ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಹೇಳಿಕೆ

ಚುನಾವಣೆ ದೃಷ್ಟಿಯಿಂದ ಹಲವು ಬಾರಿ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕಾಗುತ್ತದೆ.

Last Updated : Mar 20, 2019, 01:34 PM IST
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಹೇಳಿಕೆ title=
Pic Courtesy: ANI

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಾವು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.

ಉತ್ತರಪ್ರದೇಶದ ನಾಗಿನ ಅಥವಾ ಅಕ್ಬರ್ ಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ  ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ, ಈ ಬಾರಿಯ ಚುನಾವಣೆಯಲ್ಲಿ ತಾವು ಸ್ಪರ್ಧಿಸುತ್ತಿಲ್ಲ. ಯಾವ ಸಮಯದಲ್ಲಾದರೂ ಚುನಾವಣೆಯಲ್ಲಿ ಗೆದ್ದು ಸಂಸತ್ ಸದಸ್ಯರಾಗಿ ಹೋಗಬಹುದು. ಆದರೆ, ಚುನಾವಣೆ ದೃಷ್ಟಿಯಿಂದ ಹಲವು ಬಾರಿ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದಿದ್ದಾರೆ.

ಮೂಲಗಳ ಪ್ರಕಾರ, ಎಸ್​ಪಿ-ಬಿಎಸ್​ಪಿ ಮೈತ್ರಿ ಕೂಟ ಒಟ್ಟಾಗಿ ಚುನಾವಣೆಯ ಎದುರಿಸುತ್ತಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರದ ಕಡೆ ಗಮನಹರಿಸಬೇಕಿರುವುದರಿಂದ ಮಾಯಾವತಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. 

Trending News