ಮಮತಾ Vs ಕೇಂದ್ರ ಸರ್ಕಾರ: ಚುನಾವಣಾ ಆಯೋಗಕ್ಕೆ ಮೊರೆಹೋದ ಬಿಜೆಪಿ

ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಹಾಗೂ ಕೇಂದ್ರದ ಮಧ್ಯ ಸಂಘರ್ಷ ಮುಂದುವರೆದಿದೆ. ಈಗ ಬಿಜೆಪಿಯ ಉನ್ನತ ಮಟ್ಟದ ನಿಯೋಗವು ಸೋಮವಾರದಂದು ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿ ಪಶ್ಚಿಮ ಬಂಗಾಳದಲ್ಲಿನ ಪರಿಸ್ಥಿತಿ ಬಗ್ಗೆ ವಿವರಿಸಿದೆ.

Last Updated : Feb 4, 2019, 03:16 PM IST
ಮಮತಾ Vs ಕೇಂದ್ರ ಸರ್ಕಾರ: ಚುನಾವಣಾ ಆಯೋಗಕ್ಕೆ ಮೊರೆಹೋದ ಬಿಜೆಪಿ title=

ನವದೆಹಲಿ: ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಹಾಗೂ ಕೇಂದ್ರದ ಮಧ್ಯ ಸಂಘರ್ಷ ಮುಂದುವರೆದಿದೆ. ಈಗ ಬಿಜೆಪಿಯ ಉನ್ನತ ಮಟ್ಟದ ನಿಯೋಗವು ಸೋಮವಾರದಂದು ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿ ಪಶ್ಚಿಮ ಬಂಗಾಳದಲ್ಲಿನ ಪರಿಸ್ಥಿತಿ ಬಗ್ಗೆ ವಿವರಿಸಿದೆ

ಬಿಜೆಪಿಯ ಉನ್ನತ ಮಟ್ಟದ ನಿಯೋಗದಲ್ಲಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ, ಹಿರಿಯ ನಾಯಕ ಭೂಪೇಂದ್ರ ಯಾದವ್, ಬಿಜೆಪಿಯ ಪಶ್ಚಿಮ ಬಂಗಾಳದ ಉಸ್ತುವಾರಿ ಕೈಲಾಶ್ ವಿಜಯವರ್ಗಿಯಾ, ಕೇಂದ್ರ ಸಚಿವ ಎಸ್.ಎಸ್. ಅಹ್ಲುವಾಲಿಯಾ ಸೇರಿದಂತೆ ಉನ್ನತ ಮಟ್ಟದ ಬಿಜೆಪಿ ಪ್ರತಿನಿಧಿಗಳು ಸೇರಿದಂತೆ ಹಲವು ನಾಯಕರು ಚುನಾವಣಾ ಆಯೋಗಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಬಗ್ಗೆ ಗಮನ ಸೆಳೆದಿದ್ದಾರೆ. 

ಇದಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಬಿಜೆಪಿಯ ಉನ್ನತ ಮಟ್ಟದ ನಿಯೋಗವು ಸೋಮವಾರ ಇಸಿ ಅಧಿಕಾರಿಗಳನ್ನು ಭೇಟಿ ಮಾಡಿದೆ. ಸಭೆಯಲ್ಲಿ ಪಶ್ಚಿಮ ಬಂಗಾಳದಲ್ಲಿನ ಗಂಭೀರ್ ಪರಿಸ್ಥಿತಿಯನ್ನು ಸಂಪೂರ್ಣವಾಗಿ ನಿಭಾಯಿಸುವ ವಿಚಾರವಾಗಿ ತಿಳಿಸಿದ್ದೇವೆ.ಮತ್ತು ಅಲ್ಲಿ ರಾಜ್ಯ ಸರ್ಕಾರದ ಏಜೆಂಟ್ ಗಳಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಕಿತ್ತುಹಾಕಲು ನಾವು ಒತ್ತಾಯಿಸಿದ್ದೇವೆ, ಅಲ್ಲದೇ ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸರಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿರುವುದರ ಬಗ್ಗೆಯೂ ತಿಳಿಸಿದ್ದೇವೆ ಎಂದು ನಖ್ವಿ ಹೇಳಿದರು.

ಮುಂಬರುವ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ನಡೆಸಬಹುದಾದ ಮುಕ್ತ ಮತ್ತು ನ್ಯಾಯೋಚಿತ ವಾತಾವರಣದ ಹಿತಾಸಕ್ತಿಗಾಗಿ ನಾವು ಚುನಾವಣಾ ಆಯೋಗಕ್ಕೆ ಈ ಕೆಲವು ಘಟನೆಗಳನ್ನು ಗಮನಕ್ಕೆ ತರಲು ಬಂದಿದ್ದೇವೆ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. 

Trending News