ಸಿಲಿಗುರಿ: ಪಶ್ಚಿಮ ಬಂಗಾಳದ ಸಿಲಿಗುರಿಯ ಬಿಜೆಪಿ ಬೂತ್ ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಸಿಲಿಗುರಿಯ ಮುನಿಸಿಪಲ್ ಕಾರ್ಪೋರೇಶನ್ ವಾರ್ಡ್ ಸಂಖ್ಯೆ 36ರಲ್ಲಿ ಇ ಘಟನೆ ನಡೆದಿದ್ದು, ಮೃತನನ್ನು ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ನಿತ್ಯಾಮಂಡಲ್(42) ಎಂದು ಗುರುತಿಸಲಾಗಿದೆ.
ಇಂದು ಮುಂಜಾನೆ ವಾಯು ವಿಹಾರಕ್ಕೆ ತೆರಳಿದ್ದ ಸ್ಥಳಿಯರು ಕಚೇರಿಯಲ್ಲಿ ನೇತಾಡುತ್ತಿದ್ದ ಶವವನ್ನು ಕಂಡು ಪೊಲೀಸರಿಗೆ ತಿಳಿಸಿದ್ದಾರೆ. ಬಳಿಕ ಸ್ಥಳಕ್ಕಾಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
West Bengal: Body of a 42-year-old man was found hanging at BJP booth office in Siliguri early morning today; Police investigation is underway.
— ANI (@ANI) April 4, 2019
#Visuals West Bengal: Body of a 42-year-old man was found hanging at BJP booth office in Siliguri early morning today; Police investigation is underway. pic.twitter.com/p7D3B5KTeU
— ANI (@ANI) April 4, 2019
ಪ್ರಧಾನಿ ನರೇಂದ್ರ ಮೋದಿ ಅವರು ಸಿಲಿಗುರಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ ಒಂದು ದಿನದ ಬಳಿಕ ಈ ಘಟನೆ ನಡೆದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಸಿಲಿಗಿರಿಯಲ್ಲಿ ರ್ಯಾಲಿಯಲ್ಲಿ ಮಾತನಾಡಿದ್ದ ಮೋದಿ, ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದ ಅಭಿವೃದ್ಧಿಯ ಸ್ಪೀಡ್ ಬ್ರೇಕರ್ ಇದ್ದಂತೆ. ಕೇಂದ್ರ ಸರ್ಕಾರ ಬಡವರ ಅಭಿವೃದ್ಧಿಗಾಗಿ ರೂಪಿಸಿರುವ ಹಲವು ಯೋಜನೆಗಳ ಅನುಷ್ಠಾನಕ್ಕೆ ಸಿಎಂ ಮಮತಾ ಬ್ಯಾನರ್ಜಿ ತಡೆಯೊಡ್ಡಿದ್ದಾರೆ. ಮುಖ್ಯವಾಗಿ ಆಯುಷ್ಮಾನ್ ಭಾರತ್ ಯೋಜನೆಯ ಲಾಭ ಪಶ್ಚಿಮ ಬಂಗಾಳದ ಜನರಿಗೆ ಸಿಗದಂತೆ ಸ್ಪೀಡ್ ಬ್ರೇಕರ್ ದೀದಿ ತಡೆದಿದ್ದಾರೆ ಎಂದು ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.