾಂ ಅವರಿಗೆ ಮಣೆ ಹಾಕಿದೆ.  

Written by - Chetana Devarmani | Last Updated : Mar 3, 2024, 08:59 AM IST
  • ಲೋಕಸಭೆ ಚುನಾವಣೆ 2024
  • ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
  • ಮಲ್ಲಪುರಂ ಬಿಜೆಪಿ ಅಭ್ಯರ್ಥಿ ಅಬ್ದುಲ್ ಸಲಾಂ
BJP Candidate List: ಬಿಜೆಪಿ ಮೊದಲ ಪಟ್ಟಿಯಲ್ಲಿ 195ರಲ್ಲಿ ಇರುವ ಕೇವಲ ಓರ್ವ ಮುಸ್ಲಿಂ ಅಭ್ಯರ್ಥಿ ಡಾ.ಅಬ್ದುಲ್ ಸಲಾಂ ಯಾರು ಗೊತ್ತಾ? title=

ನವದೆಹಲಿ: ಲೋಕಸಭೆ ಚುನಾವಣೆ 2024 ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳೂ ಲೋಕಸಭಾ ಅಖಾಡದಲ್ಲಿ ತಮ್ಮ ಪ್ರಾಬಲ್ಯ ಪ್ರದರ್ಶನಕ್ಕೆ ಸಿದ್ಧತೆ ನಡೆಸಿವೆ. ಕೇಂದ್ರದ ಆಡಳಿತಾರೂಢ ಭಾರತೀಯ ಜನತಾ ಪಕ್ಷ (BJP) ಶನಿವಾರ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರು ಎಲ್ಲಾ ಅಭ್ಯರ್ಥಿಗಳ ಹೆಸರನ್ನು ಮಾಧ್ಯಮದ ಮುಂದೆ ಮಂಡಿಸಿದರು. ಬಿಜೆಪಿಯ 195 ಅಭ್ಯರ್ಥಿಗಳಿರುವ ಈ ಪಟ್ಟಿಯಲ್ಲಿ ಇರುವುದು ಒಬ್ಬರೇ ಮುಸ್ಲಿಂ ಸಮುದಾಯದ ಅಭ್ಯರ್ಥಿ. ಅವರೇ ಡಾ. ಅಬ್ದುಲ್ ಸಲಾಂ. ಕೇರಳದ ಮಲಪ್ಪುರಂ ಕ್ಷೇತ್ರದಿಂದ ಡಾ. ಅಬ್ದುಲ್ ಸಲಾಂ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡಿದೆ.

ಡಾ.ಅಬ್ದುಲ್ ಸಲಾಂ ಯಾರು? 

ಜಾತ್ಯತೀತ ಚಿತ್ರಣಕ್ಕೆ ಹೆಸರಾದ ಡಾ.ಅಬ್ದುಲ್ ಸಲಾಂ ಅವರು ಕ್ಯಾಲಿಕಟ್ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿದ್ದಾರೆ. ಸಲಾಂ ಅವರ ಹೆಸರನ್ನು ಘೋಷಿಸುವ ಮೂಲಕ ಬಿಜೆಪಿಯು ರಾಜ್ಯದ ಎಲ್ಲಾ ಸಮುದಾಯಗಳ ಮತಗಳನ್ನು ಸೆಳೆಯುವ ಪ್ರಯತ್ನದಲ್ಲಿದೆ. ಕೇರಳದಲ್ಲಿ ಬಿಜೆಪಿ ಹೊಸ ಮತ್ತು ಹಳೆಯ ಮುಖಗಳ ಮಿಶ್ರಣವನ್ನು ಕಾಣಬಹುದು. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನೂ ಕೇರಳದಲ್ಲಿ ಪಕ್ಷದ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ.

ಇದನ್ನೂ ಓದಿ: PM Modi: ಲೋಕಸಭೆ ಚುನಾವಣೆಗೆ ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ: ಮೊದಲ ಪಟ್ಟಿ ಬಿಡುಗಡೆ 

ಮಲಪ್ಪುರಂನಲ್ಲಿ ಮುಸ್ಲಿಂ ಸಮುದಾಯವನ್ನು ಸೆಳೆಯುವ ಯತ್ನ:

ಮಲಪ್ಪುರಂ ಲೋಕಸಭಾ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದವರೇ ಹೆಚ್ಚಾಗಿದ್ದಾರೆ. ಈ ಕಾರಣಕ್ಕಾಗಿಯೇ ಬಿಜೆಪಿ ಡಾ.ಸಲಾಂ ಅವರನ್ನು ಆಯ್ಕೆ ಮಾಡಿದೆ ಎಂದು ಹೇಳಲಾಗ್ತಿದೆ. ಇದಕ್ಕೂ ಮುನ್ನ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯು ತಿರೂರು ಕ್ಷೇತ್ರದಿಂದ ಡಾ.ಸಲಾಂ ಅವರನ್ನು ಅಭ್ಯರ್ಥಿಯನ್ನಾಗಿಸಿತ್ತು. 

ಬಿಜೆಪಿ ಅಭ್ಯರ್ಥಿಗಳ ಪಟ್ಟಿ:

ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೋಶಿಯಲ್ ಇಂಜಿನಿಯರಿಂಗ್ ಬಗ್ಗೆ ಸಂಪೂರ್ಣ ಕಾಳಜಿ ವಹಿಸಿದೆ. ಒಬಿಸಿಗಳಿಗೆ ಗರಿಷ್ಠ 57 ಟಿಕೆಟ್‌ಗಳನ್ನು ನೀಡಲಾಗಿದೆ. ಮೊದಲ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಹೊರತುಪಡಿಸಿ ಯುವಕರು ಮತ್ತು ಮಹಿಳೆಯರನ್ನೂ ಪರಿಗಣಿಸಲಾಗಿದೆ. 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 28 ಮಹಿಳೆಯರು, 47 ಐವತ್ತು ವರ್ಷದೊಳಗಿನವರು ಹಾಗೂ ಪರಿಶಿಷ್ಟ ಜಾತಿಯ 27, ಪರಿಶಿಷ್ಟ ಪಂಗಡದ 18 ಮತ್ತು ಒಬಿಸಿ ಸಮುದಾಯದ 57 ಜನರನ್ನು ಅಭ್ಯರ್ಥಿಗಳಾಗಿ ಮಾಡಲಾಗಿದೆ. 

ಇದನ್ನೂ ಓದಿ: ಯುವರಾಜ್ ಸಿಂಗ್ ಈ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸೋದು ನಿಜವೇ? 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News