ಆರು ನೂತನ ರಾಜ್ಯಪಾಲರನ್ನು ನೇಮಕ ಮಾಡಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ಶನಿವಾರದಂದು ಆರು ನೂತನ ರಾಜ್ಯಪಾಲರನ್ನು ನೇಮಕ ಮಾಡಿದೆ. 

Last Updated : Jul 20, 2019, 02:50 PM IST
ಆರು ನೂತನ ರಾಜ್ಯಪಾಲರನ್ನು ನೇಮಕ ಮಾಡಿದ ಕೇಂದ್ರ ಸರ್ಕಾರ  title=

ನವದೆಹಲಿ: ಕೇಂದ್ರ ಸರ್ಕಾರ ಶನಿವಾರದಂದು ಆರು ನೂತನ ರಾಜ್ಯಪಾಲರನ್ನು ನೇಮಕ ಮಾಡಿದೆ. 

ಮಧ್ಯಪ್ರದೇಶ, ಪಶ್ಚಿಮ ಬಂಗಾಳ ಬಿಹಾರ, ನಾಗಾಲ್ಯಾಂಡ್ ,ಉತ್ತರಪ್ರದೇಶ, ಬಿಹಾರ, ತ್ರಿಪುರಾ ರಾಜ್ಯಗಳಿಗೆ ಈಗ ನೇಮಕ ಮಾಡಲಾಗಿದೆ. ಮಧ್ಯಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರನ್ನು ಈಗ ಉತ್ತರ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ಬಿಹಾರದ ರಾಜ್ಯಪಾಲರಾಗಿದ್ದ ಲಾಲ್ಜಿ ಟಂಡನ್ ಅವರನ್ನು ಈಗ ಮಧ್ಯಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

 ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದ ಕೇಸರಿನಾಥ್ ತ್ರಿಪಾಠಿ ಬದಲಿಗೆ ಸುಪ್ರೀಂಕೋರ್ಟ್ ನ ಹಿರಿಯ ವಕೀಲ ಜಗದೀಪ್ ಧನ್ಕರ್ ಅವರನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ತ್ರಿಪುರಾದ ರಾಜ್ಯಪಾಲರಾಗಿ ರಮೇಶ್ ಬೈಸ್,  ಬಿಹಾರದ ರಾಜ್ಯಪಾಲರಾಗಿ ಶಾಸಕ ಫಾಗು  ಚೌಹಾನ್, ನಾಗಾಲ್ಯಾಂಡ್ ರಾಜ್ಯಪಾಲರಾಗಿ ಆರ್.ಎನ್ ರವಿ ಅವನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.  

 

 

 

Trending News