ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ (Corona) ವೈರಸ್ ಹೊಸ ಸ್ಟ್ರೈನ್ 'ಓಮಿಕ್ರಾನ್' (Omicron Variant) ಬಗ್ಗೆ ಪತ್ತೆಯಾದ ಹಿನ್ನೆಲೆ ತೀವ್ರವಾದ ನಿಯಂತ್ರಣ ಮತ್ತು ಸಕ್ರಿಯ ಕಣ್ಗಾವಲು ಮತ್ತು ಉತ್ತಮ ಲಸಿಕೆ ವ್ಯಾಪ್ತಿಯನ್ನು ಹೆಚ್ಚಿಸಲು ಕೇಂದ್ರವು ಎಲ್ಲಾ ರಾಜ್ಯಗಳಿಗೆ ತಿಳಿಸಿದೆ.
ಕೇಂದ್ರ (Centre) ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಕೇಂದ್ರಾಡಳಿತ ಪ್ರದೇಶಗಳು ಹಾಗೂ ರಾಜ್ಯಗಳಿಗೆ ಭಾನುವಾರ ಪತ್ರ ಬರೆದಿದ್ದಾರೆ.
ಸೋಂಕು ಹರಡುವಿಕೆ ಕುರಿತು ಸೂಕ್ಷ್ಮ ನಿಗಾ ವಹಿಸುವಂತೆ ಹಾಗೂ ಲಸಿಕೆ ನೀಡಿಕೆ ವೇಗ ಹೆಚ್ಚಿಸುವಂತೆ ನಿರ್ದೇಶನ ನೀಡಿದ್ದಾರೆ. ಸೋಂಕು ಹರಡುವಿಕೆ ನಿಯಂತ್ರಣ ಕ್ರಮಗಳನ್ನು ತೀವ್ರಗೊಳಿಸುವಂತೆ ಸೂಚಿಸಿದ್ದಾರೆ.
Union Health Secretary Rajesh Bhushan writes to all States/UTs over the #Omicron variant of COVID19, asks them to enforce intensive containment & active surveillance measures and also increase coverage of vaccination pic.twitter.com/5qxAHYhZtH
— ANI (@ANI) November 28, 2021
ಇದನ್ನೂ ಓದಿ-ಚೀನಾ ರಾಷ್ಟ್ರಪತಿ ಜಿನ್ಪಿಂಗ್ ಗೆ ಹೆದರಿ ಹೊಸ ಕೊರೊನಾ ತಳಿಗೆ 'ಒಮಿಕ್ರೋನ್' ಹೆಸರಿಡಲಾಗಿದೆಯಂತೆ!
ಪತ್ರದಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ರಾಜ್ಯಗಳು ಕೋವಿಡ್ (Covid-19) ಹಾಟ್‌ಸ್ಪಾಟ್‌ಗಳನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸಬೇಕಾಗಿದೆ ಎಂದು ಹೇಳಿದ್ದಾರೆ. ಅಂತರಾಷ್ಟ್ರೀಯ ವಿಮಾನಗಳನ್ನು ನಿಮ್ಮ ಮಟ್ಟದಲ್ಲಿ ಪರಿಶೀಲಿಸಬೇಕು ಮತ್ತು ಸಚಿವಾಲಯವು ಒದಗಿಸಿದ ಪ್ರೋಟೋಕಾಲ್ ಅನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ-Omicron Updates: ಭಾರತದ ಪಾಲಿಗೆ Omicron ಎಷ್ಟೊಂದು ಅಪಾಯಕಾರಿ, Vaccine ಎಷ್ಟು ಪರಿಣಾಮಕಾರಿ?
ಶನಿವಾರ ಅಧಿಕಾರಿಗಳ ಜತೆ ಸಭೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ಸೋಂಕು ಹರಡುವಿಕೆ ತಡೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅಲ್ಲದೆ, ಅಂತಾರಾಷ್ಟ್ರೀಯ ಸಂಚಾರ ನಿರ್ಬಂಧ ಸಡಿಲಿಸುವ ಬಗ್ಗೆ ಮರುಪರಿಶೀಲನೆ ನಡೆಸುವಂತೆ ತಿಳಿಸಿದ್ದರು.
ಇದನ್ನೂ ಓದಿ-ಆತಂಕ ಹೆಚ್ಚಿಸುತ್ತಿದೆ 'ಓಮಿಕ್ರಾನ್', ಪ್ರಯಾಣ ನಿಯಮಗಳನ್ನು ಬಿಗಿಗೊಳಿಸಿದ ಭಾರತ, COVID ನೆಗೆಟಿವ್ ವರದಿ ಕಡ್ಡಾಯ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.