COVID-19 ಹಿನ್ನೆಲೆಯಲ್ಲಿ CBSEಯ 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳು ರದ್ದು

CBSE 10th, 12th Exam 2020: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಸೋಂಕಿನ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು 10 ನೇ ತರಗತಿ ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸುವ ಬಗ್ಗೆ ಸುಪ್ರೀಂಕೋರ್ಟ್ ಕಳೆದ ವಾರ ಸಿಬಿಎಸ್‌ಇಗೆ ಸೂಚಿಸಿತ್ತು.  

Written by - Yashaswini V | Last Updated : Jun 25, 2020, 03:01 PM IST
COVID-19 ಹಿನ್ನೆಲೆಯಲ್ಲಿ CBSEಯ 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳು ರದ್ದು title=

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 1 ರಿಂದ 15ರವರೆಗೆ ನಡೆಸಲು ಯೋಜಿಸಲಾಗಿದ್ದ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ 10 ಮತ್ತು 12ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವುದಾಗಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಜೂನ್ 25 ರ ಗುರುವಾರ ಸುಪ್ರೀಂ ಕೋರ್ಟ್‌ಗೆ (Supreme Court) ತಿಳಿಸಿದೆ.

ಈ ಹಿನ್ನಲೆಯಲ್ಲಿ ತನ್ನ ನಿರ್ಧಾರವನ್ನು ನ್ಯಾಯಾಲಯಕ್ಕೆ ತಿಳಿಸಿರುವ ಸಿಬಿಎಸ್ಇ (CBSE) ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಇದೇ ವೇಳೆ ಸಿಬಿಎಸ್‌ಇ 12 ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಹಾಜರಾಗಲು ಅಥವಾ ಕಳೆದ ಮೂರು ಪರೀಕ್ಷೆಗಳಲ್ಲಿ ಅವರ ಸಾಧನೆಯ ಆಧಾರದ ಮೇಲೆ ಮೌಲ್ಯಮಾಪನ ತೆಗೆದುಕೊಳ್ಳಲು ಆಯ್ಕೆ ನೀಡುವುದಾಗಿ ತಿಳಿಸಿದೆ.

* ಹನ್ನೆರಡನೇ ತರಗತಿಯ ಪರೀಕ್ಷೆಯಲ್ಲಿ ಹಾಜರಾಗಲು ಬಯಸುವ ವಿದ್ಯಾರ್ಥಿಗಳಿಗೆ "ಪರಿಸ್ಥಿತಿ ಅನುಕೂಲಕರವಾದ ಕೂಡಲೇ" ಪರೀಕ್ಷೆ ನಡೆಸಲಾಗುವುದು.

* ಪರೀಕ್ಷೆಯನ್ನು ತೆಗೆದುಕೊಳ್ಳದಿರುವ ಆಯ್ಕೆಯನ್ನು ಬಯಸುವವರು, ಕಳೆದ ಮೂರು ಪರೀಕ್ಷೆಗಳ ಆಧಾರದ ಮೇಲೆ ಮೌಲ್ಯಮಾಪನಕ್ಕಾಗಿ ಒಂದು ಯೋಜನೆ ಇರುತ್ತದೆ. ಈ ಯೋಜನೆಯ ಬಗ್ಗೆ ನಾಳೆಯೊಳಗೆ ತಿಳಿಸಲಾಗುವುದು ಎಂದು ಹೇಳಲಾಗಿದೆ.

ವಾಸ್ತವವಾಗಿ ಕೋವಿಡ್ -19 (Covid-19) ಹೆಚ್ಚಾಗಿರುವ ಈ ಸಂದರ್ಭದಲ್ಲಿ 15 ಸಾವಿರಕ್ಕೂ ಹೆಚ್ಚು ಕೇಂದ್ರಗಳಲ್ಲಿ ಮಕ್ಕಳ ಜೀವ ಒತ್ತೆ ಇತ್ತು ಪರೀಕ್ಷೆಗಳನ್ನು ನಡೆಸುವುದು ಅನಗತ್ಯವಾಗಿದ್ದು ಈ ವರ್ಷ ಬೋರ್ಡ್ ಪರೀಕ್ಷೆಗಳನ್ನು ರದ್ದು ಮಾಡುವಂತೆ ಕೋರಿ ಹಲವು ಪೋಷಕರು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು. 

ವ್ಯಾಪಕ ವಿರೋಧದ ನಡುವೆಯೂ ಇಂದಿನಿಂದ ಮಕ್ಕಳ ಜೀವ ಒತ್ತೆ ಇಟ್ಟು SSLC ಪರೀಕ್ಷೆ ಆರಂಭ

ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗಳು ಸಿಬಿಎಸ್‌ಇ ವಿದ್ಯಾರ್ಥಿಗಳ ಪೋಷಕರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಸುಪ್ರೀಂಕೋರ್ಟ್ ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಉಲ್ಲೇಖಿಸಿ ಉಳಿದ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿರುವ ಪೋಷಕರ ಗುಂಪಿನ ಮನವಿಗೆ ಪ್ರತಿಕ್ರಿಯೆಯಾಗಿ ನ್ಯಾಯಾಲಯ ಈ ಸಲಹೆಯನ್ನು ನೀಡಿತ್ತು. 

ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಸೋಂಕಿನ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು 10 ನೇ ತರಗತಿ ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸುವ ಬಗ್ಗೆ ಸುಪ್ರೀಂಕೋರ್ಟ್ ಕಳೆದ ವಾರ ಸಿಬಿಎಸ್‌ಇಗೆ ಸೂಚಿಸಿತ್ತು.

Trending News