CBSE 10 ,12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಗೆ ಮೂಹರ್ತ ಫಿಕ್ಸ್!

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ 'ನಿಶಾಂಕ್' ಹೇಳಿದ್ದಾರೆ.

Last Updated : Jan 28, 2021, 03:54 PM IST
  • ಫೆಬ್ರವರಿ 2 ರಂದು ಸಿಬಿಎಸ್‌ಇ 10 ಮತ್ತು 12 ನೇ ತರಗತಿ ಪರೀಕ್ಷೆಯ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟ
  • ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ 'ನಿಶಾಂಕ್' ಹೇಳಿದ್ದಾರೆ.
  • ಇಂದು ಸಿಬಿಎಸ್ ಇ ಯ ಶಾಲಾ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳೊಂದಿಗೆ ವೆಬಿನಾರ್‌ ಸಂವಾದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
CBSE 10 ,12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಗೆ ಮೂಹರ್ತ ಫಿಕ್ಸ್! title=

ನವದೆಹಲಿ: ಫೆಬ್ರವರಿ 2 ರಂದು ಸಿಬಿಎಸ್‌ಇ 10 ಮತ್ತು 12 ನೇ ತರಗತಿ ಪರೀಕ್ಷೆಯ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ 'ನಿಶಾಂಕ್' ಹೇಳಿದ್ದಾರೆ. ಅವರು ಇಂದು ಸಿಬಿಎಸ್ ಇ ಯ ಶಾಲಾ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳೊಂದಿಗೆ ವೆಬಿನಾರ್‌ ಸಂವಾದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಇದೇ ವೇಳೆ ಅವರು ಮಾತನಾಡಿ. ಎನ್ ಇಪಿಯಲ್ಲಿ ಪ್ರಾಥಮಿಕ ಶಿಕ್ಷಣದಲ್ಲಿ ಪ್ರಾದೇಶಿಕ ಭಾಷೆಯನ್ನು ಬೋಧನೆಯ ಮಾಧ್ಯಮವಾಗಿ ಎಲ್ಲಾ ಭಾರತೀಯ ಶಾಲೆ(School)ಗಳಲ್ಲಿ ಏಕರೂಪವಾಗಿ ಅನುಷ್ಠಾನಗೊಳಿಸಲಾಗುವುದು ಅಂತ ತಿಳಿಸಿದರು. ಇನ್ನು 6ನೇ ತರಗತಿಯಿಂದ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ವನ್ನು ನೀಡಲು ನಾವು ಬಯಸುತ್ತೇವೆ, ಇದರಿಂದ ಅವರು ತಮ್ಮ ಜ್ಞಾನ ಮತ್ತು ಅನುಭವವನ್ನು ಬಳಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಮತ್ತು ಜೀವನ ವನ್ನು ಸಂಪಾದಿಸಲು ಬಯಸುತ್ತೇವೆ ಎಂದು ಶಿಕ್ಷಣ ಸಚಿವ ಪೋಖ್ರಿಯಾಲ್ ಹೇಳಿದರು. ಕರೋನವೈರಸ್ ಸಾಂಕ್ರಾಮಿಕ ರೋಗವುಂಟಾದ ಸಮಯದಲ್ಲಿ, ನಾವು ಆನ್ ಲೈನ್ ತರಗತಿಗಳು ಮತ್ತು ಸಿಬಿಎಸ್ ಇ ಬೋರ್ಡ್, ಜೆಇಇ, ನೀಟ್ ಮತ್ತು ಇತರ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆವು ಎಂದು ಶಿಕ್ಷಣ ಸಚಿವರು ಹೇಳಿದರು. 28 ರಾಷ್ಟ್ರಗಳಲ್ಲಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ ಇ) ಶಾಲೆಗಳನ್ನು ನಾವು ಯಶಸ್ವಿಯಾಗಿ ನಡೆಸುತ್ತಿದ್ದೇವೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.

ಗಣರಾಜ್ಯೋತ್ಸವದಲ್ಲಿ ಪ್ರದರ್ಶಿಸಿದ ಅಯೋಧ್ಯೆ ರಾಮ ಮಂದಿರ್ ಸ್ಥಬ್ದ ಚಿತ್ರಕ್ಕೆ ಪ್ರಥಮ ಸ್ಥಾನ

ಸಿಬಿಎಸ್ ಇ 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಯ ವೇಳಾಪಟ್ಟಿಯನ್ನು ಫೆಬ್ರವರಿ 2ರಂದು ಪ್ರಕಟಿಸಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ 'ನಿಶಾಂಕ್' ಹೇಳಿದರು.

ಈ ರಾಜ್ಯದಲ್ಲಿ ಇನ್ನು ಮುಂದೆ ಖಾಸಗಿ ವಲಯದ ಉದ್ಯೋಗಳಲ್ಲಿ ಸ್ಥಳೀಯರಿಗೆ ಶೇ 75 ರಷ್ಟು ಮೀಸಲಾತಿ

ಇಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ ಇಪಿ) 2020ರ ಹಿನ್ನೆಲೆಯಲ್ಲಿ 2021-22ನೇ ಶೈಕ್ಷಣಿಕ ವರ್ಷದ ಸಿಬಿಎಸ್ ಇ ಪಠ್ಯಕ್ರಮದಲ್ಲಿ ಬದಲಾವಣೆ ಗಳ ಕುರಿತು ಚರ್ಚಿಸಲು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ ಇ) ಸಹೋದಯ ಶಾಲಾ ಸಂಕೀರ್ಣಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳೊಂದಿಗೆ ನೇರ ಸಂವಾದ ಕಾರ್ಯಕ್ರಮ ವನ್ನು ಹಮ್ಮಿಕೊಂಡಿದ್ದರು. ಈ ವೇಳೆಯಲ್ಲಿ 1,000ಕ್ಕೂ ಹೆಚ್ಚು ಶಾಲಾ ಪ್ರಾಂಶುಪಾಲರು ವರ್ಚುವಲ್ ಇಂಟರಾಕ್ಟಿವ್ ಸೆಷನ್ ನಲ್ಲಿ ಭಾಗವಹಿಸಿದ್ದರು.

ಕೆಂಪು ಕೋಟೆಯ ಘಟನೆಗೆ ಸಂಬಂಧಿಸಿದಂತೆ ಪಂಜಾಬಿ ನಟ ದೀಪ್ ಸಿಧು ವಿರುದ್ಧ ಪ್ರಕರಣ ದಾಖಲು

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News