ನೋಯ್ಡಾದಲ್ಲಿ ರಸ್ತೆ ಅಪಘಾತ: ಇಬ್ಬರು ಸಾವು, ಓರ್ವನಿಗೆ ಗಂಭೀರ ಗಾಯ

ಇಂದು ಮುಂಜಾನೆ 4 ಗಂಟೆ ಸುಮಾರಿಗೆ ವೇಗವಾಗಿ ಚಲಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ನೋಯ್ಡಾ ಸೆಕ್ಟರ್ 49ರ ಪೊಲೀಸ್ ಠಾಣೆ ಬಳಿ ಪಲ್ಟಿಯಾದ ಘಟನೆ ನಡೆದಿದೆ.

Last Updated : Oct 20, 2019, 04:09 PM IST
ನೋಯ್ಡಾದಲ್ಲಿ ರಸ್ತೆ ಅಪಘಾತ: ಇಬ್ಬರು ಸಾವು, ಓರ್ವನಿಗೆ ಗಂಭೀರ ಗಾಯ title=

ನೋಯ್ಡಾ: ನಗರದ ಸೆಕ್ಟರ್ 49ರಲ್ಲಿ ರಸ್ತೆ ವಿಭಜಕಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. 

ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧೀಕ್ಷಕ ವಿನೀತ್ ಜೈಸ್ವಾಲ್, ಇಂದು ಮುಂಜಾನೆ 4 ಗಂಟೆ ಸುಮಾರಿಗೆ ವೇಗವಾಗಿ ಚಲಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ನೋಯ್ಡಾ ಸೆಕ್ಟರ್ 49ರ ಪೊಲೀಸ್ ಠಾಣೆ ಬಳಿ ಪಲ್ಟಿಯಾದ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಗೊಂಡ ಮೂವರನ್ನೂ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾದೆ ಇಬ್ಬರು ಮೃತಪಟ್ಟಿದ್ದಾರೆ" ಎಂದು ತಿಳಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಮತ್ತೋರ್ವ ವ್ಯಕ್ತಿಯನ್ನು ತುರ್ತು ಚಿಕಿತ್ಸಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಗ್ಗೆ ಮೃತರ ಕುಟುಂಬಸ್ಥರಿಗೆ ಮಾಹಿತಿ ತಲುಪಿಸಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Trending News