ನವದೆಹಲಿ: CBSE 12th Result : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಶಾಲೆಗಳ 12 ನೇ ತರಗತಿಯ ಫಲಿತಾಂಶವನ್ನು ಅಂತಿಮಗೊಳಿಸುವ ಗಡುವನ್ನು ಜುಲೈ 25 ರವರೆಗೆ ವಿಸ್ತರಿಸಿದೆ. ಪರೀಕ್ಷಾ ನಿಯಂತ್ರಕ ಸನ್ಯಂ ಭರದ್ವಾಜ್ ಈ ಮಾಹಿತಿ ನೀಡಿದ್ದಾರೆ.
ಒತ್ತಡಕ್ಕೆ ಒಳಗಾಗುತ್ತಿರುವ ಶಿಕ್ಷಕರು :
ಫಲಿತಾಂಶದ ಕೆಲಸದಲ್ಲಿ ತೊಡಗಿರುವ ಶಿಕ್ಷಕರು ಒತ್ತಡದಲ್ಲಿದ್ದಾರೆ ಎಂದು ಪರೀಕ್ಷಾ ನಿಯಂತ್ರಕ ಸನ್ಯಂ ಭರದ್ವಾಜ್ ತಿಳಿಸಿದ್ದಾರೆ. ಫಲಿತಾಂಶಗಳನ್ನು (CBSE 12th Result) ಅಂತಿಮಗೊಳಿಸುವ ದಿನಾಂಕ ಸಮೀಪಿಸುತ್ತಿರುವುದರಿಂದ, ಶಿಕ್ಷಕರು ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಈ ಕಾರಣಗಳಿಂದ ತಪ್ಪುಗಳಾಗುತ್ತಿವೆ. ಈ ತಪ್ಪುಗಳನ್ನು ಸರಿಪಡಿಸುವ ಸಲುವಾಗಿ ಸಿಬಿಎಸ್‌ಇಗೆ (CBSE ) ಮನವಿ ಕಳುಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಶಾಲೆಗಳು ಮತ್ತು ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಸಿಬಿಎಸ್‌ಇ ಅರ್ಥ ಮಾಡಿಕೊಳ್ಳುತ್ತಿದೆ ಎಂದವರು ಹೇಳಿದ್ದಾರೆ. .
ಇದನ್ನೂ ಓದಿ : ಜಂತರ್ ಮಂತರ್ ನಲ್ಲಿ ರೈತರ ಪ್ರತಿಭಟನೆಗೆ ಅವಕಾಶ ನೀಡಿದ ದೆಹಲಿ ಸರ್ಕಾರ
ಕರೋನಾದ ಕಾರಣ ಪರೀಕ್ಷೆಗಳನ್ನು ರದ್ದುಪಡಿಸಲಾಗಿತ್ತು :
ಎಲ್ಲಾ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು, ಸಿಬಿಎಸ್‌ಇ ಕೊನೆಯ ದಿನಾಂಕವನ್ನು ಜುಲೈ 22 ರಿಂದ ಜುಲೈ 25 ರವರೆಗೆ ವಿಸ್ತರಿಸಲು ನಿರ್ಧರಿಸಿದೆ. ಕರೋನಾ (COVID-19) ಎರಡನೇ ಅಲೆಯ ಕಾರಣದಿಂದಾಗಿ ಪರೀಕ್ಷೆಗಳನ್ನು ರದ್ದು ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ alternative evaluation policy ಆಧಾರದ ಮೇಲೆ ಫಲಿತಾಂಶವನ್ನು ನೀಡುವಂತೆ ಸೂಚಿಸಲಾಗಿತ್ತು. ಇದೀಗ ಫಲಿತಾಂಶ ಅಂತಿಮಗೊಳಿಸುವ ಗಡುವನ್ನು ವಿಸ್ತರಿಸಿರುವ ಕಾರಣದಿಂದ ಫಲಿತಾಂಶ ಪ್ರಕಟಗೊಳ್ಳುವುದು ವಿಳಂಬವಾಗಲಿದೆಯೇ ಎನ್ನುವುದನ್ನು ಸಿಬಿಎಸ್‌ಇ ಸ್ಪಷ್ಟಪಡಿಸಿಲ್ಲ. ಜುಲೈ 31 ರೊಳಗೆ ಫಲಿತಾಂಶ ಘೋಷಿಸಲಾಗುವುದು ಎನ್ನಲಾಗಿದೆ.
ಇದನ್ನೂ ಓದಿ : ಜುಲೈ 24,25 ಕ್ಕೆ ಕೇರಳದಲ್ಲಿ ಸಂಪೂರ್ಣ ಲಾಕ್ ಡೌನ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ