Viral Video: ಮಹಿಳೆಗೆ ಅಮಾನುಷವಾಗಿ ಥಳಿಸಿದ ವಿಡಿಯೋ ವೈರಲ್, ಆಪ್ ಶಾಸಕಿ ವಿರುದ್ಧ ಆರೋಪ

ರಾಷ್ಟ್ರ ರಾಜಧಾನಿ ದೆಹಲಿಯ ಶಾಲಿಮಾರ್ ಬಾಗ್ ಪ್ರದೇಶದಲ್ಲಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸಿರುವ ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ.

Written by - Puttaraj K Alur | Last Updated : Dec 1, 2021, 08:10 AM IST
  • ಮಹಿಳೆಗೆ ಅಮಾನುಷವಾಗಿ ಥಳಿಸಿದ ಅಪರಿಚಿತ ದುಷ್ಕರ್ಮಿಗಳು
  • ದೆಹಲಿಯ ಶಾಲಿಮಾರ್ ಬಾಗ್ ಪ್ರದೇಶದಲ್ಲಿ ನ.19ರಂದು ಘಟನೆ
  • ಆಪ್ ಶಾಸಕಿ ವಂದನಾ ಕುಮಾರಿ ವಿರುದ್ಧ ಮಹಿಳೆಯ ಗಂಭೀರ ಆರೋಪ
Viral Video: ಮಹಿಳೆಗೆ ಅಮಾನುಷವಾಗಿ ಥಳಿಸಿದ ವಿಡಿಯೋ ವೈರಲ್, ಆಪ್ ಶಾಸಕಿ ವಿರುದ್ಧ ಆರೋಪ title=
ಮಹಿಳೆಗೆ ಥಳಿಸಿರುವ ವಿಡಿಯೋ ವೈರಲ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಶಾಲಿಮಾರ್ ಬಾಗ್ ಪ್ರದೇಶದಲ್ಲಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸಿರುವ(Thrashing Woman) ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾ(CCTV Footage)ದಲ್ಲೂ ಸೆರೆಯಾಗಿದೆ. ನವೆಂಬರ್ 19 ರಂದು ಈ ದಾಳಿ ನಡೆದಿತ್ತು. ಅಪರಿಚಿತರಿಂದ ಹಲ್ಲೆಗೊಳಗಾದ ಬಳಿಕ ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಿಸ್ಚಾರ್ಜ್ ಆದ ಬಳಿಕ ಆಮ್ ಆದ್ಮಿ ಪಕ್ಷದ (ಎಎಪಿ) ಸ್ಥಳೀಯ ಶಾಸಕಿ ತನ್ನನ್ನು ಥಳಿಸಲು ಗೂಂಡಾಗಳನ್ನು ಕಳುಹಿಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ರಾತ್ರಿ ವೇಳೆ ಕಾರಿನಿಂದ ಕೆಳಗೆ ಇಳಿದ ಬಳಿಕ ಇದ್ದಕ್ಕಿದ್ದಂತೆಯೇ ಪ್ರತ್ಯಕ್ಷವಾದ ಕೆಲವು ಪುರುಷರು ಮತ್ತು ಮಹಿಳೆಯರು ಸಂತ್ರಸ್ತ ಮಹಿಳೆ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ದೊಣ್ಣೆಯಿಂದ ಹೊಡೆಯುತ್ತಿರುವ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾ(CCTV Video)ದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾ(Social Media)ದಲ್ಲಿ ಸಖತ್ ವೈರಲ್ ಆಗಿದೆ.  

ಇದನ್ನೂ ಓದಿ: PM Kisan ರೈತರಿಗೆ ಸಿಹಿ ಸುದ್ದಿ : ಈ ದಿನ ನಿಮ್ಮ ಖಾತೆಗೆ ₹4,000 ಜಮಾ, ಲಿಸ್ಟ್ ಅಲ್ಲಿ ಹೆಸರು ಪರಿಶೀಲಿಸಿ

ಹಲ್ಲೆ ನಡೆಸಿ ಅಪರಿಚಿತ ದುಷ್ಕರ್ಮಿಗಳು ಎಸ್ಕೇಪ್!

ಸಂತ್ರಸ್ತ ಮಹಿಳೆಗೆ ಮನಬಂದಂತೆ ಹಲ್ಲೆ ನಡೆಸಿರುವ ಅಪರಿಚಿತ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಮಹಿಳೆಗೆ ಕಾಲಿನಿಂದ ನಿಲ್ಲಲೂ ಸಾಧ್ಯವಾಗದಷ್ಟು ಥಳಿಸಿದ್ದಾರೆ. ಮಂಗಳವಾರ ಅವರು ಗಾಲಿಕುರ್ಚಿಯಲ್ಲಿ ಆಸ್ಪತ್ರೆಯಿಂದ ಹೊರಬಂದ ತಕ್ಷಣ ಮೊದಲು ಸಿಸಿಟಿವಿ ಫೂಟೇಜ್ ಪಡೆದುಕೊಂಡಿದ್ದಾರೆ. ಇದರಿಂದ ಅಪರಾಧಿಗಳಿಗೆ ಕಾನೂನು ಸಹಾಯದ ಮೂಲಕ ಶಿಕ್ಷೆಯಾಗಬಹುದು. ತನ್ನ ಮೇಲೆ ಗೂಂಡಾಗಳನ್ನು ಬಿಟ್ಟು ಆಪ್ ಶಾಸಕಿ( AAP MLA Vandana) ಹಲ್ಲೆ ನಡೆಸಿದ್ದಾರೆಂದು ಮಹಿಳೆ ಆರೋಪಿಸಿದ್ದಾಳೆ.  

ವಿಡಿಯೋ ವೈರಲ್ ಆಗಿದೆ

ಮಹಿಳೆಯನ್ನು ಅಮಾನುಷವಾಗಿ ಥಳಿಸಿರುವ ಈ ವಿಡಿಯೋ ವೈರಲ್ ಆಗಿದ್ದು, ಆಮ್ ಆದ್ಮಿ ಪಕ್ಷದ (ಎಎಪಿ) ಶಾಲಿಮಾರ್ ಬಾಗ್‌ನ ಶಾಸಕಿ ವಂದನಾ ಕುಮಾರಿ(AAP MLA Vandana Kumari) ಈ ಕೃತ್ಯಕ್ಕೆ ಹೊಣೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಪೊಲೀಸರಿಗೆ ನೀಡಿರುವ ದೂರಿನಲ್ಲಿ ಶಾಸಕರ ಹೆಸರಿದ್ದರೂ ಅವರ ವಿರುದ್ಧ ಇನ್ನೂ ಎಫ್‌ಐಆರ್ ದಾಖಲಾಗಿಲ್ಲ.

ಇದನ್ನೂ ಓದಿ: ಕೃಷಿ ಕಾನೂನು ಹಿಂಪಡೆದ ಕೇಂದ್ರದಿಂದ MSP ಬಗ್ಗೆ ಮತ್ತೊಂದು ಹೆಜ್ಜೆ!

ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ

ಈ ಪ್ರಕರಣದಲ್ಲಿ ಇಬ್ಬರು ಮಹಿಳಾ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಪೊಲೀಸರು(Delhi Police) ತಿಳಿಸಿದ್ದಾರೆ. ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಇವರನ್ನು ಹೊರತುಪಡಿಸಿ ಉಳಿದ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News