ಪ್ರಿಯಾಂಕಾ ದೋಣಿಯಾತ್ರೆಯಿಂದ ಕಾಂಗ್ರೆಸ್ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ: ಬಿಜೆಪಿ ಟೀಕೆ

ಪ್ರಯಾಗರಾಜ್ ಮತ್ತು ಮಿರ್ಜಾಪುರ್ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ 140 ಕಿ.ಮೀ. ದೋಣಿಯಾತ್ರೆ ನಡೆಸಿ ಮತಯಾಚಿಸಲು ಮುಂದಾಗಿರುವ ಬೆನ್ನಲ್ಲೇ ಉತ್ತರಪ್ರದೇಶ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಟೀಕಿಸಿದ್ದಾರೆ.

Last Updated : Mar 18, 2019, 03:40 PM IST
ಪ್ರಿಯಾಂಕಾ ದೋಣಿಯಾತ್ರೆಯಿಂದ ಕಾಂಗ್ರೆಸ್ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ: ಬಿಜೆಪಿ ಟೀಕೆ title=

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲ ದೋಣಿಯಾನದ ಮೂಲಕ ಪ್ರಚಾರ ಆರಂಭಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನಡೆಯನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ.

ಪ್ರಯಾಗರಾಜ್ ಮತ್ತು ಮಿರ್ಜಾಪುರ್ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ 140 ಕಿ.ಮೀ. ದೋಣಿಯಾತ್ರೆ ನಡೆಸಿ ಮತಯಾಚಿಸಲು ಮುಂದಾಗಿರುವ ಬೆನ್ನಲ್ಲೇ ಉತ್ತರಪ್ರದೇಶ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು, "ದೋಣಿಯಾತ್ರೆಯಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಪ್ರಿಯಾಂಕಾ ತಮಗಿಷ್ಟವಾದಷ್ಟು ದೇವಸ್ಥಾನಗಳಿಗೆ ಭೇಟಿ ನೀಡಬಹುದು, ದೋಣಿಯಾತ್ರೆ ನಡೆಸಬಹುದು, ಆದರೆ ಉತ್ತರಪ್ರದೇಶದಲ್ಲಿ ಯಾರಿಗೆ ಮತ ಹಾಕಬೇಕು ಎಂಬುದನ್ನು ಜನರು ನಿರ್ಧರಿಸುತ್ತಾರೆ. ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಏನು ಬೇಕಾದರೂ ಮಾಡಲು ಸಿದ್ಧವಿದೆ" ಎಂದು ಟೀಕಿಸಿದ್ದಾರೆ.

"ರಾಜ್ಯದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿಯಿದೆ. ಹಾಗೆಯೇ ಕಾಂಗ್ರೆಸ್ ಕೆಲವೊಂದು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. ಆದಾಗ್ಯೂ ಉತ್ತರಪ್ರದೇಶದಲ್ಲಿ ಕಾಂಗ್ರೆಸ್ 73 ಸ್ಥಾನ ಸ್ಥಾನಗಳನ್ನು ಗೆಲ್ಲಲಿದೆ. ಮೋದಿಜಿ ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
 

Trending News