CBSE Class 12 Board Exam 2021 Cancelled: 12ನೇತರಗತಿ ಬೋರ್ಡ್ ಪರೀಕ್ಷೆಗಳು ರದ್ದು, ಪ್ರಧಾನಿ ಮೋದಿ ಸಭೆಯಲ್ಲಿ ನಿರ್ಧಾರ

CBSE Class 12 Board Exam 2021 Cancelled: CBSE 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸುವ ನಿರ್ಣಯವನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಆರೋಗ್ಯ ತುಂಬಾ ಮಹತ್ವದ್ದಾಗಿದೆ ಹಾಗೂ ಅದರಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

Written by - Nitin Tabib | Last Updated : Jun 1, 2021, 09:55 PM IST
  • CBSE 12ನೇ ತರಗತಿಯ ಪರೀಕ್ಷೆಗಳು ರದ್ದು.
  • ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ.
  • ಮಕ್ಕಳ ಸುರಕ್ಷಣೆ ಹಾಗೂ ಆರೋಗ್ಯ ಎಲ್ಲಕ್ಕಿಂತ ಮುಖ್ಯ ಎಂದ ಪ್ರಧಾನಿ ಮೋದಿ.
CBSE Class 12 Board Exam 2021 Cancelled: 12ನೇತರಗತಿ ಬೋರ್ಡ್ ಪರೀಕ್ಷೆಗಳು ರದ್ದು, ಪ್ರಧಾನಿ ಮೋದಿ ಸಭೆಯಲ್ಲಿ ನಿರ್ಧಾರ  title=
CBSE Class 12 Board Exam 2021 Cancelled (File Photo)

ನವದೆಹಲಿ : CBSE 12ನೇ ತರಗತಿಯ ವಿದ್ಯಾರ್ಥಿಗಳಿಗೊಂದು ಮಹತ್ವದ ನಿರ್ಧಾರ ಪ್ರಕಟವಾಗಿದೆ. ಕೊರೊನಾ ಹಿನ್ನೆಲೆ 12ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಅಂದರೆ, ಈ ವರ್ಷ 12ನೇ ತರಗತಿಯ ಪರೀಕ್ಷೆಗಳನ್ನು ಆಯೋಜಿಸಲಾಗುವುದಿಲ್ಲ. CBSE 12ನೇ ತರಗತಿಯ ಪರೀಕ್ಷೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರದ ಈ ನಿರ್ಧಾರದಿಂದ ಸಿಬಿಎಸಇ 12 ತರಗತಿಯ ಪರೀಕ್ಷೆಗೆ ಹಾಜರಾಗಬೇಕಿದ್ದ ಸುಮಾರು 12 ಲಕ್ಷ ವಿದ್ಯಾರ್ಥಿಗಳಿಗೆ ಭಾರಿ ನೆಮ್ಮದಿ ಸಿಕ್ಕಂತಾಗಿದೆ. ಇದೀಗ ಈ ವಿದ್ಯಾರ್ಥಿಗಳು ಯಾವುದೇ ಪರೀಕ್ಷೆ ಇಲ್ಲದೆ ಪಾಸಾಗಬಹುದು.

ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬಹುದು
ಈ ಕುರಿತು ಹೇಳಿಕೆ ನೀಡಿರುವ CBSE, ಕಳೆದ ವರ್ಷದಂತೆಯೇ ಒಂದು ವೇಳೆ ಯಾವುದೇ ವಿದ್ಯಾರ್ಥಿ ಪರೀಕ್ಷೆ ನೀಡಲು ಇಚ್ಛೆ ಹೊಂದಿದ್ದರೆ, ಅವರಿಗೆ ಪರಿಸ್ಥಿತಿ ಅನುಕೂಲವಾದ ಬಳಿಕ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗುವುದು ಎಂದಿದೆ

ಪ್ರಧಾನಿ ನರೇಂದ್ರ ಮೋದಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ
ಈ ಕುರಿತು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನೇತೃತ್ವದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯಲಾದ ಸಭೆಯಲ್ಲಿ CBSE ಚೇರ್ಮನ್ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಹ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಪ್ರಕಾಶ್ ಜಾವಡೆಕರ್ ಸೇರಿದಂತೆ ಇತರ ಹಿರಿಯ ಸಚಿವರು ಹಾಗೂ ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯ ಬಳಿಕ ನಿರ್ಣಯದ ಕುರಿತು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸುವ ನಿರ್ಣಯವನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.  ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಆರೋಗ್ಯ ತುಂಬಾ ಮಹತ್ವದ್ದಾಗಿದೆ ಹಾಗೂ ಅದರಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡುವ ಮೂಲಕ ಹೇಳಿಕೆ ನೀಡಿರುವ ಪ್ರಧಾನಿ ಮೋದಿ, " ಭಾರತ ಸರ್ಕಾರ 12ನೇ ತರಗತಿಯ CBSE ಪರೀಕ್ಷೆಗಳನ್ನು ರದ್ದುಗೊಳಿಸುವ ನಿರ್ಣಯ ಕೈಗೊಂಡಿದೆ.  ಈ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದ ಬಳಿಕ ನಾವು ಈ ನಿರ್ಧಾರವನ್ನು ಕೈಗೊಂಡಿದ್ದು, ಇದು ವಿದ್ಯಾರ್ಥಿಗಳ ಪಾಲಿಗೂ ಕೂಡ ಅನುಕೂಲಕರವಾಗಿದೆ. ಸರ್ಕಾರದ ಈ ನಿರ್ಣಯ ನಮ್ಮ ಯುವಕರ ಆರೋಗ್ಯದ ಜೊತೆಗೆ ಭವಿಷ್ಯವನ್ನು ಕೂಡ ರಕ್ಷಿಸಲಿದೆ' ಎಂದಿದ್ದಾರೆ.

ಕೇಂದ್ರ ಸರ್ಕಾರ ಕೈಗೊಂಡ ಈ ನಿರ್ಧಾರದ ಬಗ್ಗೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಂತಸ ವ್ಯಕ್ತಪಡಿಸಿದ್ದು, "ಮಕ್ಕಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿರುವುದು ತಮಗೆ ಖುಷಿ ತಂದಿದೆ.  12ನೇ ತರಗತಿಯ (CBSE 12th Board Exam) ಪರೀಕ್ಷೆಗಳು ನಡೆಯುತ್ತಿರುವ ಕಾರಣ ದೇಶದ 1.5 ಕೋಟಿ ವಿದ್ಯಾರ್ಥಿಗಳು ದುಃಖಿತರಾಗಿದ್ದರು. ದೇಶಾದ್ಯಂತ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ವಿದ್ಯಾಭ್ಯಾಸ ಹೇಗೆ ನಡೆಸಬೇಕು? ಎಂಬುದು ಅವರ ಪ್ರಶ್ನೆಯಾಗಿತ್ತು. ಪರೀಕ್ಷೆಯಲ್ಲಿ ಅವರ ಪ್ರಾಣಕ್ಕೂ ಕೂಡ ಅಪಾಯವಿತ್ತು" ಎಂದಿದ್ದಾರೆ. 

ಇದನ್ನೂ ಓದಿ-'80 ವಯಸ್ಸಿನವರು ಸಾಕಷ್ಟು ಬದುಕಿದ್ದಾರೆ, ಯುವಕರಿಗೆ ಲಸಿಕೆ ಹಾಕಿ' ಕೇಂದ್ರಕ್ಕೆ ದೆಹಲಿ HC ಸಲಹೆ

CM ಕೆಜ್ರಿವಾಲ್ ಹೇಳಿದ್ದೇನು?
12ನೇ ತರಗತಿಯ (12th Exam) ಪರೀಕ್ಷೆಗಳು ರದ್ದುಗೊಳಿಸಿದ ನಿರ್ಣಯದ ಕುರಿತು ಪ್ರತಿಕ್ರಿಯೆ ವ್ಯಕ್ತಪಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೆಜ್ರಿವಾಲ್, '12ನೇ ತರಗತಿಯ ರದ್ದಾಗಿರುವುದು ತಮಗೆ ಖುಷಿ ತಂದಿದೆ. ನಾವೆಲ್ಲರೂ ನಮ್ಮ ಮಕ್ಕಳ ಆರೋಗ್ಯದ ಕುರಿತು ಚಿಂತಿತರಾಗಿದ್ದೆವು, ಇದು ದೊಡ್ಡ ನಮ್ಮದಿಯಾಗಿದೆ' ಎಂದಿದ್ದಾರೆ.

ಇದನ್ನೂ ಓದಿ- SBI Alert:ಬ್ಯಾಂಕ್ ಸಮಯದಲ್ಲಿ ಬದಲಾವಣೆ, ಇಂದಿನಿಂದ ಜಾರಿಗೆ ಬಂದಿದೆ ಈ ಹೊಸ ವೇಳಾಪಟ್ಟಿ

ರಾಜ್ಯಗಳಿಂದ ಸಲಹೆ ಕೇಳಲಾಗಿತ್ತು
ಈ ಕುರಿತು ಮೇ 23ರಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯಗಳ ಎಲ್ಲ ಶಿಕ್ಷಣ ಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳು ಹೈ ಲೆವಲ್ ಸಭೆ ನಡೆದಿತ್ತು. ಈ ಸಭೆಯಲ್ಲಿ ಎಲ್ಲಾ ರಾಜ್ಯಗಳಿಗೆ ಪರೀಕ್ಷೆಯ ಆಯೋಜನೆಯ ಕುರಿತು ಸಲಹೆಗಳನ್ನು ಕೇಳಲಾಗಿತ್ತು. ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವ ಕುರಿತು ಸುಪ್ರೀಂ ಕೋರ್ಟ್ ನಲ್ಲಿಯೂ ಕೂಡ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಸಲಾಗಿದೆ. ಬಳಿಕ ಮೇ 31 ರಂದು ಕೇಂದ್ರ ಸರ್ಕಾರ ಉತ್ತರಿಸಲು ಸುಪ್ರೀಂ ಕೋರ್ಟ್ ಗೆ ಎರಡು ದಿನಗಳ ಕಾಲಾವಕಾಶ ಕೋರಿತ್ತು. 

ಇದನ್ನೂ ಓದಿ- ಭಾರತದಲ್ಲಿ ದೊರೆತೆ Covid-19 ರೂಪಾಂತರಿಗಳಿಗೆ ನಾಮಕರಣ ಮಾಡಿದ WHO

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News