CBSE Class 12 Exams 2021: CBSE 12ನೇ ತರಗತಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಹೈ ಲೆವಲ್ ಮೀಟಿಂಗ್ ಮುಕ್ತಾಯ... ಇಲ್ಲಿದೆ ನಿರ್ಧಾರ!

*/ /*-->*/ CBSE Class 12 Exams 2021 - 12 ನೇ ತರಗತಿ ಪರೀಕ್ಷೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವರೊಂದಿಗೆ ನಡೆಯುತ್ತಿದ್ದ ಉನ್ನತ ಮಟ್ಟದ ಸಭೆ ಮುಕ್ತಾಯಗೊಂಡಿದೆ. ಸಭೆಯ ವೇಳೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಪರೀಕ್ಷೆಗಳನ್ನು ನಡೆಸುವುದರ ಸಂಬಂಧ ಎಲ್ಲ ರಾಜ್ಯಗಳಿಂದ ಲಿಖಿತ ರೂಪದಲ್ಲಿ ಉತ್ತರ ನೀಡಲು ಕೋರಿದ್ದಾರೆ. ಆದರೆ, ಎರಡು ದಿನಗಳೊಳಗೆ ಅಂದರೆ ಮೇ 25 ರೊಳಗೆ ರಾಜ್ಯಗಳ ಶಿಕ್ಷಣ ಸಚಿವರು ಉತ್ತರಿಸಬೇಕಾಗಿದ್ದು, ಎಲ್ಲ ರಾಜ್ಯಗಳಿಂದ ಉತ್ತರ ಪಡೆದ ಬಳಿಕ ಮೇ 30 ರಂದು ಪರೀಕ್ಷೆಗಳ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎನ್ನಲಾಗಿದೆ.

Written by - Nitin Tabib | Last Updated : May 23, 2021, 08:44 PM IST
  • CBSE 12ನೇ ತರಗತಿಯ ಪರೀಕ್ಷೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ.
  • ವಸ್ತುನಿಷ್ಠ ಮಾದರಿಯ ಪ್ರಶ್ನೆಪತ್ರಿಕೆಗಳ ಮೂಲಕ ಪರೀಕ್ಷೆ ನಡೆಸಲಾಗುವುದು.
  • ದೆಹಲಿಯನ್ನು ಹೊರತುಪಡಿಸಿ ಉಳಿದ ಎಲ್ಲಾ ರಾಜ್ಯ ಸರ್ಕಾರಗಳ ಶಿಕ್ಷಣ ಮಂಡಳಿಗಳ ಒಪ್ಪಿಗೆ.
CBSE Class 12 Exams 2021: CBSE 12ನೇ ತರಗತಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಹೈ ಲೆವಲ್ ಮೀಟಿಂಗ್ ಮುಕ್ತಾಯ... ಇಲ್ಲಿದೆ ನಿರ್ಧಾರ! title=
CBSE Class 12 Exams 2021 (File Photo)

ನವದೆಹಲಿ: CBSE Class 12 Exams 2021 - ಕೊರೊನಾ ಮಹಾಮಾರಿಯ ಎರಡನೇ ಅಲೆಯ ಹಿನ್ನೆಲೆ ಇಡೀ ದೇಶಾದ್ಯಂತ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರಗಳು CBSE 12ನೇ ತರಗತಿಯ ತರಗತಿಯ ಪರೀಕ್ಷೆಗಳನ್ನು ಆಯೋಜಿಸಬೇಕೆ? ಈ ಪ್ರಶ್ನೆಗೆ ಉತ್ತರ ಹುಡುಕಲು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉನ್ನತ ಮಟ್ಟದ ಸಂಭೆ ನಡೆಸಲಾಗಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗಿರುವ ಈ ಸಭೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖರಿಯಾಲ್ ನಿಶಾಂಕ್ ಹಾಗೂ ವಿಭಿನ್ನ ರಾಜ್ಯಗಳ ಶಿಕ್ಷಣ ಸಚಿವರು ಶಾಮೀಲಾಗಿದ್ದರು. 

12 ನೇ ತರಗತಿಯ ಪರೀಕ್ಷೆಗಳಿಗೆ (CBSE Exam 2021) ಸಂಬಂಧಿಸಿದ ಊಹಾಪೋಹಗಳ ನಡುವೆ ಈ ಉನ್ನತ ಮಟ್ಟದ ಸಭೆಯನ್ನು ಕರೆಯಲಾಗಿತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮದ್ಯೆ ನಡೆದ ಈ  ಜಂಟಿ ಸಭೆಯಲ್ಲಿ ಪರೀಕ್ಷೆಗೆ ಸಂಬಂಧಿಸಿದ ಹಲವು ಪ್ರಮುಖ ಅಂಶಗಳನ್ನು ಚರ್ಚಿಸಲಾಗಿದೆ. ಮೂಲಗಳು ನೀಡಿರುವ ಮಾಹಿತಿ ಪ್ರಕಾರ, ದೇಶದಲ್ಲಿ 12ನೇ ತರಗತಿಯ ಬೋರ್ಡ್ ಪರೇಕ್ಸಿಎಗಲು ನಡೆಯಲಿವೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಚರ್ಚೆ ಮುಂದುವರೆಯಲಿದೆ. ಆದರೆ ಮೂಲಗಳು ನೀಡಿರುವ ವರದಿಗಳ ಪ್ರಕಾರ ಸದ್ಯದ ಪರಿಸ್ಥಿತಿಯಲ್ಲಿ ಪರೀಕ್ಷೆಗಳನ್ನು ನಡೆಸಲು ಕೆಲ ರಾಜ್ಯಗಳು ವಿರೋಧ ವ್ಯಕ್ತಪಡಿಸಿವೆ. ಆದರೆ, ಇನ್ನೊಂದೆಡೆ ಕೆಲ ರಾಜ್ಯಗಳು ಷರತ್ತುಗಳ ಆಧಾರದ ಮೇಲೆ ಪರೀಕ್ಷೆಗಳನ್ನು ನಡೆಸಲು ಸಿದ್ಧವಾಗಿವೆ ಎಂದೂ ಕೂಡ ಮೂಲಗಳು ತಿಳಿಸಿವೆ. ಆದರೆ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಅಂತಿಮ ನಿರ್ಣಯ ಕೈಗೊಳ್ಳಲಾಗಿಲ್ಲ ಎನ್ನಲಾಗಿದೆ.

ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಹೇಳಿದ್ದೇನು?
ಇನ್ನೊಂದೆಡೆ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ವಿದ್ಯಾರ್ಥಿಗಳಿಗೆ ಲಸಿಕೆ ಹಾಕದೆ ಪರೀಕ್ಷೆಗಳನ್ನು ನಡೆಸುವುದು ಒಂದು ದೊಡ್ಡ ತಪ್ಪು ಸಾಬೀತಾಗಲಿದೆ ಎಂದಿದ್ದಾರೆ. 12ನೇ ತರಗತಿಯ ವಿದ್ಯಾರ್ಥಿಗಳ ಲಸಿಕಾಕಾರಣಕ್ಕೆ ಸಂಬಂಧಿಸದಂತೆ ಕೇಂದ್ರ ಸರ್ಕಾರ, ತಜ್ಞರ  ಜೊತೆಗೆ ಚರ್ಚಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ-S Suresh Kumar : PUC ಪರೀಕ್ಷೆಗಳ ಬಗ್ಗೆ ಮಹತ್ವದ ಮಾಹಿತಿ : ಸಚಿವ ಸುರೇಶ್ ಕುಮಾರ್!

ಪ್ರಧಾನಿ ನರೇಂದ್ರ ಮೋದಿ ಅವರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ
ಮೂಲಗಳು ನೀಡಿರುವ ವರದಿಗಳ ಪ್ರಕಾರ ಈ ವರ್ಷ 12ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ನಡೆಸಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸಲು ನಡೆಸಿದ ಇಂದಿನ ಸಭೆಯಲ್ಲಿ ಯಾವುದೇ ಅಂತಿಮ ತೀರ್ಮಾನ ಕೈಗೊಳ್ಳಲಾಗಿಲ್ಲ ಮತ್ತು ಇಂದಿನ ಸಭೆಯ ವಿಸ್ತೃತ ವರದಿಯನ್ನು ಪ್ರಧಾನಿ ಕಾರ್ಯಾಲಯದ ಜೊತೆಗೆ ಹಂಚಿಕೊಳ್ಳಲಾಗುವುದು ಎನ್ನಲಾಗುತ್ತಿದೆ. ಮೇ 30 ರಂದು ಪುನಃ ರಾಜ್ಯ ಸರ್ಕಾರಗಳ ಶಿಕ್ಷಣ ಸಚಿವರುಗಳ ಜೊತೆಗೆ ಮತ್ತೊಂದು ಸುದ್ದಿನ ಸಭೆ ನಡೆಸಿ ಕೇಂದ್ರ ಸರ್ಕಾರ ಪರೀಕ್ಷೆಗಳ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎನ್ನಲಾಗಿದೆ.

ಸಭೆಯ ಬಳಿಕ ಟ್ವೀಟ್ ಮಾಡಿರುವ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖರಿಯಾಲ್ ನಿಶಾಂಕ್, ಎಲ್ಲ ರಾಜ್ಯಗಳಿಗೆ ಪರೀಕ್ಷೆಗಳನ್ನು ನಡೆಸುವ ಕುರಿತು ಮೇ 25 ರೊಳಗೆ ತಮ್ಮ ಸಲಹೆಗಳನ್ನು ಮತ್ತು ಅನಿಸಿಕೆಗಳನ್ನು ಲಿಖಿತ ರೂಪದಲ್ಲಿ ಹಂಚಿಕೊಳ್ಳಲು  ಆಗ್ರಹಿಸಿದ್ದಾರೆ.  ಈ ಉನ್ನತ ಮಟ್ಟದ ಸಭೆ ಅಂತಿಮ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ತುಂಬಾ ಸಹಾಯಕಾರಿ ಸಾಗೀತಾಗಲಿದೆ ಎಂದು ಅವರು ಹೇಳಿದ್ದಾರೆ. ಈ ಕುರಿತು ತಮ್ಮ ಟ್ವೀಟ್ ನಲ್ಲಿ ಬರೆದುಕೊಂಡಿರುವ ಅವರು , "ನಾವೂ ಸಾಮೂಹಿಕ ನಿರ್ಣಯದ ಮೂಲಕವೇ 12ನೇ ತರಗತಿಯ ಪರೀಕ್ಷೆಗಳ ಕುರಿತು ನಮ್ಮ ಅಂತಿಮ ನಿರ್ಣಯ ಕೈಗೊಳ್ಳಲಿದ್ದೇವೆ ಹಾಗೂ ವಿದ್ಯಾರ್ಥಿಗಳು ಹಾಗೂ ಪೋಷಕರ ಮನದಲ್ಲಿರುವ ಅನಿಶ್ಚಿತತೆಯನ್ನು ದೂರಗೊಳಿಸಲಿದ್ದೇವೆ" ಎಂದಿದ್ದಾರೆ.

ಇದನ್ನೂ ಓದಿ- ಕೊವಿಡ್-19 ಜಾಗತಿಕ ಮಹಾಮಾರಿ, ಆದರೆ Black Fungus ಭಾರತದಲ್ಲಿಯೇ ಏಕೆ ವೇಗವಾಗಿ ಹರಡುತ್ತಿದೆ?

ಕೊರೊನಾ ಕಾರಣ ಹಲವು ಪರೀಕ್ಷೆಗಳು ರದ್ದುಗೊಂಡಿವೆ 
ಕೊರೊನಾ ಮಹಾಮಾರಿಯ ಹಿನ್ನೆಲೆ ಎಲ್ಲ ರಾಜ್ಯಗಳ ಶೈಕ್ಷಣಿಕ ಮಂಡಳಿಗಳು, CBSE, ICSE ಮಂಡಳಿಗಳು 12ನೆ ತರಗತಿಯ ಪರೀಕ್ಷೆಗಳನ್ನು ಈಗಾಗಲೇ ಸ್ಥಗಿತಗೊಳಿಸಿವೆ. NTA ಮಾದರಿಯಲ್ಲಿ ಇತರೆ ರಾಷ್ಟ್ರೀಯ ಪರೀಕ್ಷೆಗಳನ್ನು ನಡೆಸುವ ಸಂಸ್ಥೆಗಳು ಕೂಡ ತಮ್ಮ ಪರೀಕ್ಷೆಯನ್ನು ಸ್ಥಗಿತಗೊಳಿಸಿವೆ ಎಂಬುದು ಇಲ್ಲಿ ಗಮನಾರ್ಹ.

ಇದನ್ನೂ ಓದಿ-ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಲಾಕ್‌ಡೌನ್‌ ವಿಸ್ತರಣೆ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News