Handwash-ಹ್ಯಾಂಡ್ ಸ್ಯಾನಿಟೈಸರ್ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ, ಇಬ್ಬರ ದುರ್ಮರಣ

ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಸ್ಯಾನಿಟೈಜರ್ ಮತ್ತು ಹ್ಯಾಂಡ್ವಾಶ್ ತಯಾರಿಸುವ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು. ಈ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಒಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ.

Last Updated : Apr 13, 2020, 02:46 PM IST
Handwash-ಹ್ಯಾಂಡ್ ಸ್ಯಾನಿಟೈಸರ್ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ, ಇಬ್ಬರ ದುರ್ಮರಣ title=

ಮುಂಬೈ: ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಸ್ಯಾನಿಟೈಜರ್ ಮತ್ತು ಹ್ಯಾಂಡ್ವಾಶ್ ತಯಾರಿಸುವ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಅವರದಿಯಾಗಿದೆ. ಸೋಮವಾರ ರಾತ್ರಿ 11.30 ಕ್ಕೆ ಸಂಭವಿಸಿದ ಈ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಒಬ್ಬರು ಗಾಯಗೊಂಡಿದ್ದಾರೆ. ಈ ಸ್ಫೋಟ ಸಂಭವಿಸಿದಾಗ, 66 ಉದ್ಯೋಗಿಗಳು ಕಂಪನಿಯೊಳಗೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಬಳಿಕ ಸ್ಥಳಕ್ಕೆ ತಲುಪಿದ ಅಧಿಕಾರಿಗಳು ಸ್ಫೋಟದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಪೊಲೀಸ್ ಅಧಿಕಾರಿಗಳ ಪ್ರಕಾರ, ಪಾಲ್ಘರ್‌ನ ತಾರಾಪುರದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸೋಮವಾರ ಈ ಸ್ಫೋಟ ಸಂಭವಿಸಿದೆ.ಈ ಕಾರ್ಖಾನೆ ಸ್ಯಾನಿಟೈಜರ್ ಮತ್ತು ಹ್ಯಾಂಡ್‌ವಾಶ್‌ ತಯಾರಿಕೆಗೆ ಬೇಕಾಗಿರುವ ಕಚ್ಚಾ ಸಾಮಾಗ್ರಿಗಳನ್ನು ಒದಗಿಸುತ್ತಿತ್ತು ಎನ್ನಲಾಗಿದೆ. ಅಷ್ಟೇ ಅಲ್ಲ ಕಚ್ಚಾ ವಸ್ತುಗಳ ತಯಾರಿಕೆಗಾಗಿ ಈ ಕಾರ್ಖಾನೆ ಅಧಿಕಾರಿಗಳಿಂದ ಅನುಮತಿ ಸಹ ಹೊಂದಿದೆ ಎಂದು ಪೊಲೀಸಲು ತಿಳಿಸಿದ್ದಾರೆ. ಗ್ಯಾಲಕ್ಸಿ ಸರ್ಫ್ಯಾಕ್ಟಂಟ್ಸ್ ಹೆಸರಿನ ಈ ಕಾರ್ಖಾನೆ ರಾತ್ರಿ 11.30ಕ್ಕೆ ಇದ್ದಕ್ಕಿದ್ದಂತೆ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ.

ಸುದ್ದಿ ತಿಳಿಯುತ್ತಿದ್ದಂತೆ ಹಲವಾರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಸ್ವಲ್ಪ ಸಮಯದ ನಂತರ ಬೆಂಕಿಯನ್ನು ನಿಯಂತ್ರಿಸುವಲ್ಲಿ ಅಗ್ನಿ ಶಾಮಕ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.. ಈ ಅವಘಡದಲ್ಲಿ ಕಾರ್ಖಾನೆಯಲ್ಲಿ ಕಾರ್ಯನಿರತ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದರೆ, ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸ್ಫೋಟ ಸಂಭವಿಸಿದಾಗ ಕಾರ್ಖಾನೆಯಲ್ಲಿ ಒಟ್ಟು 66 ಜನ ಕಾರ್ಮಿಕರು ಕಾರ್ಯನಿರತರಾಗಿದ್ದರು ಎಂಬುದು ಇಲ್ಲಿ ಗಮನಾರ್ಹ. 

ಸದ್ಯ ಈ ಸ್ಫೋಟಕ್ಕೆ ನಿಖರವಾದ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಈ ಕುರಿತು  ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಇಡೀ ದೇಶವು ಕರೋನಾ ವೈರಸ್ ಕಪಿಮುಷ್ಟಿಯಲ್ಲಿರುವ್ವ ಹಿನ್ನೆಲೆ ದೇಶಾದ್ಯಂತ ಸ್ಯಾನಿಟೈಜರ್-ಹ್ಯಾಂಡ್‌ವಾಶ್‌ ಗಳಿಗಾಗಿ ಬೇಡಿಕೆ ಹೆಚ್ಚಾಗಿದೆ, ಆದರೆ ಮಹಾರಾಷ್ಟ್ರದ ಕರೋನಾ ವೈರಸ್  ಹೆಚ್ಚು ಅಪಾಯಕಾರಿ ರೂಪವನ್ನು ಪಡೆದುಕೊಳ್ಳುತ್ತಿದೆ. ಇದುವರೆಗೆ ಮಹಾರಾಷ್ಟ್ರದಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬಂದಿದ್ದು, ಅವರಲ್ಲಿ ಸುಮಾರು 150ಕ್ಕೂ ಅಧಿಕ ಜನ ಮಾರಕ ವೈರಸ್ ನಿಂದ ಉಂಟಾಗುವ ಕಾಯಿಲೆಗೆ ಬಲಿಯಾಗಿದ್ದಾರೆ.
 

Trending News