INX ಮೀಡಿಯಾ ಪ್ರಕರಣ: ಸೆ.19ರವರೆಗೆ ತಿಹಾರ್ ಜೈಲಿಗೆ ಪಿ.ಚಿದಂಬರಂ

ಐಎನ್‌ಎಕ್ಸ್ ಮೀಡಿಯಾ ಪ್ರಕರಣದ ಆರೋಪಿಯಾಗಿರುವ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಸೆಪ್ಟೆಂಬರ್ 19ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. 

Last Updated : Sep 5, 2019, 06:25 PM IST
INX ಮೀಡಿಯಾ ಪ್ರಕರಣ: ಸೆ.19ರವರೆಗೆ ತಿಹಾರ್ ಜೈಲಿಗೆ ಪಿ.ಚಿದಂಬರಂ title=

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಪ್ರಕರಣದ ಆರೋಪಿಯಾಗಿರುವ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಸೆಪ್ಟೆಂಬರ್ 19ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈ ಮೂಲಕ 14 ದಿನಗಳ ಕಾಲ ಪಿ.ಚಿದಂಬರಂ ಅವರು ತಿಹಾರ್ ಜೈಲಿನಲ್ಲಿ ಬಂಧನಕ್ಕೆ ಒಳಪಡಲಿದ್ದಾರೆ.

ಇದಕ್ಕೂ ಮುನ್ನ ಗುರುವಾರ ಬೆಳಿಗ್ಗೆ 15 ದಿನಗಳ ಸಿಬಿಐ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸಿಬಿಐ ಪಿ.ಚಿದಂಬರಂ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಸಂದರ್ಭದಲ್ಲಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸುತ್ತಿದ್ದಂತೆಯೇ ಸುರಕ್ಷಿತ ಬಂಧನ ಕೋರಿ ಚಿದಂಬರಂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದರು. ಇದಕ್ಕೆ ಸಮ್ಮತಿಸಿದ ನ್ಯಾಯಾಲಯ ಪಿ.ಚಿದಂಬರಂ ಅವರಿಗೆ ಪ್ರತ್ಯೇಕ ಸೆಲ್ ಮತ್ತು ಭದ್ರತೆಯನ್ನು ಒದಗಿಸುವಂತೆ ಆದೇಶಿಸಿತು. 

ದೆಹಲಿಯ ಜೋರ್ ಬಾಗ್‌ನಲ್ಲಿರುವ ಅವರ ಮನೆಯಿಂದ ಆಗಸ್ಟ್ 21 ರಂದು ಚಿದಂಬರಂ ಅವರನ್ನು ಸಿಬಿಐ ಬಂಧಿಸಿತ್ತು.

ಏತನ್ಮಧ್ಯೆ, ಸಿಡಿಐ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಏರ್‌ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಚಿದಂಬರಂ ಮತ್ತು ಅವರ ಪುತ್ರ ಕಾರ್ತಿಗೆ ಗುರುವಾರ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ. 
 

Trending News