ನವದೆಹಲಿ: ರಾಜಸ್ತಾನದಲ್ಲಿ ವಿಧಾನಸಭೆ ಇನ್ನು ಕೆಲವೇ ದಿನಗಳು ಬಾಕಿ ಇವೆ ಈ ಸಂದರ್ಭದಲ್ಲಿ ಬಿಜೆಪಿ ಸಂಸದ ಹರೀಶ್ ಮೀನಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಆ ಮೂಲಕ ಮತ್ತೊಮ್ಮೆ ಅಧಿಕಾರ ಹಿಡಿಯಲು ಹವಣಿಸುತ್ತಿದ್ದ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಸಂಸದ ಹರೀಶ್ ಮೀನಾ ಅವರನ್ನು ರಾಜಸ್ಥಾನ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸಚಿನ್ ಪೈಲಟ್ ಹಾಗೂ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.
ಮೀನಾ ಅವರು 2009ರಿಂದ 2013ರ ವರೆಗೆ ರಾಜಸ್ಥಾನದ ಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ದರು.ಇವರ ಕಾರ್ಯದಕ್ಷತೆಗೆ ಮೆಚ್ಚಿ ಅವರಿಗೆ ರಾಷ್ಟ್ರಪತಿ ಪದಕವನ್ನು ನೀಡಿ ಗೌರವಿಸಲಾಗಿತ್ತು.2014 ಸಾರ್ವತ್ರಿಕ ಚುನಾವಣೆಯಲ್ಲಿ ಹರೀಶ್ ಮೀನಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
ರಾಜಸ್ತಾನದಲ್ಲಿ ತೀವ್ರ ಆಡಳಿತ ವಿರೋಧಿಯನ್ನು ಅನುಭಿಸುತ್ತಿರುವ ಬಿಜೆಪಿ ಸರ್ಕಾರ ಬಹುತೇಕ ಸಮೀಕ್ಷೆಗಳನ್ವಯ ಮತ್ತೆ ಅಧಿಕಾರಕ್ಕೆ ಬರುವುದು ಕಷ್ಟಕರ ಎಂದು ಹೇಳಲಾಗುತ್ತಿದೆ.